ಪಾರಂಪರಿಕ ಮಾದರಿ ಆರೋಗ್ಯ ಸಮಾಜ ಕಟ್ಟಿ

Team Udayavani, May 22, 2017, 1:17 PM IST

dvg1.jpg

ದಾವಣಗೆರೆ: ಪಾರಂಪರಿಕ ವೈದ್ಯ ಪದ್ಧತಿಯನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜನರಿಗೆ ಮುಟ್ಟಿಸುವ ಮೂಲಕ ಮಾದರಿ ಆರೋಗ್ಯ ಸಮಾಜ ನಿರ್ಮಾಣಕ್ಕೆ ಪಾರಂಪರಿಕ ವೈದ್ಯರು ಶ್ರಮಿಸಬೇಕು ಎಂದು ಪಾರಂಪರಿಕ ವೈದ್ಯ ಪರಿಷತ್‌ ರಾಜ್ಯ ಕಾರ್ಯದರ್ಶಿ ಎಂ. ಗೋಪಾಲಕೃಷ್ಣ ತಿಳಿಸಿದ್ದಾರೆ. 

ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ಪಾರಂಪರಿಕ ವೈದ್ಯ ಗುರುಕುಲದ ವಾರ್ಷಿಕೋತ್ಸವ, ಜಾನಪದ ಸರ್ಟಿμಕೇಟ್‌ ಕೋರ್ಸ್‌ ಸಮಾರೋಪದಲ್ಲಿ ಮಾತನಾಡಿದ ಅವರು, ಅನಾದಿ ಕಾಲದಿಂದ ಚಾಲ್ತಿಯಲ್ಲಿರುವ ಪಾರಂಪರಿಕ ವೈದ್ಯಕೀಯ  ಪದ್ಧತಿಯನ್ನ ಅನುಸರಿಸುವ ಮೂಲಕ ಪ್ರತಿಯೊಬ್ಬರು ತಾವೇ ಆರೋಗ್ಯ ವ್ಯವಸ್ಥೆ ಮಾಡಿಕೊಳ್ಳುವ ವಾತಾವರಣ ನಿರ್ಮಾಣವಾಗಬೇಕು ಎಂದು ಆಶಿಸಿದರು.  

ಬೆಂಗಳೂರಿನ ಎನ್‌ಜೆಇಎಫ್‌, ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪಾರಂಪರಿಕ ವೈದ್ಯ ಪದ್ಧತಿ ಹಲವರ ಅನೇಕಾನೇಕ ಆರೋಗ್ಯ ಸಮಸ್ಯೆ ಬಗೆಹರಿಸುವಲ್ಲಿ ನೆರವಾಗಿದೆ. ಹಾಗಾಗಿಯೇ ಪಾರಂಪರಿಕ ವೈದ್ಯ ಪದ್ಧತಿಯನ್ನು ಪ್ರಚುರಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. 

3,900 ವಿವಿಧ ಗಿಡಮೂಲಿಕೆಗಳ ಲಭ್ಯತೆ, ಪ್ರತಿಯೊಂದು ಮಾಹಿತಿ ಇರುವ ಪುಸ್ತಕ ಸಿದ್ಧಪಡಿಸಲಾಗುತ್ತಿದೆ. ಅತೀ ಬೇಗ ಲೋಕಾರ್ಪಣೆಗೊಳ್ಳಲಿದೆ. ಎಲ್ಲಾ ಶಾಲಾ-ಕಾಲೇಜು, ವಿಶ್ವವಿದ್ಯಾಲಯದಲ್ಲಿ ಆ ಪುಸ್ತಕ ದೊರೆಯುವಂತಾಗಬೇಕು ಎಂಬುದು ತಮ್ಮ ಅಭಿಲಾಷೆ. ಪ್ರತಿಯೊಬ್ಬರಿಗೆ ಗಿಡಮೂಲಿಕೆಗಳ ಸಮಗ್ರ ಪರಿಚಯ ಆಗಬೇಕು ಎಂದು ತಿಳಿಸಿದರು. 

ಪಾರಂಪರಿಕ ವೈದ್ಯ ಪದ್ಧತಿ ಅನುಸರಿಸುವರು ಚಿಕಿತ್ಸೆಗಾಗಿ ನಮ್ಮಲ್ಲಿಗೆ ಬರುವಂತಹರವಲ್ಲಿ ಮೊದಲು ಆತ್ಮವಿಶ್ವಾಸ ಬೆಳೆಸಬೇಕು. ಆರೋಗ್ಯ ಸಮಸ್ಯೆ ನಿವಾರಣೆಯಾಗುವ ವಿಶ್ವಾಸ ಮೂಡಿಸಿದ್ದಲ್ಲಿ ಶೇ. 75 ರೋಗ ವಾಸಿಯಾಗುತ್ತದೆ. ಔಷಧೋಪಾಚಾರದ ಮೂಲಕ ಇನ್ನುಳಿದ ಶೇ. 25 ರಷ್ಟು ಸಮಸ್ಯೆ ನಿವಾರಿಸಬಹುದು.

ಹಣಕ್ಕೆ ಹೆಚ್ಚಿನ ಮಾನ್ಯತೆ ನೀಡದೆ ಸೇವೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಪವಿತ್ರ ಪಂಚವಟಿ ವನಕ್ಕೆ ಚಾಲನೆ ನೀಡಿದ ಲಿಂಗರಾಜು ನಡುಮನಿ ಮಾತನಾಡಿ, ಪಂಚವಟಿ ವನ ಎಂದರೆ ಹತ್ತಿ, ಬಿಲ್ವಪತ್ರೆ, ಬನ್ನಿ, ಅರಳಿ, ಬೇವು ಮರಗಳನ್ನ ಒಂದೇ ಕಡೆ ಬೆಳೆಸುವುದು. ಪೂಜೆಗೆ ಬಳಸುವ ಬಿಲ್ವಪತ್ರೆಯಲ್ಲಿ ಹೃದ್ರೋಗ ಸಮಸ್ಯೆ ದೂರ ಮಾಡುವ ಶಕ್ತಿ ಇದೆ.

ಮಹಿಳೆಯರ ಮಾಸಿಕ ಮುಟ್ಟಿನ ಸಮಸ್ಯೆ ನಿವಾರಣೆ ಇತರೆ ಸಮಸ್ಯೆ ದೂರ ಮಾಡುವ ಶಕ್ತಿ ಬನ್ನಿಯಲ್ಲಿದೆ. ಬೇವು ಬಳಸುವುದರಿಂದ ಚರ್ಮದ ಸಮಸ್ಯೆ ದೂರ ಮಾಡಬಹುದು. ವೃಕ್ಷರಾಜ ಎಂದೇ ಕರೆಯಲ್ಪಡುವ ಅರಳಿಯಿಂದ ಮೂತ್ರಕೋಶ ಸಮಸ್ಯೆ ದೂರ ಮಾಡಬಹುದು. ಹತ್ತಿ ಹಣ್ಣು ತಿನ್ನುವುದರಿಂದ ಕಣ್ಣಿನ ಬೆಳಕು ಹೆಚ್ಚಿಸಬಹುದು ಎಂದು ತಿಳಿಸಿದರು. 

ಈವರೆಗೆ ಶಾಲಾ-ಕಾಲೇಜು ವಿವಿಧೆಡೆ 200 ಪವಿತ್ರ ಪಂಚವಟಿ ವನ ನಿರ್ಮಾಣ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಪವಿತ್ರ ಪಂಚವಟಿ ವನ  ಅಭಿಯಾನ ಪ್ರಾರಂಭಿಸುವ ಚಿಂತನೆ ಇದೆ. ಪಾರಂಪರಿಕವೈದ್ಯಕೀಯ ಪರಿಷತ್‌ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. 

ತರಳಬಾಳು ಕೃಷಿ ವಿಜ್ಞಾನ ಕೇಂದ್ರ ನಿರ್ದೇಶಕ ಡಾ| ಟಿ.ಎನ್‌. ದೇವರಾಜ್‌ ಮಾತನಾಡಿ, ಅತಿ ಪ್ರಾಚೀನವಾದ ಪಾರಂಪರಿಕ ವೈದ್ಯ ಪದ್ಧತಿಯನ್ನ ಪುನರ್‌ಜೀjವನಗೊಳಿಸುವ ಮಹತ್ತರ ಉದ್ದೇಶದಿಂದ ಪಾರಂಪರಿಕ ವೈದ್ಯಕೀಯ ಪರಿಷತ್‌ 9 ತಿಂಗಳ ಜಾನಪದ ಸರ್ಟಿμಕೇಟ್‌ ಕೋರ್ಸ್‌ ಪ್ರಾರಂಭಿಸಲಾಗಿದೆ. ಈ  ಪದ್ಧತಿಯನ್ನ ಮುಂದುವರೆಸುವ ಮೂಲಕ ಎಲ್ಲರಿಗೂ ಅನುಕೂಲ ಮಾಡಬೇಕು ಎಂದು ತಿಳಿಸಿದರು.

ಪರಿಷತ್‌ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ ಅಧ್ಯಕ್ಷತೆ, ಇರಕಲ್‌ನ ಜಗದ್ಗುರು ಶಿವಶಕ್ತಿ ಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಶಿವಮೂರ್ತಪ್ಪ, ಜೆ. ಮಹಾದೇವಯ್ಯ ಇತರರು ಇದ್ದರು. ಪುಷ್ಪಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮಮತಾ ನಾಗರಾಜ್‌ ಸ್ವಾಗತಿಸಿದರು. ಪಂಕಜಾ ವಿ. ರಾಜು ನಿರೂಪಿಸಿದರು.

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.