ಸಿರಿಧಾನ್ಯ ಸೇವನೆ ಆರೋಗ್ಯಕರ
Team Udayavani, Jan 19, 2019, 6:13 AM IST
ಚನ್ನಗಿರಿ: ಹೆಚ್ಚಿನ ಇಳುವರಿ ಉದ್ದೇಶ, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆದ್ದರಿಂದ ಸಾವಯವ ಪದ್ಧತಿಯಲ್ಲಿ ಸಿರಿಧಾನ್ಯ ಬೆಳೆದು ತಿನ್ನುವುದರ ಮುಖಾಂತರ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಜ್ಜಾಗಿ ಎಂದು ನಿವೃತ್ತ ಕೃಷಿ ಸಹಾಯಕ ನಿರ್ದೇಶಕ ರಾಜಶೇಖರ್ ಹೇಳಿದ್ದಾರೆ.
ತಾಲೂಕಿನ ಎಕ್ಕೆಗೊಂದಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಮಹಿಳಾ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯಗಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೃಷಿ ಉತ್ಪನ್ನಗಳು ಹಾಗೂ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಅಂಶ ಸೇರ್ಪಡೆ ಆಗುತ್ತಿರುವುದರಿಂದ ಮನುಷ್ಯ ಸಂಕುಲ ಮುಂದಿನ ದಿನಗಳಲ್ಲಿ ರೋಗಿಷ್ಟರಾಗಿ ಜೀವನ ಸಾಗಿಸುವ ಸ್ಥಿತಿ ಬಂದೊದಗಬಹುದು. ಆದ್ದರಿಂದ ಮುಂಜಾಗ್ರತೆಯಾಗಿ ಸಾವಯವ ಕೃಷಿ ಪದ್ಧತಿಗೆ ಸಿದ್ಧರಾಗಬೇಕು. ಸಿರಿಧಾನ್ಯಗಳ ಬಳಕೆಯಿಂದ ನಾವು ಆರೋಗ್ಯಕರ ಜೀವನ ನಡೆಸಬಹುದಾಗಿದೆ ಎಂದು ಹೇಳಿದರು. ಕೃಷಿ ಜತೆಗೆ ಮನೆಗಳಲ್ಲಿ ಎಮ್ಮೆ, ಆಕಳು, ಎತ್ತು, ಕೋಳಿ, ಕುರಿ, ಮೇಕೆಗಳನ್ನು ಸಾಕುವುದರ ಜೊತೆಗೆ ಹೆಚ್ಚಿನ ಆದಾಯವನ್ನು ಪಡೆದು ಉತ್ತಮ ಜೀವನ ನಡೆಸಬಹುದು ಎಂದರು. ಒಕ್ಕೂಟದ ಅಧ್ಯಕ್ಷೆ ಸುಮಂಗಳ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮೇಲ್ವಿಚಾರಕ ರಾಕೇಶ್, ಮಂಜುನಾಥ್, ಒಕ್ಕೂಟದ ಉಪಾಧ್ಯಕ್ಷ ಶಿವಕುಮಾರ್, ನಾಗವೇಣಿ, ಸವಿತಾ, ಬಸಣ್ಣ ಕಲ್ಲೇನಹಳ್ಳಿ, ಶೃತಿ ಗಣೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.