ಫೆ.8, 9ಕ್ಕೆ ಬೃಹತ್‌ ವಾಲ್ಮೀಕಿ ಜಾತ್ರೆ

ವಿವಿಧ ಧಾರ್ಮಿಕ-ಸಾಂಸ್ಕೃತಿಕ-ಜಾಗೃತಿ ಕಾರ್ಯಕ್ರಮಗಳ ಆಯೋಜನೆ: ಪ್ರಸನ್ನಾನಂದ ಶ್ರೀ

Team Udayavani, Feb 6, 2020, 11:33 AM IST

6-February-4

ಹರಿಹರ: ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9ರಂದು ಆಯೋಜಿಸಲಾಗಿರುವ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದ್ದು, 3 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ವಾಲ್ಮೀಕಿ ಪ್ರಸನ್ನಾನಂದ ಶ್ರೀ ಹೇಳಿದರು.

ಮಠದ ಆವರಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ಜೊತೆಗೆ ಮಠದ 22ನೇ ವಾರ್ಷಿಕೋತ್ಸವ, ಲಿಂ| ಪುಣ್ಯಾನಂದ ಸ್ವಾಮೀಜಿ 13ನೇ ಪುಣ್ಯಾರಾಧನೆ ಹಾಗೂ ತಮ್ಮ 12ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ನಡೆಯಲಿದೆ. ಸಾಮಾಜದಲ್ಲಿ ಜಾಗೃತಿ ಮೂಡಿಸಲು ವಿಚಾರಗೊಷ್ಠಿಗಳನ್ನು ಹಮ್ಮಿಕೊಂಡಿದ್ದು, ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಆಧಾರವಾಗಲಿದೆ ಎಂದರು.

ಫೆ.8ರ ಬೆಳಿಗ್ಗೆ 7ಕ್ಕೆ ರಾಜನಹಳ್ಳಿಯಿಂದ ಶ್ರೀಮಠದವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಬೃಹತ್‌ ಮೆರವಣಿಗೆ ನಡೆಸಲಾಗುವುದು. 8ಕ್ಕೆ ಧಾರವಾಡದ ಮನಗುಂಡಿ ಗುರುಬಸವ ಮಹಾಮನೆಯ ಬಸವಾನಂದ ಶ್ರೀ ವಾಲ್ಮೀಕಿ ಧ್ವಜಾರೋಹಣ ನೆರವೇರಿಸುವರು. 9ಕ್ಕೆ ಸಾಮೂಹಿಕ ವಿವಾಹ ಶಾಸಕ ಎಸ್‌.ರಾಮಪ್ಪ ಉದ್ಘಾಟಿಸುವರು.

ಮಾಜಿ ಶಾಸಕರಾದ ಎಚ್‌.ಎಸ್‌.ಶಿವಶಂಕರ್‌, ಬಿ.ಪಿ. ಹರೀಶ್‌ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸುವರು. ರಾಜನಹಳ್ಳಿ ಗ್ರಾಪಂ ಅಧ್ಯಕ್ಷ ವೀರಬಸಯ್ಯ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಯಶೋಧಮ್ಮ ಮರುಳಸಿದ್ದಪ್ಪ, ಡಿಸಿ ಮಹಾಂತೇಶ್‌ ಬೀಳಗಿ, ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಪದ್ಮಾ ಬಸಂತಪ್ಪ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎನ್‌.ಲೋಕೇಶಪ್ಪ ಮತ್ತಿತರರು ಭಾಗವಹಿಸುವರು.

ಮಧ್ಯಾಹ್ನ 12ಕ್ಕೆ ರಾಜ್ಯಮಟ್ಟದ ಮಹಿಳಾ ಜಾಗೃತಿ ಸಮಾವೇಶವನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಕವಿತಾ ಮಿಶ್ರಾ ಉದ್ಘಾಟಿಸುವರು. ಟ್ರಸ್ಟಿ ಶಾಂತಲಾ ರಾಜಣ್ಣ ಅಧ್ಯಕ್ಷತೆ ವಹಿಸುವರು. ಸಾಹಿತಿಗಳಾದ ನಾಡೋಜ ಪ್ರೊ | ಕಮಲಾ ಹಂಪನಾ, ಡಾ|ಎಸ್‌.ಅನಸೂಯ ಕೆಂಪನಹಳ್ಳಿ, ಹಿರಿಯ ನ್ಯಾಯವಾದಿ ವಿಜಯಾ ಹಾವನೂರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಸಮಾಜದ ಮಹಿಳಾ ಸಾಧಕಿಯರು ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಗುವುದು. ಹರ್ತಿಕೋಟಿ ವಿರೇಂದ್ರ ಸಿಂಹ ಸಂಪಾದಕತ್ವದ ವಾಲ್ಮೀಕಿ ವಿಜಯ ಸ್ಮರಣ ಸಂಪುಟ-2 ಬಿಡುಗಡೆಗೊಳಿಸಲಾಗುವುದು. ಮಧ್ಯಾಹ್ನ 3ಕ್ಕೆ ರಾಜ್ಯ ಎಸ್ಟಿ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ನೌಕರರ ಸಮ್ಮೇಳನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಉದ್ಘಾಟಿಸುವರು, ಸಂಘದ ಅಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸುವರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂ.ಡಿ ಹನುಮನರಸಯ್ಯ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಂಕರ ಜಾಲಿಹಾಳ, ಪ್ರಧಾನ ಕಾರ್ಯದರ್ಶಿ ಎ.ರಾಜಶೇಖರ, ರಾಯಚೂರು ಜಿಲ್ಲಾಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರದ ನಿರ್ದೇಶಕ ಟಿ.ಟಿ.ಬಸವನಗೌಡ, ರಾಜ್ಯ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಒಕ್ಕೂಟದ ಉಪಾಧ್ಯಕ್ಷ ನಾಗಸಿದ್ದಾರ್ಥ ಹೊಲೆಯಾರ್‌ ಮತ್ತಿತರರು ಭಾಗವಹಿಸುವರು. ನಂತರ ನಿವೃತ್ತ ಅಧಿಕಾರಿಗಳಿಗೆ ಗೌರವ ಸಮರ್ಪಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಗುವುದು.

ಸಂಜೆ 6ಕ್ಕೆ ಪರಿಶಿಷ್ಟ ವರ್ಗದವರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ವಿಚಾರಗೋಷ್ಠಿಯನ್ನು ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಉದ್ಘಾಟಿಸುವರು, ಜಾತ್ರಾ ಸಮಿತಿ ಸಂಚಾಲಕ ಜಿ.ಟಿ.ಚಂದ್ರಶೇಖರಪ್ಪ ಅಧ್ಯಕ್ಷತೆ ವಹಿಸುವರು. ಮುಖಂಡರಾದ ಎಲ್‌. ಮುನಿಸ್ವಾಮಿ, ಹರ್ತಿಕೋಟೆ ವೀರೇಂದ್ರಸಿಂಹ ಮತ್ತಿತರರು ಭಾಗವಹಿಸುವರು. ರಾತ್ರಿ 9ಕ್ಕೆ ಮಹರ್ಷಿ ವಾಲ್ಮೀಕಿ ವಿರಚಿತ ಸಂಪೂರ್ಣ ರಾಮಾಯಣ ನಾಟಕ ಸೇರಿದಂತೆ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.

ಫೆ.9ರ ಬೆಳಿಗ್ಗೆ 7ಕ್ಕೆ ನಾಡಿನ ವಿವಿಧ ಮಠಾಧೀಶರು ವಾಲ್ಮೀಕಿ ರಥೋತ್ಸವಕ್ಕೆ ಚಾಲನೆ ನೀಡುವರು. ಬೆಳಿಗ್ಗೆ 11-30ಕ್ಕೆ ಧರ್ಮಸಭೆ. ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರು, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಶ್ರೀ, ಹೊಸದುರ್ಗ ಭಗೀರಥ ಪೀಠದ ಡಾ|ಪುರುಷೋತ್ತಮಾನಂದ ಶ್ರೀ, ನಿಡಸೋಸಿ ಸಿದ್ದ ಸಂಸ್ಥಾನ ಮಠದ ಪಂಚಮಲಿಂಗೇಶ್ವರ ಶ್ರೀ, ಐರಣಿ ಹೊಳೆಮಠದ ಬಸವದೇಶೀಕೇಂದ್ರ ಶ್ರೀ, ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ, ಮಾದಾರ ಚನ್ನಯ್ಯ ಗುರಪೀಠದ ಬಸವಮೂರ್ತಿ ಶ್ರೀ, ಕೃಷ್ಣ ಯಾದವ ಗುರುಪೀಠದ ಬಸವ ಯಾದವಾನಂದ ಶ್ರೀ, ಅಂಬಿಗರ ಚೌಡಯ್ಯ ಗುರುಪೀಠದ ಶಾಂತ ಭೀಷ್ಮ ಚೌಡಯ್ಯ ಶ್ರೀ, ನಂದಿಗುಡಿ ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶ್ರೀ ಮತ್ತಿತರರು ಸಾನ್ನಿಧ್ಯ ವಹಿಸುವರು.

11-30ಕ್ಕೆ ಬೃಹತ್‌ ಜನಜಾಗೃತಿ ಸಮಾವೇಶ, ಸಿಎಂ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸವರು. ವಿಪಕ್ಷ ನಾಯಕ ಸಿದ್ದರಾಮಯ್ಯ ಲಿಂ| ಪುಣ್ಯಾನಂದಪುರಿಶ್ರೀ ಗಳ ಪ್ರತಿಮೆಯ ಅನಾವರಣ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಾಲ್ಮೀಕಿ ವಿಜಯ ಸ್ಮರಣ ಸಂಪುಟ ಬಿಡುಗಡೆ ಮಾಡುವರು. ಜಾತ್ರಾ ಸಮಿತಿ ಅಧ್ಯಕ್ಷ, ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆ ವಹಿಸುವರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್‌.ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಪ್ರತಾಪ್‌ಸಿಂಹ, ಮಾಜಿ ಸಚಿವರಾದ ಉಗ್ರಪ್ಪ ಜಿ.ಪರಮೇಶ್ವರ, ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್‌, ಕೆ.ಎಚ್‌.ಮುನಿಯಪ್ಪ, ಇ.ತುಕಾರಾಂ, ಶಾಸಕ, ಮಾಜಿ ಸಚಿವ ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ, ಚಿತ್ರನಟರಾದ ಸುದೀಪ್‌, ಶಶಿಕುಮಾರ್‌ ಮತ್ತಿತರರು ಭಾಗವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಜಾತ್ರಾ ಸಮಿತಿ ಸಂಚಾಲಕ ಜಿ.ಟಿ.ಚಂದ್ರಶೇಖರಪ್ಪ, ಜಿಪಂ ಸದಸ್ಯ ಹೆಚ್‌. ಕೆ.ಓಬಳಪ್ಪ, ಮಾಜಿ ಸದಸ್ಯ ಗೋವಿಂದಸ್ವಾಮಿ, ಮಠದ ಆಡಳಿತಾ ಧಿಕಾರಿ ಟಿ.ಓಬಳಪ್ಪ, ಜಿಗಳಿ
ಆನಂದಪ್ಪ, ಕೆ.ಬಿ.ಮಂಜಪ್ಪ, ಜಿಗಳಿ ಪ್ರಕಾಶ್‌, ತಿಮ್ಮೇನಹಳ್ಳಿ ಚಂದ್ರಣ್ಣ, ಹರಪನರಹಳ್ಳಿ ಉಚ್ಚಂಗೆಪ್ಪ, ಪಾಲಿಕೆ ಉಪ ಆಯುಕ್ತ ಕೆ.ನಾಗರಾಜ್‌, ಪಾಳೆಗಾರ ನಾಗರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.