ಸರ್ಕಾರಿ ವಾಹನಗಳ ನೋಂದಣಿ ಸಂಖ್ಯೆ ಕನ್ನಡದಲ್ಲಿ: ರಮೇಶ್
Team Udayavani, Sep 15, 2017, 10:02 AM IST
ದಾವಣಗೆರೆ: ತಮ್ಮ ವಾಹನ ಸೇರಿದಂತೆ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿ ಸಂಖ್ಯೆಯನ್ನು ಕನ್ನಡದಲ್ಲಿ ಬರೆಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭರವಸೆ ನೀಡಿದ್ದಾರೆ.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಜಾಗೃತಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು,ತಾವು ಬಳಸುವ ಸರ್ಕಾರಿ ವಾಹನ ಸೇರಿದಂತೆ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಯನ್ನು ಕನ್ನಡೀಕರಣಗೊಳಿಸಲಾಗುವುದು ಎಂದರು.
ಸಭೆಯ ಆರಂಭದಲ್ಲಿಯೇ ಜಾಗೃತಿ ಸಮಿತಿ ಸದಸ್ಯ ಜಿ.ಎಂ. ಹನುಮಂತಪ್ಪ ವಿಷಯ ಪ್ರಸ್ತಾಪಿಸಿ, ಸರ್ಕಾರಿ ವಾಹನಗಳ ನೋಂದಣಿ ಸಂಖ್ಯೆ ಕನ್ನಡದಲ್ಲಿರಬೇಕು. ಜಿಲ್ಲಾಧಿಕಾರಿಗಳ ವಾಹನ ನೋಂದಣಿ ಸಂಖ್ಯೆ ಸಹ ಇಂಗ್ಲಿಷ್‌ನಲ್ಲಿದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಂಜುನಾಥ್ ಕುರ್ಕಿ, ನವೆಂಬರ್ 1ರ ಒಳಗೆ ನಗರ ಹಾಗೂ ಜಿಲ್ಲೆಯ ವಿವಿಧ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೆ ಪ್ರದರ್ಶಸಿಸುವಂತೆ ಕ್ರಮ ಕೈಗೊಳ್ಳಬೇಕು. ಇಡೀ ತಿಂಗಳು ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ, ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶನವಾಗುವಂತೆ ಆದೇಶ ಮಾಡಬೇಕೆಂದರು.
ರ್ಷ ಮೇಲ್ಪಟ್ಟವರ ಆಯ್ಕೆ ಸೂಕ್ತ. ಕಿರು ವಯಸ್ಸಿನವರಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿವೆ. ಹಾಗೂ ಆಯ್ಕೆ ಸಮಿತಿಯಲ್ಲಿ ಗರಿಷ್ಠ 5 ಮಂದಿ ಇರುವಂತೆ ಸಿಮೀತಗೊಳಿಸುವುದು ಒಳ್ಳೆಯದು ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೇವಣಸಿದ್ದಪ್ಪ ಅಂಗಡಿ ಮಾತನಾಡಿ, ಡಾ| ಸರೋಜಿನಿ ಮಹಿಷಿನಿ ವರದಿಯ
ಅಂಶಗಳು ಕೈಗಾರಿಕೆಗಳಲ್ಲಿ ಕಡ್ಡಾಯವಾಗಿ ಜಾರಿಯಾಗುವಂತೆ ಕ್ರಮ ವಹಿಸಬೇಕು ಎಂದರು.
ಇನ್ನೋರ್ವ ಸದಸ್ಯ ಡಿ.ಎನ್. ಮಂಜಪ್ಪ ಮಾತನಾಡಿ, ಬ್ಯಾಂಕ್‌ಗಳಲ್ಲಿ ಎಲ್ಲಾ ನಮೂನೆಗಳು ಇಂಗ್ಲೀಷ್‌ನಲ್ಲಿವೆ. ಸರ್ಕಾರದ ಆದೇಶ ತ್ರಿಭಾಷ ಸೂತ್ರದ ಅನ್ವಯ ಮೊದಲು ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕೆಂದಿದೆ. ಹೊರ ರಾಜ್ಯದಿಂದ ಬಂದಿರುವ ಬ್ಯಾಂಕ್ ಅಧಿಕಾರಿಗಳು ಕನ್ನಡ ಕಲಿತು ಕನ್ನಡಿಗರೊಂದಿಗೆ ಕನ್ನಡದಲ್ಲಿಯೆ ವ್ಯವಹರಿಸಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಅಶ್ವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ತ್ರಿಪುಲಾಂಬ, ತಾಪಂ ಇಒ ಪ್ರಭುದೇವ, ಕನ್ನಡಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಕಾಶ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.