ಹರಿಹರದಲ್ಲಿ ಹರ ಜಾತ್ರೆ ಮಹೋತ್ಸವ
ರಾಜ್ಯ ಪಂಚಮಸಾಲಿ ಸಂಘದ ಬೆಳ್ಳಿ ಬೆಡಗುಅಕ್ಕಮಹಾದೇವಿ ವಚನ ವಿಜಯೋತ್ಸವ
Team Udayavani, Jan 11, 2020, 12:27 PM IST
ಹರಿಹರ: ನಗರ ಹೊರವಲಯದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದಲ್ಲಿ ಜ.14 ಮತ್ತು 15ರಂದು ಹರ ಜಾತ್ರಾ ಮಹೋತ್ಸವ, ಪಂಚಮಸಾಲಿ ರಾಜ್ಯ ಸಂಘದ ಬೆಳ್ಳಿಬೆಡಗು, ಅಕ್ಕಮಹಾದೇವಿ ವಚನ ವಿಜಯೋತ್ಸವ ಹಾಗೂ ತಮ್ಮ ಪೀಠಾರೋಹಣದ ದ್ವಿತೀಯ ವರ್ಷಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಚನಾನಂದ ಶ್ರೀಗಳು ಹೇಳಿದರು.
ಪೀಠದ ಆವರಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಜ.14ರ ಬೆಳಿಗ್ಗೆ 11-30ಕ್ಕೆ ವೀರರಾಣಿ ಕಿತ್ತೂರು ಚನ್ನಪ್ಪ ವೇದಿಕೆಯಲ್ಲಿ ಹರಜಾತ್ರಾ ಮಹೋತ್ಸವ ಹಾಗೂ ಯುವ ಸಮಾವೇಶಕ್ಕೆ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಚಾಲನೆ ನೀಡುವರು.
ಬೆಂಗಳೂರು ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಸಾನ್ನಿಧ್ಯ ವಹಿಸುವರು. ಯುವ ಸಮಾವೇಶವನ್ನು ಮಾಜಿ ಸಚಿವ ಮುರುಗೇಶ್ ನಿರಾಣೆ ಉದ್ಘಾಟಿಸುವರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಜಿ ದಿಕ್ಸೂಚಿ ಭಾಷಣ ಮಾಡುವರು, ಪಂಚಮಸಾಲಿ ರಾಜ್ಯ ಯುವಘಟಕದ ಅಧ್ಯಕ್ಷ ನವೀನ್ ಪಾಟೀಲ್ ಅಧ್ಯಕ್ಷತೆ ವಹಿಸುವರು. ಧರ್ಮದರ್ಶಿ ಚಂದ್ರಶೇಖರ ಪೂಜಾರ್ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಮಧ್ಯಾಹ್ನ 2ಕ್ಕೆ ಸನ್ಮಾನ ಸಮಾರಂಭ, 2-30ಕ್ಕೆ ಪಂಚಮಸಾಲಿ ರಾಜ್ಯ ಸಂಘದ ಬೆಳ್ಳಿಬೆಡಗು ಸಮಾರಂಭವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀ, ನಿಡಸೋಸಿ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಶ್ರೀ ಸಾನ್ನಿಧ್ಯ ವಹಿಸುವರು. ರಾಜ್ಯ ಪಂಚಮಸಾಲಿ ಸಂಘದ ಅಧ್ಯಕ್ಷ ಬಿ.ನಾಗನಗೌಡರು ಅಧ್ಯಕ್ಷತೆ ವಹಿಸುವರು. ಜ.15ರ ಬೆಳಿಗ್ಗೆ 7-30ಕ್ಕೆ ಇಳಕಲ್ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಮಹಾಶಿವಯೋಗಗಳು ಇಷ್ಟಲಿಂಗ ಪೂಜಾ ಪ್ರಾತ್ಯಕ್ಷತೆ ನಡೆಸುವರು, ಚಿತ್ರದುರ್ಗ ವನಶ್ರಿಮಠದ ಬಸವಕುಮಾರ ಶ್ರೀ, ಮಡಿವಾಳ ಗುರುಪೀಠದ ಬಸವ
ಮಾಚಿದೇವ ಶ್ರೀ ಮತ್ತಿತರೆ ವಿವಿಧ ಸಮಾಜಗಳ ಶ್ರೀಗಳು ಭಾಗವಹಿಸವರು. ಬೆಳಿಗ್ಗೆ 8-30ಕ್ಕೆ ಅಕ್ಕಮಹಾದೇವಿ ವಚನ ವಿಜಯೋತ್ಸವವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಉದ್ಘಾಟಿಸುವರು. ಸಂಕ್ರಾಂತಿ ಸಂಭ್ರಮ, ಕುಂಭಮೇಳ ಹಾಗೂ ಜಾನಪದ ಕಲಾಮೇಳದಲ್ಲಿ ಅಕ್ಕಮಹಾದೇವಿಯ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿಸಿರಿ ಹರಿಹರೇಶ್ವರ ದೇವಸ್ಥಾನದಿಂದ ಶ್ರೀಕಾಂತ ಚಿತ್ರಮಂದಿರದವರೆಗೆ ಮೆರವಣಿಗೆ ನಡೆಸಲಾಗುವುದು.
ಮಧ್ಯಾಹ್ನ 11ಕ್ಕೆ ಬೆಳವಡಿ ಮಲ್ಲಮ್ಮ ವೇದಿಕೆಯಲ್ಲಿ ನಡೆವ ಮಹಳಾ ಸಮಾವೇಶವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು, ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀ, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಶ್ರೀ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀ, ಯೋಗಿ ವೇಮನ ಮಠದ ವೇಮನಾನಂದ ಶ್ರೀ, ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಸಾನ್ನಿಧ್ಯ ವಹಿಸುವರು.
ಮಧ್ಯಾಹ್ನ 3ಕ್ಕೆ ಪೀಠದ ದಶಮಾನೋತ್ಸವ ಹಾಗೂ ತಮ್ಮ ದ್ವಿತೀಯ ಪೀಠಾರೋಹಣ ಸಮಾರಂಭವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ ಉದ್ಘಾಟಿಸುವರು. ಧರ್ಮದರ್ಶಿ ಬಿ.ಸಿ.ಉಮಾಪತಿ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಮಾತನಾಡಿ, ಶ್ರೀಪೀಠ ಆರಂಭದಿಂದಲೂ ಸಮಾಜದ ಜನರ ನೋವುಗಳಿಗೆ ಸ್ಪಂದಿಸುತ್ತಿದೆ. ಶ್ರೀಗಳು ಪೀಠಾಧಿಪತಿಯಾಗಿ ಕೇವಲ 20 ತಿಂಗಳಲ್ಲೆ ಅಭುತಪೂರ್ವ ಕಾರ್ಯ ನಿರ್ವಹಿಸಿದ್ದಾರೆ. ಪೀಠಕ್ಕೆ ಆಗಮಿಸಿದ ಬಳಿಕ 400ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ,
ವಿದೇಶಗಳಲ್ಲೂ ಪೀಠದ ಕೀರ್ತಿ ಮೊಳಗಿಸಿದ್ದಾರೆ. ಬೆಳ್ಳಿ ಬೆಡಗು ಹಾಗೂ ಪ್ರಥಮ ಬಾರಿಗೆ ಆಯೋಜಿಸಿರುವ ಹರ ಜಾತ್ರಾ ಮಹೋತ್ಸವದಲ್ಲಿ ಹಲವು ವಿನೂತನ ಯೋಜನೆ ಆರಂಭಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದು, ಲಕ್ಷಾಂತರ ಜನರಿಗೆ ಆಸನ, ಊಟ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಶುದ್ದ ಕುಡಿವ ನೀರು, ಮಜ್ಜಿಗೆ ವಿತರಣೆಯಿದೆ. ನಗರದ ಎಲ್ಲಾ ಕಲ್ಯಾಣ ಮಂಟಪಗಳಲ್ಲಿ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. 8 ಎಲ್‌ಇಡಿ ವಾಲ್, ಪೊಲೀಸ್ ಇಲಾಖೆಯ
ಸಹಕಾರದೊಂದಿಗೆ ಮಠದ ಸುತ್ತಮುತ್ತಲ ಖಾಲಿ ಜಾಗಗಳಲ್ಲಿ ಸುಸಜ್ಜಿತ ವಾಹನ ನಿಲ್ದಾಣ ನಿರ್ಮಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ 100ಕ್ಕೂ ಅಧಿಕ ಸಿಸಿಟಿವಿ ಅಳವಡಿಸಲಾಗುವುದು. ಆಂಬ್ಯುಲೆನ್ಸ್, ಬೆಂಕಿ ನಂದಿಸುವ ವಾಹನಗಳ ಸಜ್ಜುಗೊಳಸಲಾಗಿದೆ. ನಿರಂತರ ವಿದ್ಯುತ್‌ಗಾಗಿ ಪ್ರತ್ಯೇಕ ವಿದ್ಯುತ್ ಮಾರ್ಗ, ಪರಿವರ್ತಕ ಅಳವಡಿಸಲಾಗುತ್ತಿದೆ. ಮಾಧ್ಯಮದವರಿಗೆ ಮೀಡಿಯಾ ಸೆಂಟರ್ ತೆರೆಯಲಾಗುತ್ತಿದೆ. ಜಾತ್ರಾ ಮಹೋತ್ಸವ
ಸಮಿತಿ ಅಧ್ಯಕ್ಷ ಸಿ.ಆರ್. ಬಳ್ಳಾರಿ, ಧರ್ಮದರ್ಶಿಗಳಾದ ಬಿ.ಸಿ.ಉಮಾಪತಿ, ಚಂದ್ರಶೇಖರ ಪೂಜಾರ್, ಕರಿಬಸಪ್ಪ ಗುತ್ತೂರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.