ಬಿಜೆಪಿಯಿಂದ ಜಾಗೃತಿ ಜಾಥಾ
Team Udayavani, Jun 19, 2020, 3:57 PM IST
ಹರಿಹರ: ಮಾಸ್ಕ್ ದಿನಾಚರಣೆ ನಿಮಿತ್ತ ನಗರದಲ್ಲಿ ಬಿಜೆಪಿಯಿಂದ ಜಾಗೃತಿ ಜಾಥಾ ನಡೆಸಲಾಯಿತು.
ಹರಿಹರ: ಮಾಸ್ಕ್ ದಿನಾಚರಣೆ ನಿಮಿತ್ತ ನಗರದಲ್ಲಿ ಗುರುವಾರ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಜಾಗೃತಿ ಜಾಥಾ ನಡೆಸಿದರು.
ಪಕ್ಷದ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಹೊರಟ ಮುಖಂಡರು ಶಿವಮೊಗ್ಗ ರಸ್ತೆ, ಮುಖ್ಯ ರಸ್ತೆ ಮೂಲಕ ಸಂಚರಿಸಿದರು. ಚೆನ್ನಮ್ಮ ವೃತ್ತ, ಗಾಂಧಿ ವೃತ್ತದಲ್ಲಿ ಸಾರ್ವಜನಿಕರಿಗೆ ಮುಖಕ್ಕೆ ಮಾಸ್ಕ್ ಹಾಕುವುದರ ಮಹತ್ವ ವಿವರಿಸಿದರು. ಜಿಪಂ ಸದಸ್ಯ ಬಿ.ಎಂ. ವಾಗೀಶ್‌ಸ್ವಾಮಿ ಮಾತನಾಡಿ, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದರಿಂದ ಮಾತ್ರ ನಾವು ಮಾರಕ ಕೋವಿಡ್ ವೈರಸ್ ನಿಂದ ಪಾರಾಗಬಹುದು. ವೈರಸ್ ಪ್ರಸರಣ ತಡೆಗೆ ಹಗಲಿರುಳು ಶ್ರಮಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು ಎಂದರು.
ನಗರಸಭಾ ಸದಸ್ಯರಾದ ನೀತಾ ಮೆಹರ್ವಾಡೆ, ಅಶ್ವಿನಿ ಕೃಷ್ಣ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ದೂಡಾ ಸದಸ್ಯ ರಾಜು ರೋಖಡೆ, ಮುಖಂಡರಾದ ಮಂಜಾ ನಾಯ್ಕ, ರಾಜೇಶ್ ವರ್ಣೇಕರ್, ಪ್ರವೀಣ್ ಜಿ. ಪವಾರ್, ರಾಘವೇಂದ್ರ ಉಪಾಧ್ಯಾಯ, ಆನಂದ್, ಐರಣಿ ಮಂಜುನಾಥ್, ತುಳಜಪ್ಪ ಭೂತೆ, ಮೋತ್ಯಾ ನಾಯ್ಕ, ರಾಚಪ್ಪ, ಪ್ರಶಾಂತ್‌ಕುಮಾರ್, ಸುನೀಲ್ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.