ಮೊದಲ ಹಂತದ ಗ್ರಾಪಂ ಫೈಟ್‌ಗೆ ಅಖಾಡ ಸಿದ್ಧ

ಮೂರು ತಾಲೂಕುಗಳ ಗ್ರಾಪಂಗಳಿಗೆ ಚುನಾವಣೆ,88 ಗ್ರಾಪಂಗಳ 211 ಸ್ಥಾನಗಳಿಗೆ ಅವಿರೋಧ ಆಯ್ಕೆ

Team Udayavani, Dec 16, 2020, 5:49 PM IST

ಮೊದಲ ಹಂತದ ಗ್ರಾಪಂ ಫೈಟ್‌ಗೆ ಅಖಾಡ ಸಿದ್ಧ

ದಾವಣಗೆರೆ: ಜಿಲ್ಲೆಯ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲೂಕುಗಳ 88 ಗ್ರಾಮ ಪಂಚಾಯತ್‌ಗಳ ಚುನಾವಣಾ ಅಖಾಡ ಸಿದ್ಧಗೊಂಡಿದೆ.

ಆಧಿಕಾರಾವಧಿ ಮುಗಿಯದ ದಾವಣಗೆರೆ ತಾಲೂಕಿನ ಬೇತೂರು, ಮಾಯಕೊಂಡ ಗ್ರಾಮಪಂಚಾಯತ್‌ ಹಾಗೂ ಈಚೆಗೆ ಹೊನ್ನಾಳಿಪುರಸಭೆ ತೆಕ್ಕೆಗೆ ಸೇರ್ಪಡೆಯಾಗಿರುವ ಎಚ್‌. ಕಡದಕಟ್ಟೆಹೊರತುಪಡಿಸಿ ಎಲ್ಲಾ ಕಡೆ ಡಿ. 22 ರಂದು ಜಿದ್ದಾಜಿದ್ದಿನ ಲೋಕಲ್‌ ಫೈಟ್‌ ನಡೆಯಲಿದೆ. ದಾವಣಗೆರೆ, ಹೊನ್ನಾಳಿ, ಜಗಳೂರು ತಾಲೂಕಿನಗ್ರಾಮ ಪಂಚಾಯತ್‌ ಚುನಾವಣೆಗೆ ಡಿ. 7 ರಂದುಅಧಿಸೂಚನೆ ಹೊರಡಿಸಲಾಗಿತ್ತು. 11ರವರೆಗೆ ನಾಮಪತ್ರ ಸಲ್ಲಿಕೆಗೆ ಹಾಗೂ ಹಿಂಪಡೆಯಲು 14ರವರೆಗೆಅವಕಾಶ ನೀಡಲಾಗಿತ್ತು. ಮೂರು ತಾಲೂಕುಗಳ 88ಗ್ರಾಮ ಪಂಚಾಯತ್‌ಗಳ 1301 ಸ್ಥಾನಗಳಿಗೆ 4457ನಾಮಪತ್ರ ಸಲ್ಲಿಕೆಯಾಗಿದ್ದವು. ನಾಮಪತ್ರ ಪರಿಶೀಲನೆವೇಳೆ 101 ನಾಮಪತ್ರ ತಿರಸ್ಕೃತಗೊಂಡಿದ್ದವು. 4235 ನಾಮಪತ್ರ ಕ್ರಮಬದ್ಧವಾಗಿದ್ದವು. ಡಿ. 14 ರಂದುನಾಮಪತ್ರ ಸಲ್ಲಿಕೆ ಅವಧಿ ನಂತರ 1087 ಕ್ಷೇತ್ರಗಳಿಗೆ1511 ಪುರುಷರು, 1470 ಮಹಿಳೆಯರು ಸೇರಿದಂತೆ2981 ಅಭ್ಯರ್ಥಿಗಳು ಗ್ರಾಮ ಪಂಚಾಯತ್‌ ಪ್ರವೇಶದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

88 ಗ್ರಾಪಂಗಳ 1301 ಸ್ಥಾನಗಳಲ್ಲಿ 211 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಲೋಕಿಕೆರೆ, ಕೈದಾಳ್‌ ಒಳಗೊಂಡಂತೆ ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯೇ ಆಗಿಲ್ಲ. ದಾವಣಗೆರೆ ತಾಲೂಕಿನ 38 ಗ್ರಾಮ ಪಂಚಾಯತ್‌ನ 581 ಸ್ಥಾನಗಳಲ್ಲಿ 2 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಆಗಿಲ್ಲ. 80 ಸ್ಥಾನಗಳಿಗೆ ಆವಿರೋಧ ಆಯ್ಕೆಯಾಗಿವೆ.

2015ರ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ತಾಲೂಕಿನಶ್ರೀರಾಮನಗರ ಗ್ರಾಮ ಪಂಚಾಯತ್‌ನ 5 ಸ್ಥಾನಗಳಿಗೂ ಅವಿರೋಧ ಅಯ್ಕೆಯಾಗಿದೆ. ಬಹುಸಂಖ್ಯೆಯಲ್ಲಿರುವ ಒಂದೇ ಸಮುದಾಯದ ಎಲ್ಲಾ ಮುಖಂಡರು ಒಗ್ಗೂಡಿ ಸಾಕಷ್ಟು ಪರಾಮರ್ಶೆನಡೆಸಿ ಒಮ್ಮತದಿಂದ ಐವರನ್ನು ಆವಿರೊಧ ಆಯ್ಕೆ ಮಾಡಿದ್ದಾರೆ. ಕಳೆದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪರಾಭವಗೊಂಡವರನ್ನೇ ಗುರುತಿಸಿ ಈ ಬಾರಿ ಅವಿರೋಧ ಆಯ್ಕೆಮಾಡಿರುವುದು ವಿಶೇಷ. ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಪಂನ ಒಂದನೇ ವಾರ್ಡ್‌ನಿಂದಪತ್ರಕರ್ತರೊಬ್ಬರ ಪತ್ನಿ ಸಹ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೊನ್ನಾಳಿ ತಾಲೂಕಿನ 28 ಗ್ರಾಪಂಗಳ ಪೈಕಿ 323 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಆಗಿಲ್ಲ. 31ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.ಜಗಳೂರು ತಾಲೂಕಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 100 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.ತಾಲೂಕಿನ 22 ಗ್ರಾಮ ಪಂಚಾಯತ್‌ಗಳ 397ಸ್ಥಾನಗಳಲ್ಲಿ 100 ಸ್ಥಾನಗಳಿಗೆ ಅವಿರೋಧ ಆಯ್ಕೆನಡೆದಿದೆ. ಮೂರು ತಾಲೂಕುಗಳ 211 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿರುವ ಹಿನ್ನೆಲೆಯಲ್ಲಿ ಬಾಕಿ ಇರುವ 1087 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ದಾವಣಗೆರೆ ತಾಲೂಕಿನ 38 ಗ್ರಾಪಂಗಳ 499, ಹೊನ್ನಾಳಿ ತಾಲೂಕಿನ 28 ಗ್ರಾಪಂಗಳ 291, ಜಗಳೂರು ತಾಲೂಕಿನ 22 ಗ್ರಾಪಂಗಳ 297 ಸ್ಥಾನಗಳಿಗಾಗಿ ಅಭ್ಯರ್ಥಿಗಳಲ್ಲಿ ಪೈಪೋಟಿ ಏರ್ಪಟ್ಟಿದೆ.

ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳು :

ದಾವಣಗೆರೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ 413, ಹೊನ್ನಾಳಿ ತಾಲೂಕಿನಲ್ಲಿ 242, ಜಗಳೂರು ತಾಲೂಕಿನಲ್ಲಿ 239, ದಾವಣಗೆರೆ ತಾಲೂಕಿನಲ್ಲಿ ಪರಿಶಿಷ್ಟ ಪಂಗಡದ 179, ಹೊನ್ನಾಳಿಯಲ್ಲಿ 81,ಜಗಳೂರಿನಲ್ಲಿ 188, ದಾವಣಗೆರೆ ತಾಲೂಕಿನಲ್ಲಿ ಹಿಂದುಳಿದ ವರ್ಗ-ಅ 121, ಹೊನ್ನಾಳಿಯಲ್ಲಿ 77, ಜಗಳೂರಿನಲ್ಲಿ 16, ದಾವಣಗೆರೆ ತಾಲೂಕಿನಲ್ಲಿ ಹಿಂದುಳಿದ ವರ್ಗ-ಬ 21, ಹೊನ್ನಾಳಿಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಗಳೂರಿನಲ್ಲಿ ಯಾರು ಇಲ್ಲ. ದಾವಣಗೆರೆ ತಾಲೂಕಿನಲ್ಲಿ ಸಾಮಾನ್ಯ ವರ್ಗದ715, ಹೊನ್ನಾಳಿಯಲ್ಲಿ 415, ಜಗಳೂರಿನಲ್ಲಿ 318 ಜನರು ಆಕಾಂಕ್ಷಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.-

-ರಾ. ರವಿಬಾಬು

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.