ಎಚ್‌ಡಿಕೆ ಮತ್ತೆ ಸಿಎಂ ಆಗೋದು ನಿಶ್ಚಿತ

ಮಾಜಿ ಶಾಸಕ ಎಚ್.ಎಸ್. ಶಿವಶಂಕರ್‌ ವಿಶ್ವಾಸ

Team Udayavani, May 5, 2022, 1:39 PM IST

hdk

ದಾವಣಗೆರೆ: ಹರಿಹರದಲ್ಲಿ ಮೇ 7ರಂದು ಅತ್ಯಂತ ಯಶಸ್ವಿಯಾಗಿ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್‌ ತಿಳಿಸಿದರು.

ನಗರದ ಶ್ರೀರಾಮ ದೇವಸ್ಥಾನದಲ್ಲಿ ಬುಧವಾರ ನಡೆದ ಜನತಾ ಜಲಧಾರೆ ರಥಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ನಡೆಯುವ ಜನತಾ ಜಲಧಾರೆ ರಥಯಾತ್ರೆಯ ಸಮಾರೋಪದಲ್ಲಿ ಪಕ್ಷದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಚನ್ನಗಿರಿ, ಮಾಯಕೊಂಡ, ಜಗಳೂರು, ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಅಧ್ಯಕ್ಷರು ಹಾಗೂ ಮುಖಂಡರ ತೀರ್ಮಾನದಂತೆ ಜನತಾ ಜಲಧಾರೆ ರಥಯಾತ್ರೆ, ಕಾರ್ಯಕ್ರಮಗಳು ನಡೆಯಲಿವೆ . ಹರಿಹರ ತಾಲೂಕಿನ ಹಲವರು ಗ್ರಾಮಗಳಿಗೆ ಜಲಧಾರೆ ಕಾರ್ಯಕ್ರಮಕ್ಕೆ ಜನರಿಗೆ ಆಹ್ವಾನಿಸಲು ಹೋದ ಕಡೆ ಜನರು ಬಿಜೆಪಿ ಮತ್ತು ಕಾಂಗ್ರೆಸ್‌ ಬಗ್ಗೆ ಬಹಳ ಬೇಸರ ವ್ಯಕ್ತಪಡಿಸಿದರು.

ಕೋಮು ಸಂಘರ್ಷ ನಡೆಸುವ ರಾಜಕೀಯ ಪಕ್ಷಗಳು ಬೇಡ. ರೈತರ, ಕಾರ್ಮಿಕರ, ಬಡವರ ಅಭಿವೃದ್ಧಿ ಮಾಡುವಂತಹ ಪ್ರಾದೇಶಿಕ ಪಕ್ಷ ಬೇಕು. ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂದೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ ಮಾತನಾಡಿ, ಜನತಾ ಜಲಧಾರೆ ಕಾರ್ಯಕ್ರಮದಿಂದ ನದಿಗಳ ನೀರು ಸಂಗ್ರಹಿಸಲಾಗುವುದು. ಆಯಾ ಪ್ರದೇಶಗಳಿಗೆ ಅನ್ವಯ ನೀರಾವರಿ ಯೋಜನೆ ರೂಪಿಸಿ ಜೆಡಿಎಸ್‌ ಸರ್ಕಾರ ಬಂದ ಮೇಲೆ ಅನುಷ್ಠಾನಕ್ಕೆ ತರುವ ಉದ್ದೇಶ ಹೊಂದಲಾಗಿದೆ. ಅದರಿಂದ ಪಕ್ಷದ ಕಾರ್ಯಕರ್ತರು ಜನತಾ ಜಲಧಾರೆ ರಥಯಾತ್ರೆಯ ಉದ್ದೇಶದ ಬಗ್ಗೆ ಜನರಿಗೆ ತಿಳಿಸಬೇಕು. ಜನತಾ ಜಲಧಾರೆ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಸೇರಿಸಿ ದಾವಣಗೆರೆ ಜಿಲ್ಲೆಯಲ್ಲಿ ಜನತಾ ಜಲಧಾರೆ ರಥಯಾತ್ರೆ ಯಶಸ್ವಿಗೊಳ್ಳಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಕಾರ್ಯದರ್ಶಿ ಟಿ. ಅಸ್ಗರ್‌, ಜಿಲ್ಲಾ ಕಾರ್ಯಾಧ್ಯಕ್ಷ ಟಿ. ಗಣೇಶ್‌ ದಾಸಕರಿಯಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಜೆ. ಅಮಾನುಲ್ಲಾಖಾನ್‌, ಶೀಲಾಕುಮಾರಿ, ಯು. ಎಂ. ಮನ್ಸೂರ್‌ ಅಲಿ, ಜಮೀರ್‌ ಅಹ್ಮದ್‌ಖಾನ್‌, ಬಾತಿ ಶಂಕರ್‌ ಶಾನವಾಜ್‌ಖಾನ್‌, ಗಂಗಾಧರಪ್ಪ, ಕುಬೇರಪ್ಪ ತ್ಯಾವಣಿಗೆ, ಜಾವೀದ್‌, ಕಿರಣ್‌ ಹುಲ್ಮನಿ, ವಾಜಿದ್‌, ಸಮೀವುಲ್ಲಾ ಪರ್ವಿನ್‌ಬಾನು, ಹಾಲಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.