ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ
Team Udayavani, Jun 30, 2020, 10:56 AM IST
ಚನ್ನಗಿರಿ: ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಲಾಯಿತು.
ಚನ್ನಗಿರಿ: ತಾಲೂಕಿನ ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ಸೋಮವಾರ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಲಾಯಿತು. ಸುಮಾರು 62 ಜನ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕಿನ ತಪಾಸಣೆ ಮಾಡಲಾಗಿದ್ದು. ಪ್ರತಿಯೊಬ್ಬರ ಗಂಟಲು ದ್ರವ, ಮೂಗಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ದಾವಣಗೆರೆಗೆ ಕಳುಹಿಸಿಕೊಡಲಾಗಿದೆ ಎಂದು ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಿವಪ್ರಕಾಶ್ ತಿಳಿಸಿದರು.
ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ದೊಡ್ಡದು. ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳವರೆಗೂ ಮನೆ ಮನೆಗೆ ತೆರಳಿ ಮಾಹಿತಿ ಪಡೆದು
ಅದನ್ನು ಸರ್ಕಾರಕ್ಕೆ ಒದಗಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯ ರಕ್ಷಣೆಯೂ ಮುಖ್ಯವಾಗಿರುವುದರಿಂದ ಕೋವಿಡ್ ಸೋಂಕಿನ ತಪಾಸಣೆಯನ್ನುಮಾಡಲಾಗುತ್ತಿದೆ. 14 ದಿನಗಳಿಗೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದಾಗಿ ತಿಳಿಸಿದರು. ಡಾ| ಎಂ.ಬಿ.ಪಿ.ಎಂ ರವಿಕುಮಾರ್, ಬಿ.ಪಿ. ರಾಜು, ಲ್ಯಾಬ್ ಟೆಕ್ನಿಶಿಯನ್ ರೂಪಾ, ಸಣ್ಣಪ್ಪ, ನೀಲಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.