ನಿವೃತ್ತಿಗೂ ಮೊದಲೇ ತಪ್ಪಿತಸ್ಥ ನೌಕರರಿಗೆ ಶಾಸ್ತಿ

ನಿವೃತ್ತಿ ಅಂಚಿನಲ್ಲಿರುವವರ ತ್ವರಿತ ವಿಚಾರಣೆಗೆ ಸೂಚನೆ

Team Udayavani, Apr 14, 2022, 11:17 AM IST

4

ದಾವಣಗೆರೆ: ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ತೋರಿದ ದುರ್ನಡತೆ ಆರೋಪಕ್ಕೆ ಸಂಬಂಧಿಸಿ ವಯೋನಿವೃತ್ತಿ ಹೊಂದುವವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ನಿವೃತ್ತಿಗೂ ಮೊದಲೇ ತಪ್ಪಿತಸ್ಥ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರ ಸೇವೆಯಲ್ಲಿರುವಾಗ ಎಸಗಿದ ದುರ್ನಡತೆಗೆ ಸಂಬಂಧಿಸಿ ಆತ ನಿವೃತ್ತಿ ಹೊಂದುವವರೆಗೆ ಯಾವುದೇ ಕ್ರಮ ವಹಿಸುತ್ತಿಲ್ಲ. ಅಥವಾ ನಿವೃತ್ತಿಯ ನಿಕಟಪೂರ್ವದ ಕೆಲವೇ ದಿನಗಳಲ್ಲಿ ಶಿಸ್ತು ಕ್ರಮ ಆರಂಭಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇದರಿಂದ ತಪ್ಪಿತಸ್ಥ ಸರ್ಕಾರಿ ನೌಕರನ ವಿರುದ್ಧ ಪರಿಣಾಮಕಾರಿಯಾಗಿ ಶಿಸ್ತು ಕ್ರಮ ಕೈಗೊಳ್ಳಲು ಆಗುತ್ತಿಲ್ಲ. ಇದರಿಂದ ನೌಕರನು ಶಿಸ್ತು ಕ್ರಮದಿಂದ ರಕ್ಷಿಸಲ್ಪಡುತ್ತಿದ್ದು ಇದು ಸರ್ಕಾರದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾವುದೇ ಸರ್ಕಾರಿ ನೌಕರ ಎಸಗಿದ ದುರ್ನಡತೆಯು ಕೂಡಲೇ ಶಿಸ್ತು ಪ್ರಾಧಿಕಾರಿಗಳ ಗಮನಕ್ಕೆ ಬಂದು ಆತ ನಿವೃತ್ತಿ ಅಂಚಿನಲ್ಲಿದ್ದರೆ ಸಂಬಂಧಪಟ್ಟ ಶಿಸ್ತು ಪ್ರಾಧಿಕಾರಗಳು ಅನಗತ್ಯ ವಿಳಂಬ ಮಾಡದೆ ಅಂಥ ನೌಕರನ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು. ಕಾಲಮಿತಿ ಮೀರಿದ ಪ್ರಕರಣಗಳಲ್ಲಿನ ವಿಳಂಬಕ್ಕೆ ಕಾರಣರಾದ ಜವಾಬ್ದಾರಿ ಅಧಿಕಾರಿ ಇಲ್ಲವೇ ನೌಕರರನ್ನು ಗುರುತಿಸಿ ಅವರ ವಿರುದ್ಧವೂ ಶಿಸ್ತಿನ ಕ್ರಮ ಜರುಗಿಸಬೇಕು ಎಂದು ಸಹ ಸೂಚಿಸಲಾಗಿದೆ.

ಒಟ್ಟಾರೆ ದುರ್ನಡೆ ತೋರುವ ನೌಕರರ ಮೇಲೆ ನಿವೃತ್ತಿಗೂ ಮೊದಲೇ ಶಿಸ್ತು ಕ್ರಮ ಆಗಬೇಕು. ತಪ್ಪು ಮಾಡಿಯೂ ಶಿಸ್ತು ಕ್ರಮದಿಂದ ನೌಕರರು ತಪ್ಪಿಸಿಕೊಂಡರೆ ಅದು ಇತರ ನೌಕರರ ಜತೆಗೆ ಸರ್ಕಾರದ ದಿಕ್ಕು ತಪ್ಪಿಸುವ ಸಾಧ್ಯತೆಯೂ ಇದೆ.

ಪ್ರಕರಣ ವಾಪಸ್ಸೆ ಹೆಚ್ಚು:

ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಅವರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆಗಾಗಿ ಸೂಕ್ತ ಸಮಯದಲ್ಲಿ ಅಂದರೆ ಅಂಥ ನೌಕರ ಸೇವೆಯಿಂದ ನಿವೃತ್ತಿ ಹೊಂದುವ ಸಾಕಷ್ಟು ಪೂರ್ವದಲ್ಲಿಯೇ ಶಿಸ್ತುಕ್ರಮ ಆರಂಭಿಸಬೇಕು. ಇಲ್ಲದಿದ್ದರೆ ನಿವೃತ್ತಿ ನಂತರ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957ರಡಿಯಲ್ಲಿ ಕೈಗೊಳ್ಳಲು ಅವಕಾಶವಿಲ್ಲ. ಆದರೆ ಅಂಥ ಶಿಸ್ತು ಕ್ರಮಗಳನ್ನು ಕರ್ನಾಟಕ ನಾಗರಿಕ ಸೇವಾ ನಿಯಮ 214ರ ಅಡಿ ಮಾತ್ರ ಕೈಗೊಳ್ಳಲು ಅವಕಾಶವಿದೆ. ಆದರೆ ಸರ್ಕಾರಿ ನೌಕರನು ನಿವೃತ್ತಿಯಾದ ಬಳಿಕ ಅವನ ಮೇಲೆ ಹೂಡಲಾಗಿದ್ದ ಇಲಾಖಾ ವಿಚಾರಣೆಗಳಲ್ಲಿ ಸರ್ಕಾರಕ್ಕೆ “ಆತನಿಂದ ಆರ್ಥಿಕ ಹಾನಿಯಾಗಿಲ್ಲ’ ಎಂಬ ಕಾರಣದ ಮೇಲೆ ಹಿಂದಕ್ಕೆ ಪಡೆಯುವ ಪ್ರಸ್ತಾವನೆಗಳೇ ಹೆಚ್ಚಾಗಿ ಸರ್ಕಾರಕ್ಕೆ ಬರುತ್ತಿವೆ. ಇದು ಸರಿಯಲ್ಲ. ಅಲ್ಲದೇ ಸರ್ಕಾರಿ ನೌಕರ ನಿವೃತ್ತಿ ಹೊಂದುವ ಕೆಲವೇ ದಿನಗಳ ಮೊದಲು ಶಿಸ್ತು ಕ್ರಮದ ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿರುವುದು ಸಹ ಸರಿಯಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಲವು ಸಂದರ್ಭದಲ್ಲಿ ದುರ್ನಡತೆಯು ಸರ್ಕಾರಿ ನೌಕರ ನಿವೃತ್ತಿ ಹೊಂದಿದ ನಾಲ್ಕು ವರ್ಷಕ್ಕೂ ಹಿಂದಿನ ಅವಧಿಗೆ ಸಂಬಂಧಿಸಿದ್ದು ಎಂಬ ಕಾರಣಕ್ಕಾಗಿ ಆತನ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮ 214 (ಬಿ) ಅಡಿಯಲ್ಲಿಯೂ ಶಿಸ್ತು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂಬ ನಿಲುವಿಗೆ ಬರಲಾಗುತ್ತಿದೆ. ಆದ್ದರಿಂದ ಸರ್ಕಾರಿ ನೌಕರರ ದುರ್ನಡತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿನ ಶಿಸ್ತು ಕ್ರಮದ ಪ್ರಸ್ತಾವನೆಗಳನ್ನು ಸಂಬಂಧಿಸಿದ ನೌಕರ ವಯೋನಿವೃತ್ತಿ ಹೊಂದುವ ಕನಿಷ್ಟ 30 ದಿನಗಳ ಮೊದಲೇ ಕರಡು ದೋಷಾರೋಪಣೆ ಪಟ್ಟಿ ಮತ್ತು ಇನ್ನಿತರ ಪೂರಕ ದಾಖಲೆ ಪತ್ರಗಳನ್ನು ಶಿಸ್ತು ಪ್ರಾಧಿಕಾರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಸಕಾಲದಲ್ಲಿ ಇಲಾಖೆ ವಿಚಾರಣೆ ಆರಂಭಿಸಿ ದೋಷಾರೋಪಣೆ ಪಟ್ಟಿ ಮತ್ತು ಇನ್ನಿತರ ಪೂರಕ ದಾಖಲೆ ಪತ್ರಗಳನ್ನು ಶಿಸ್ತು ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಶಿಸ್ತು ಪ್ರಾಧಿಕಾರಿಗಳು ನಿವೃತ್ತಿ ಅಂಚಿನಲ್ಲಿರುವವರ ಪ್ರಕರಣಗಳನ್ನು ಶೀಘ್ರ ವಿಚಾರಣೆ ಮಾಡಿ ಶಿಸ್ತು ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.

-ಪಿ. ಹೇಮಲತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ                      

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.