ಗ್ರಾಪಂ ನೌಕರರ ಜಿಪಂ ಚಲೋ ಪ್ರತಿಭಟನೆ

•ಬಾಕಿ ವೇತನ ಪಾವತಿ-ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ•ಚರ್ಚೆಗೆ ಜೂ.29ಕ್ಕೆ ಸಭೆ

Team Udayavani, Jun 11, 2019, 12:39 PM IST

dg-tdy-4..

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಸೋಮವಾರ ಜಿಲ್ಲಾ ಪಂಚಾಯತಿ ಚಲೋ ನಡೆಸಿದ ಸಂದರ್ಭ

ದಾವಣಗೆರೆ: ಗ್ರಾಮ ಪಂಚಾಯತಿ ನೌಕರರಿಗೆ ಬಾಕಿ ಉಳಿದಿರುವ ವೇತನವನ್ನು ತೆರಿಗೆಯ ಸಂಗ್ರಹದಲ್ಲಿ ಗ್ರಾಮ ಪಂಚಾಯತಿಗಳು ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾ ಪಂಚಾಯತಿ ಚಲೋ ಹಮ್ಮಿಕೊಂಡು ಪ್ರತಿಭಟನೆ ನಡೆಸಿದರು.

ನಗರದ ವಿಮಾನಮಟ್ಟಿ ಬಳಿ ಜಮಾಯಿಸಿದ ಗ್ರಾಮ ಪಂಚಾಯತಿ ನೌಕರರು, ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾ ಪಂಚಾಯತಿ ಕಚೇರಿಗೆ ತೆರಳಿ ಉಪ ಕಾರ್ಯದರ್ಶಿ ಎಲ್. ಭೀಮಾನಾಯ್ಕ ಅವರಿಗೆ ಮನವಿ ಸಲ್ಲಿಸಿದರು.

ಅಪರ ಕಾರ್ಯದರ್ಶಿ ವೈ.ಎಸ್‌. ಸ್ವಾಮಿ ವರದಿಯಂತೆ ಎಲ್ಲಾ ನೌಕರರಿಗೆ ಏಕಕಾಲಕ್ಕೆ ಅನುಮೋದನೆ ನೀಡಬೇಕು. ಬಿಲ್ ಕಲೆಕ್ಟರ್‌ ಹುದ್ದೆಯಿಂದ ಗ್ರೇಡ್‌-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು 2019ರ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವುದು ಮತ್ತು ಪಿಡಿಓ ಬಡ್ತಿ ಗ್ರೇಡ್‌ -4ರ ಭರ್ತಿ ನೀಡಿ, ಖಾಲಿಯಾದ ಗ್ರೇಡ್‌ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇ.ಎಫ್‌.ಎಂ.ಎಸ್‌ ಸೇರದಿರುವ ನೌಕರರನ್ನು ಕೂಡಲೇ ಪಂಚ ತಂತ್ರಾಂಶದಲ್ಲಿ ಸೇರಿಸಬೇಕು. ಬಾಕಿ ಉಳಿದಿರುವ ವೇತನ ತೆರಿಗೆ ಸಂಗ್ರಹದಲ್ಲಿ ಕೊಡಬೇಕು. ಎಲ್ಲಾ ನೌಕರರಿಗೂ ಸೇವಾ ಪುಸ್ತಕ ತೆರೆಯಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಉಪಧನ ಕೊಡಬೇಕು. ಗ್ರಾಮ ಪಂಚಾಯತಿಯಲ್ಲಿ ನಿರ್ವಹಿಸುತ್ತಿರುವ ನೀರುಗಂಟಿಗಳಿಗೆ ವಾರಕ್ಕೊಂದು ವೇತನ ಸಹಿತ ರಜೆ ನೀಡಬೇಕೆಂದು ಒತ್ತಾಯಿಸಿದರು.

ಎಲ್ಲಾ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಗ್ರಾಮ ಪಂಚಾಯತಿ ನೌಕರರಿಗೂ ಸಿಗುವಂತಾಗಬೇಕು. ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಬಡ್ತಿಗೆ ಪರಿಗಣಿಸಿ ಹೆಚ್ಚುವರಿ ಆಪರೇಟರ್‌ಗಳಿಗೆ ಅನುಮೋದನೆ ನೀಡಬೇಕು. ಈ ಎಲ್ಲಾ ಬೇಡಿಕೆ ಈಡೇರಿಕೆಗಾಗಿ ಚರ್ಚಿಸುವ ನಿಮಿತ್ತ ಗ್ರಾಮ ಪಂಚಾಯತಿ ನೌಕರರ ಸಂಘ ಹಾಗೂ ಜಿಲ್ಲಾ ಸಮಿತಿ, ತಾಲೂಕು ಪದಾಧಿಕಾರಿಗಳ ಜತೆ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಎಲ್. ಭೀಮಾನಾಯ್ಕ ಅವರು ಜೂ. 29ರಂದು ಜಿಲ್ಲಾ ಪಂಚಾಯತಿಯಲ್ಲಿ ನೌಕರರ ಬೇಡಿಕೆ ಸಂಬಂಧ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಸಮಿತಿಯ ಆರ್‌.ಎಸ್‌. ಬಸವರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಸಿ. ಶ್ರೀನಿವಾಸಚಾರ್‌, ಜಿಲ್ಲಾಧ್ಯಕ್ಷ ಕೆ.ಎಂ. ಉಮೇಶ್‌, ಗುಡಾಳ್‌ ತಿಪ್ಪಣ್ಣ, ಮಂಜುನಾಥ್‌, ಸಂಪತ್‌ಕುಮಾರ್‌, ಹೇಮಣ್ಣ, ಶ್ರೀನಿವಾಸ್‌ ದೇವಿಕೆರೆ, ಮಾಲತೇಶ್‌, ನಾಗರಾಜ್‌, ಟಿ. ಮಾಲತೇಶ್‌, ಹನುಮಂತಪ್ಪ, ಉಮೇಶ್‌, ಶೇಖರಪ್ಪ, ಬಸವರಾಜ್‌ ಬೇತೂರು, ಕರಿಬಸಪ್ಪ, ಬಾತಿರಾಜು, ಅತ್ತಿಗೆರೆ ತಿಪ್ಪೇಶ್‌, ಕೃಷ್ಣಮೂರ್ತಿ ಭೀಮಾನಾಯ್ಕ, ಎಸ್‌. ಓಂಕಾರಪ್ಪ, ಸಿ.ಎಂ. ಚೇತನ್‌, ಪ್ರಸನ್ನ, ಗೋವಿಂದ್‌ರಾಜ್‌ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.