ಭತ್ತ ಖರೀದಿ ಕೇಂದ್ರ ಆರಂಭಿಸಿ: ತೇಜಸ್ವಿ
Team Udayavani, May 27, 2020, 5:45 PM IST
ಸಾಂದರ್ಭಿಕ ಚಿತ್ರ
ಹರಿಹರ: ತಾಲೂಕಿನಲ್ಲಿ ರೈತರು ಈಗಾಗಲೇ ಅರ್ಧದಷ್ಟು ಭತ್ತ ಕಟಾವು ಮುಗಿಸಿದ್ದು, ಕೂಡಲೆ ಹರಿಹರ ಹಾಗೂ ಮಲೆಬೆನ್ನೂರು ಹೋಬಳಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ಕನಿಷ್ಠ ಬೆಂಬಲ ಬೆಲೆಗೆ ಸರ್ಕಾರ ಭತ್ತ ಖರೀದಿಸಲು ಮುಂದಾಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ತೇಜಸ್ವಿ ಪಟೇಲ್ ಆಗ್ರಹಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಪದಾಧಿಕಾರಿಗಳೊಂದಿಗೆ ಮಂಗಳವಾರ ನಗರದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಮಾತ್ರ ಖರೀದಿ ಕೇಂದ್ರ ತೆರೆದಿದ್ದು ಇದರಿಂದ ರೈತರಿಗೆ ಸಾಗಾಣಿಕೆ ಹೊರೆಯಾಗುತ್ತಿದೆ ಎಂದರು. ಕ್ವಿಂಟಲ್ ಭತ್ತಕ್ಕೆ ಸರ್ಕಾರ ಘೋಷಿಸಿರುವ 1815 ರೂ. ಯಾವುದಕ್ಕೂ ಸಾಲುವುದಿಲ್ಲ. ಇದನ್ನು 2500 ರೂ.ಗೆ ಹೆಚ್ಚಿಸಬೇಕು. ಆನ್‌ಲೈನ್ ನೋಂದಣಿ ಗೊಂದಲ ನಿವಾರಿಸಬೇಕು. ಒಬ್ಬ ರೈತನಿಂದ ಕೇವಲ 40 ಕ್ವಿಂಟಲ್‌ಗೆ ಮಿತಿಗೊಳಿಸಿರುವುದು ಸರಿಯಲ್ಲ, ಪಹಣಿ ಆಧರಿಸಿ ಪೂರ್ತಿ ಬೆಳೆಯನ್ನು ಖರೀದಿಸಬೇಕೆಂದರು.
ರೈತ ಮುಖಂಡ ವಾಸನದ ಎಚ್. ಓಂಕಾರಪ್ಪ ಮಾತನಾಡಿ, ಹಿಂದಿನ ಹಂಗಾಮಿನಲ್ಲಿ ಕ್ವಿಂಟಲ್‌ಗೆ 2000 ರಿಂದ 2200 ರೂ.ವರೆಗೆ ಇದ್ದ ಭತ್ತದ ದರ, ಈಗ ಕೇವಲ 1400 ರಿಂದ 1500 ರೂ. ಆಗಿದೆ. ರೈತರು ಮಾಡಿದ್ದ ಖರ್ಚು ಸಹ ವಾಪಾಸಾಗದೆ ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಬೆಂಬಲ ಬೆಲೆ ಹೆಚ್ಚಿಸಬೇಕು ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಪಾಟೀಲ್ ಮಾತನಾಡಿದರು. ರೈತ ಸಂಘದ ಶಂಭುಲಿಂಗಪ್ಪ, ಧರ್ಮರಾಜ್, ಶಿವಶಂಕರಪ್ಪ, ಶಿವಯ್ಯ, ಉಮ್ಮಣ್ಣ, ಚಂದ್ರಶೇಖರಯ್ಯ, ಲೋಕೇಶ್, ಬಸವರಾಜ್, ನಂದೀಶ್, ಮಹೇಶ್ವರಪ್ಪ ದೊಗ್ಗಳ್ಳಿ, ಜಗದೀಶ್ ಜಿಗಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.