ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲ
ದೇಶದಲ್ಲಿ ಅಚ್ಚೇ ದಿನ್ ಎಲ್ಲಿದೆ ಎಂದು ಹುಡುಕಾಟ ನಡೆಸುವಂತಹ ವಾತಾವರಣ ನಿರ್ಮಾಣ
Team Udayavani, Apr 11, 2022, 2:58 PM IST
ದಾವಣಗೆರೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನಜೀವನಕ್ಕೆ ತೊಂದರೆ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಭಾನುವಾರ ಯುವ ಕಾಂಗ್ರೆಸ್‌ನ ರಾಷ್ಟ್ರ, ರಾಜ್ಯ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಭಾರೀ ಗಾತ್ರದ ಹೂವಿನ ಹಾರದೊಂದಿಗೆ ಸ್ವಾಗತಿಸಲಾಯಿತು. ಕೇಂದ್ರ ಸರ್ಕಾರದ ಪ್ರತಿಕೃತಿಗಳ ಮೆರವಣಿಗೆ ನಡೆಸಲಾಯಿತು. ಶ್ರೀರಾಮ ನವಮಿ ಅಂಗವಾಗಿ ಮಹಾನಗರ ಪಾಲಿಕೆ ಆವರಣದ ಹೊರ ಭಾಗದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಮಹಾನಗರಪಾಲಿಕೆ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಹಾನಗರ ಪಾಲಿಕೆ ಮುಂಭಾಗದಿಂದ ಅರುಣ ಚಿತ್ರಮಂದಿರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಚ್ಛೇ ದಿನ್ ತರಲಾಗುವುದು ಎಂಬ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ದಿನ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಜೀವನವನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಅಚ್ಛೇ ದಿನ್ ಎಲ್ಲಿವೆ ಎಂದು ಹುಡುಕುವಂತಹ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರ ಶೇ. 40 ರಷ್ಟು ಕಮೀಷನ್ ಸರ್ಕಾರವಾದರೆ, ಕೇಂದ್ರ ಸರ್ಕಾರ 80 ಪೈಸೆ ಸರ್ಕಾರ ಆಗಿದೆ. ಪ್ರತಿ ದಿನ ಪೆಟ್ರೋಲ್ ದರವನ್ನು 80 ಪೈಸೆಯಂತೆ ಹೆಚ್ಚಳ ಮಾಡುತ್ತಿದೆ. ನಿರಂತರವಾಗಿ ಇಂಧನ ದರ ಏರಿಕೆ ಮಾಡುತ್ತಿರುವ ಸರ್ಕಾರದ ನೀತಿಯಿಂದ ಜನರು ಸಮಸ್ಯೆಗೆ ಒಳಗಾಗುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಸದಸ್ಯ ಎ. ನಾಗರಾಜ್, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ನಿಖೀಲ್ ಕೊಂಡಜ್ಜಿ, ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಎಲ್.ಎಂ.ಎಚ್ ಸಾಗರ್, ರಂಜಿತ್, ತಿಪ್ಪೇಶ್, ಹರೀಶ್ ಬಸಾಪುರ, ಸಂತೋಷ್ ಇತರರು ಇದ್ದರು.
ನಾವು ಅಧಿಕಾರಕ್ಕೆ ಬಂದರೆ 35 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ದೊರೆಯುವಂತೆ ಮಾಡಲಾಗುವುದು, ಅಚ್ಛೇ ದಿನ್ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಭರವಸೆ ನೀಡಿದ್ದರು. ಅದು ಕಾರ್ಯರೂಪಕ್ಕೆ ಬಾರದೇ ಇರುವುದರಿಂದ ಅಚ್ಛೇ ದಿನ್ ಯಾವಾಗ ಬರುತ್ತದೋ ಎಂದು ದೇಶದ ಜನ ಕಾಯುವಂತಾಗಿದೆ. -ಸೈಯದ್ ಖಾಲಿದ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.