ಜೈನ ಸಾಧುಗಳಿಗೆ ಹೆದ್ದಾರಿ ಬದಿ ವಿಶ್ರಾಂತಿ ಗೃಹ
Team Udayavani, Apr 12, 2021, 4:57 PM IST
ದಾವಣಗೆರೆ: ಸದಾಕಾಲ ಪಾದಯಾತ್ರೆಮಾಡುತ್ತಿರುವ ಜೈನ ಸಾಧು-ಸಾಧ್ವಿಯರಿಗಾಗಿರಾಜ್ಯಾದ್ಯಂತ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಜೈನ ಸಮಾಜ ನಿರ್ಧರಿಸಿದ್ದು, ಇದಕ್ಕಾಗಿ ಸಿದ್ಧತೆ ಆರಂಭಿಸಿದೆ.
ರಾಜ್ಯಾದ್ಯಂತ ಇರುವ ಮುಖ್ಯ ಹೆದ್ದಾರಿಗಳ ಬದಿ ಪ್ರತಿ 15 ಕಿಮೀಗೆ ಒಂದರಂತೆ ರಾಜ್ಯಾದ್ಯಂತ 60 ಕ್ಕೂ ಹೆಚ್ಚು ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಇದಕ್ಕಾಗಿಸೂಕ್ತ ನಿವೇಶನ ಖರೀದಿಗೆ ಸಿದ್ಧತೆ ನಡೆಸಿದೆ.
ಸ್ಥಳೀಯವಾಗಿರುವ ಜೈನ ಸಮುದಾಯದ ಟ್ರಸ್ಟ್‌ಗಳ ಮೂಲಕ ವಿಶ್ರಾಂತಿ ಗೃಹ ನಿರ್ಮಾಣಕ್ಕೆಯೋಗ್ಯ ಸ್ಥಳದಲ್ಲಿ 30/40 ಇಲ್ಲವೇ 15/20 ವಿಸ್ತೀರ್ಣದ ನಿವೇಶನ ಖರೀದಿಸಬೇಕು. ಖರೀದಿ ಪ್ರಕ್ರಿಯೆ ಮುಗಿದ ಬಳಿಕ ರಾಜ್ಯದಲ್ಲಿ ಒಟ್ಟು ಎಷ್ಟುವಿಶ್ರಾಂತಿ ಗೃಹಗಳು ನಿರ್ಮಾಣವಾಗಬೇಕು,ಯಾವೆಲ್ಲ ಸೌಲಭ್ಯ ಇರಬೇಕು ಎಂಬ ಬಗ್ಗೆ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಸರ್ಕಾರದ ಅನುದಾನದಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಬೇಕು ಎಂದು ಜೈನ ಸಮಾಜ ಯೋಜನೆ ರೂಪಿಸಿದೆ.
ರಾಜ್ಯದಲ್ಲಿ ಎರಡು ಸಾವಿರಕ್ಕೂ ಅಧಿಕ ಜೈನ ಸಾಧು-ಸಾಧ್ವಿಯರು ಪಾದಯಾತ್ರೆ ಮಾಡುತ್ತಿದ್ದಾರೆ. ಇವರಿಗಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸುವ ಕುರಿತು ಜೈನ ಸಮುದಾಯದ ಮುಖಂಡರು ಇತ್ತೀಚೆಗೆ ಅಲ್ಪಸಂಖ್ಯಾತ ಇಲಾಖೆ ಸಚಿವ ಶ್ರೀಮಂತ ಪಾಟೀಲ್ ಅವರಿಗೂ ಮನವಿ ಸಲ್ಲಿಸಿದ್ದಾರೆ. ಸಚಿವರು ಸಕಾರಾತ್ಮಕ ಸ್ಪಂದಿಸಿದ್ದು, ಟ್ರಸ್ಟ್ ಗಳ ಮೂಲಕ ನಿವೇಶನ ಖರೀದಿಸಿ ಕಟ್ಟಡ ನಿರ್ಮಾಣದ ಬಗ್ಗೆ ಯೋಜನೆ ತಯಾರಿಸಿ ಕೊಡುವಂತೆ ಸೂಚಿಸಿದ್ದಾರೆ.
ವಿಶ್ರಾಂತಿ ಗೃಹ ಏಕೆ ಬೇಕು?: ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಳಿಕ ಎಲ್ಲ ಸಂತಾಚಾರ್ಯರುಸತ್ಯ, ಧರ್ಮ, ಅಹಿಂಸೆ ಕುರಿತು ಬೋಧನೆಮಾಡಲು ದೇಶಾದ್ಯಂತ ಪಾದರಕ್ಷೆ ಇಲ್ಲದೇಕಾಲ್ನಡಿಗೆಯಲ್ಲಿ ಸಾಗುತ್ತಾರೆ. ಸೂರ್ಯಾಸ್ತದನಂತರ ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ, ಎಲ್ಲ ಕಡೆ ಸರ್ಕಾರಿ ಶಾಲೆಗಳು ಸಿಗುವುದಿಲ್ಲ. ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಜೈನ ಸಮುದಾಯ ಮುಂದಾಗಿದೆ.
ಜೈನ ಸನ್ಯಾಸಿಗಳು ರಾತ್ರಿ ಹೊತ್ತು ವಿಶ್ರಾಂತಿ ಪಡೆಯಲು ಯೋಗ್ಯ ವಿಶ್ರಾಂತಿ ಗೃಹಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಆಲೋಚಿಸಿದ್ದು, ಇದಕ್ಕಾಗಿ ಸ್ಥಳೀಯ ಟ್ರಸ್ಟ್‌ಗಳ ಮೂಲಕ ನಿವೇಶನ ಖರೀದಿಸಲು ಸಿದ್ಧತೆ ನಡೆದಿದೆ.ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಪಡೆಯಲು ಯೋಜನೆ ರೂಪಿಸಲಾಗಿದೆ. – ಗೌತಮ್ ಜೈನ್, ನಿರ್ದೇಶಕರು, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
–ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.