ಮಲೆನಾಡಲ್ಲಿ ಧಾರಾಕಾರ ಮಳೆ: ತುಂಗಭದ್ರೆಗೆ ಜೀವಕಳೆ
Team Udayavani, Aug 7, 2020, 3:59 PM IST
ಹೊನ್ನಾಳಿ: ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಈ ಮಳೆಯಿಂದ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯಿಂದ ತುಂಗಾ ನದಿಗೆ 50 ಸಾವಿರ ಕ್ಯೂಸೆಕ್‌ಗಳಿಗೂ ಅಧಿಕ ಪ್ರಮಾಣದ ನೀರನ್ನು ಹರಿಬಿಟ್ಟಿರುವುದರಿಂದ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಭದ್ರಾ ನದಿಪಾತ್ರದ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೂ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಜಲಾಶಯವನ್ನು ನಂಬಿ ಕೃಷಿ ಮಾಡುತ್ತಿರುವ ದಾವಣಗೆರೆ ಜಿಲ್ಲೆಯ ರೈತರಲ್ಲಿ ಇದು ಹರ್ಷ ಮೂಡಿಸಿದೆ. ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂಬ ಕಾರಣಕ್ಕೆ ರೈತರು ಭತ್ತ ನಾಟಿಗೆ ಸಿದ್ಧತೆ ಮಾಡಿಕೊಳ್ಳಬೇಕೋ, ಬೇಡವೋ ಎಂಬ ದ್ವಂದ್ವದಲ್ಲಿದ್ದರು. ಈಗ ಉತ್ತಮ ಮಳೆ ಸುರಿದು ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಭದ್ರಾ ಜಲಾಶಯಕ್ಕೆ 22,203 ಕ್ಯೂಸೆಕ್ ಒಳ ಹರಿವು, 2180 ಕ್ಯೂಸೆಕ್ ಹೊರ ಹರಿವು ಇತ್ತು. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದ್ದು, ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಅಚ್ಚುಕಟ್ಟು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯ ಬಹುತೇಕ ತುಂಬುವ ಹಂತದಲ್ಲಿದೆ ಎನ್ನಲಾಗಿದೆ. ತುಂಗಭದ್ರಾ ನದಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಹೊನ್ನಾಳಿ-ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿನ ನದಿ ದಂಡೆಗಳಲ್ಲಿ ಜನರು ಓಡಾಡಬಾರದು, ಜಾನುವಾರುಗಳನ್ನು ಮೇಯಿಸುವುದಾಗಲೀ, ಇನ್ನಾವುದೇ ಚಟುವಟಿಕೆಗಳನ್ನಾಗಲೀ ಮಾಡಬಾರದು ಎಂದು ತಹಶೀಲ್ದಾರ್ ತುಷಾರ್ ಬಿ. ಹೊಸೂರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.