ಹೆದ್ದಾರಿ ತಡೆ: ರೈತರ ಬಂಧನ-ಬಿಡುಗಡೆ

•ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ•ಬರ ಪರಿಹಾರ ಕಾಮಗಾರಿಗೆ ಒತ್ತಾಯ

Team Udayavani, Jun 11, 2019, 8:23 AM IST

dg-tdy-1..

ದಾವಣಗೆರೆ: ಭೂಸ್ವಾಧೀನ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು.

ದಾವಣಗೆರೆ: ರೈತರಿಗೆ ಮರಣ ಶಾಸನವಾಗಿರುವ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸೋಮವಾರ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-4 ತಡೆ ನಡೆಸಿದ ರೈತ ಸಂಘ ಮತ್ತು ಹಸಿರು ಸೇನೆ(ಕೋಡಿಹಳ್ಳಿ ಚಂದ್ರಶೇಖರ್‌ ಬಣ)ದ 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.

ದೇಶದಲ್ಲಿ 2014ನೇ ಸಾಲಿಗಿಂತ ಮೊದಲು ಜಾರಿಯಲ್ಲಿದ್ದ ಭೂ ಸ್ವಾಧೀನ ಕಾಯ್ದೆ ರಿಯಲ್ ಎಸ್ಟೇಟ್‌ಗೆ ಬಹಳ ಅನುಕೂಲಕರವಾಗಿತ್ತು. ಅಕ್ರಮವಾಗಿ ರೈತರ ಜಮೀನು ಪಡೆಯಬಹುದಾಗಿತ್ತು. ಎಸ್‌ಇಝಡ್‌, ನಗರೀಕರಣದ ಹೆಸರಲ್ಲಿ ರೈತರ ಜಮೀನು ಪಡೆದುಕೊಂಡು ಬೇರೆಯವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆಯಾಗಿತ್ತು. ಅದನ್ನ ಮನಗಂಡ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈಗ ರಾಜ್ಯ ಸರ್ಕಾರ ಆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಲೇಬೇಕು ಎಂದು ರೈತರು ಒತ್ತಾಯಿಸಿದರು.

ರಾಜ್ಯ ಸರ್ಕಾರ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದು ಹಿಂದಿನ ಎಲ್ಲಾ ಅಂಶಗಳನ್ನ ಕೈ ಬಿಟ್ಟು ಜಿಲ್ಲಾಧಿಕಾರಿಗಳಿಗೆ ರೈತರ ಒಪ್ಪಿಗೆ ಇಲ್ಲದೆಯೂ ಹಿಡಿಗಂಟು ನೀಡಿ ಭೂಮಿ ಸ್ವಾಧೀನ ಮಾಡಿಕೊಳ್ಳುವಂತಹ ಅಧಿಕಾರವನ್ನು ನೀಡಿದೆ. ಒಂದೊಮ್ಮೆ ಜಿಲ್ಲಾಧಿಕಾರಿಗಳೇನಾದರೂ ರೈತರ ಒಪ್ಪಿಗೆ ಇಲ್ಲದೆಯೂ ಭೂ ಸ್ವಾಧೀನಕ್ಕೆ ಮುಂದಾದಲ್ಲಿ ರೈತರು ತಮ್ಮದೇ ಆದ ಶಿಕ್ಷೆ ನೀಡುವರು ಎಂದು ಎಚ್ಚರಿಸಿದರು.

ಈಗ ಎಲ್ಲಾ ಕಡೆ ಭೀಕರ ಬರಗಾಲ ಇದೆ. ಎಲ್ಲಾ ಕಡೆ ಕುಡಿಯುವ ನೀರು, ಮೇವಿನ ಸಮಸ್ಯೆ ಇದೆ. ಇಡೀ ನಾಡಿನ ಜನರು ಸಂಕಷ್ಟದಲ್ಲಿದ್ದಾರೆ. ಜನರು ಉದ್ಯೋಗಕ್ಕೆ ಅಲ್ಲ ನೀರಿಗಾಗಿಯೇ ಗುಳೇ ಹೋಗುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ನಮ್ಮನ್ನಾಳುತ್ತಿರುವವರು ಕುರ್ಚಿ ಉಳಿಸಿಕೊಳ್ಳುವಲ್ಲಿ ಗಮನಹರಿಸಿ ರಾಜ್ಯದ ಜನರನ್ನೆ ಮರೆತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಜನರ ಸಂಕಷ್ಟಕ್ಕೆ ಸ್ಪಂದಿಸಿ, ಸಮರೋಪಾದಿಯಲ್ಲಿ ಅಗತ್ಯ ಪರಿಹಾರೋಪಾಯ ಕಾರ್ಯ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬರುವ ಪ್ರತಿಯೊಂದು ಹಳ್ಳಿಗೆ ಓವರ್‌ ಬ್ರಿಡ್ಜ್, ಸರ್ವೀಸ್‌ ರಸ್ತೆ ನಿರ್ಮಾಣ ಮಾಡಬೇಕು. ಹೊಲ-ಗದ್ದೆಗಳಿಗೆ ಹೋಗಲು ರೈತರು ಟೋಲ್ ಕಟ್ಟುವಂತಾಗಿದೆ. ಕೂಡಲೇ ಟೋಲ್ ನಿಲ್ಲಿಸಬೇಕು. ಖರೀದಿ ಕೇಂದ್ರ ಪ್ರಾರಂಭಿಸಿ, ಭತ್ತ ಇತರೆ ಬೆಳೆ ಖರೀದಿಸಬೇಕು. ವೈಜ್ಞಾನಿಕ ಬೆಲೆ ನಿಗದಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಕಾರ್ಯಾಧ್ಯಕ್ಷ ಹಾಳೂರು ನಾಗರಾಜಪ್ಪ, ಚಿಕ್ಕನಹಳ್ಳಿ ಮಲ್ಲೇಶಪ್ಪ, ಕೆಂಚನಹಳ್ಳಿ ಶೇಖರಪ್ಪ, ಆವರಗೆರೆ ಗೋಶಾಲೆ ಬಸವರಾಜ್‌, ಹುಚ್ಚವ್ವನಹಳ್ಳಿ ಗಣೇಶ್‌, ಹೊನ್ನೂರು ರಾಜು, ಮಲ್ಲಶೆಟ್ಟಿಹಳ್ಳಿ ಹನುಮೇಶ್‌ ಇತರರು ಇದ್ದರು. ಹೆದ್ದಾರಿ ತಡೆಯಿಂದ ಕೆಲ ಕಾಲ ಸಂಚಾರ ವ್ಯತ್ಯಯವಾಗಿತ್ತು. ರೈತರನ್ನು ಬಂಧಿಸಿ, ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.