ಹಿರೇಕಲ್ಮಠ ಮಹಾರಥೋತ್ಸವ
Team Udayavani, Sep 8, 2018, 4:42 PM IST
ಹೊನ್ನಾಳಿ: ಇಲ್ಲಿನ ಸುಕ್ಷೇತ್ರ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಶಹನಾಯಿ, ಭಜನೆ, ಡೊಳ್ಳು, ನಾಸಿಕ್ ಡೊಳ್ಳು, ಚಂಡಿ ವಾದ್ಯ, ಕೀಲು ಕುದುರೆ, ಪುರವಂತರ ಉರುವಣೆ, ಸಕಲ ಬಿರುದಾವಳಿಗಳು ಹಾಗೂ ವಿನೋದಾವಳಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು.
ರಥದಲ್ಲಿ ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಆಸೀನರಾದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಹಾರಿಸುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಚನ್ನಪ್ಪ ಸ್ವಾಮಿಗಳಿಗೆ ಜಯವಾಗಲಿ, ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಗೆ, ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರಿಗೆ ಜಯವಾಗಲಿ ಎನ್ನುವ ಘೋಷಣೆಗಳು ಮೆರವಣಿಗೆಯುದ್ದಕ್ಕೂ ಕೇಳಿ ಬಂದವು. ರಥೋತ್ಸವ ಶ್ರೀಮಠದಿಂದ ಪ್ರಾರಂಭವಾಗಿ ಖಾಸಗಿ ಬಸ್ ನಿಲ್ದಾಣದವರೆಗೆ ಸಾಗಿ ಪುನಃ ಶ್ರೀಮಠಕ್ಕೆ ಮರಳಿತು.
ರಥೋತ್ಸವಕ್ಕೂ ಮುನ್ನ ಧ್ವಜ, ಹೂವಿನ ಹಾರಗಳು ಸೇರಿದಂತೆ ಇತರ ಪ್ರಮುಖ ವಸ್ತುಗಳನ್ನು ಬಹಿರಂಗ
ಹರಾಜು ಮಾಡಲಾಯಿತು.
ಕೆಂಡದರ್ಚನೆ: ರಥೋತ್ಸವಕ್ಕೆ ಮುನ್ನ ಶ್ರೀಮಠದ ಮುಂಭಾಗದಲ್ಲಿ ವೀರಭದ್ರದೇವರ ಕೆಂಡದರ್ಚನೆ ಅಂಗವಾಗಿ ಸಾವಿರಾರು ಭಕ್ತರು ಕೆಂಡ ಹಾಯ್ದರು. ಮಕ್ಕಳು, ಹೆಣ್ಣುಮಕ್ಕಳು, ವಯೋವೃದ್ಧರು ಕೆಂಡ ಹಾಯುವ ಮೂಲಕ ತಮ್ಮ ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.
ಸಾಮೂಹಿಕ ಭೋಜನ: ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀಮಠದ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚಿನ ಭಕ್ತರು ಗೋಧಿಪಾಯಸ, ಅನ್ನ, ಸಾಂಬಾರು, ಪಲ್ಯ ಸ್ವೀಕರಿಸಿದರು.
ಚೌಡೇಶ್ವರಿದೇವಿಯ ಶಾಂತ್ಯರ್ಥವಾಗಿ ಹೋಮ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿದವು. ಜಂಗಮ ವಟುಗಳಿಗೆ ಶಿವದೀಕ್ಷಾ ಕಾರ್ಯಕ್ರಮ ನಡೆಯಿತು. ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಮಳೆ ಸಿಂಚನ: ರಥೋತ್ಸವ ಪ್ರಾರಂಭ ಸಮಯದಲ್ಲಿ 5 ನಿಮಿಷ ಮಳೆ ಸುರಿದರೂ ನಂತರ ಸ್ವತ್ಛ ಬಿಸಿಲು ಬಿತ್ತು. ರಥೋತ್ಸವಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಶಾಸಕ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ. ಶಾಂತನಗೌಡ ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಗಳ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.