ಹರಿಹರೇಶ್ವರಸ್ವಾಮಿ ರಥೋತ್ಸವ
Team Udayavani, Feb 10, 2020, 11:24 AM IST
ಹರಿಹರ: ಮಧ್ಯ ಕರ್ನಾಟಕದಲ್ಲೇ ಪ್ರಸಿದ್ಧವಾದ ಶ್ರೀ ಹರಿಹರೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ನಗರದಲ್ಲಿ ಭಾನುವಾರ ಶ್ರದ್ಧೆ, ಭಕ್ತಿ, ಸಡಗರದಿಂದ ನೆರವೇರಿತು.
ಶಾಸಕ ಎಸ್.ರಾಮಪ್ಪ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ. ಶಿವಮೊಗ್ಗ ವೃತ್ತದವರೆಗೆ ಭಕ್ತರು ಹರ ಹರ ಮಾಹದೇವ್, ಗೋವಿಂದಾ… ಗೋವಿಂದಾ… ಎಂದು ನಾಮಸ್ಮರಣೆ ಮಾಡುತ್ತಾ ರಥ ಎಳೆದರು.
ಕೆಲವರು ತೇರಿನ ಮುಕುಟಕ್ಕೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ರಥೋತ್ಸವದಲ್ಲಿ ಸಾವಿರಾರು ಜನ ಭಕ್ತಿ, ಶ್ರದ್ಧೆಯಿಂದ ಪಾಲ್ಗೊಂಡರು.
ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಚ್.ವೆಂಕಟೇಶ್, ಮಾಜಿ ಶಾಸಕ ಬಿ.ಪಿ.ಹರೀಶ್, ಮುಖಂಡರಾದ ಎಸ್.ಎಂ.ವೀರೇಶ್, ಜಿಪಂ ಸದಸ್ಯ ಬಿ.ಎಂ.ವಾಗೀಶ್‌ಸ್ವಾಮಿ, ನಗರಸಭೆ ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ರಥೋತ್ಸವಕ್ಕೂ ಮುನ್ನ ಪುರಾಣ ಪ್ರಸಿದ್ದ ಹರಿಹರೇಶ್ವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಸಿ ನಂತರ ರಥದೊಳಗೆ ಅಲಂಕರಿಸಲಾಯಿತು.
ದೇವಸ್ಥಾನದ ಸಂಚಾಲನಾ ಸಮಿತಿ, ಕೋಟೆಕೇರಿ ಗಜಾನನ ಯುವಕ ಸಂಘದ ಸಹಯೋಗದಲ್ಲಿ ಸಮೀಪದ ಬಿರ್ಲಾ ಕಲ್ಯಾಣ ಮಂಟಪದಲ್ಲಿ, ದೇವಸ್ಥಾನ ರಸ್ತೆಯಲ್ಲಿ ನಡುವಲಪೇಟೆ ಯುವಕ ಸಂಘದಿಂದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ವಾಸವಿ ಯುವಜನ ಸಂಘ, ಕಾಳಿದಾಸ ಸ್ವಸ್ತಿಕ, ಧನ್ವಂತರಿ ಪತಂಜಲಿ ಮತ್ತಿತರೆ ಸಂಘಗಳಿಂದ ಉಪಾಹಾರ, ಮಜ್ಜಿಗೆ, ಶರಬತ್ ಸಹ ವಿತರಿಸಲಾಯಿತು.
ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಗಣಪತಿ ಪೂಜೆ, ರುದ್ರಾಭಿಷೇಕ, ಅಲಂಕಾರ, ನವಗ್ರಹ ಪೂಜೆ, ಜಪ ಹೋಮ ಹವನಾದಿಗಳನ್ನು ನಡೆದವು. ರಥೋತ್ಸವ ನಿಮಿತ್ತ ಸೋಮವಾರ ಸಂಜೆ 6-30ಕ್ಕೆ ಕಲಾವಿದೆ ರಾಧಾ ನೇತೃತ್ವದಲ್ಲಿ ಸಂಕರ್ಷಣ ನೃತ್ಯ ಮತ್ತು ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮವಿದೆ.
3 ದಿನ ಜಾತ್ರೆ: ರಥೋತ್ಸವ ನಿಮಿತ್ತ ದೇವಸ್ಥಾನ ರಸ್ತೆಯಲ್ಲಿ ಖಾರಾ ಮಂಡಕ್ಕಿ, ಬೆಂಡು, ಬತಾಸೆ, ಮಕ್ಕಳ ಆಟಿಕೆ, ಬಳೆ ಸೇರಿದಂತೆ ಮಹಿಳೆಯರ ಅಲಂಕಾರಿಕ ವಸ್ತುಗಳ ನೂರಾರು ಅಂಗಡಿಗಳು ತಲೆ ಎತ್ತಿದ್ದು, 3 ದಿನ ಜಾತ್ರಾ ಸಡಗರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.