ಗೂಂಡಾ ಕಾಯ್ದೆಯಡಿ ಜಮೀರ್ ಬಂಧಿಸಿ: ರೇಣು
Team Udayavani, Apr 26, 2020, 11:33 AM IST
ಹೊನ್ನಾಳಿ: ಪಟ್ಟಣ ಪಂಚಾಯತ್ ಆವರಣದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ವಾರಿಯರ್ಗೆ ಊಟ ಬಡಿಸಿದರು.
ಹೊನ್ನಾಳಿ: ಬೆಂಗಳೂರಿನ ಪಾದರಾಯನಪುರ ಘಟನೆಗೆ ಮುಖ್ಯ ಕಾರಣಕರ್ತರಾಗಿರುವ ಶಾಸಕ ಜಮೀರ್ ಅಹಮ್ಮದ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.
ಪಟ್ಟಣ ಪಂಚಾಯತ್ ಆವರಣದಲ್ಲಿ ಶನಿವಾರ ಕೋವಿಡ್ ವಾರಿಯರ್ಗೆ ಊಟ ಬಡಿಸಿ ಅವರು ಮಾತನಾಡಿದರು. ಪಾದರಾಯನಪುರ ಬಡಾವಣೆಯಲ್ಲಿ ಕೋವಿಡ್ ಸೋಂಕಿತರ ಬಗ್ಗೆ ಮಾಹಿತಿ ಪಡೆಯಲು ತೆರಳಿದ್ದ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಖಂಡನೀಯ. ಇದಕ್ಕೆ ಕಾರಣರಾದ ಜಮೀರ್ ಅಹಮ್ಮದ್ ಮೇಲೆ ತಕ್ಷಣ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಪಾದರಾಯನಪುರ ಘಟನೆಯ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿದ್ದಕ್ಕೆ ಸರ್ಕಾರದ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ದುರುದ್ದೇಶದಿಂದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕರ್ನಾಟಕ ಹಾಗೂ ಕೇರಳ ಗಡಿ ಭಾಗವನ್ನು ಬಂದ್ ಮಾಡಬೇಡಿ ಎಂದು ಮನವಿ ಮಾಡಿದ್ದರು. ಈಗ ಅವರ ಮಗ ಕುಮಾರಸ್ವಾಮಿ ನನ್ನ ಕ್ಷೇತ್ರ ರಾಮನಗರಕ್ಕೆ
ಪಾದರಾಯನಪುರದ ಆರೋಪಿಗಳನ್ನು ಸ್ಥಳಾಂತರಿಸಿದ್ದು ತಪ್ಪು ಎಂದು ಹೇಳುತ್ತಾರೆ. ಇಂತಹ ದ್ವಂದ್ವ ಹೇಳಿಕೆಗಳನ್ನು ಕೊಡುವುದು ಎಷ್ಟು ಸರಿ, ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ರಾಮನಗರಕ್ಕಷ್ಟೇ ಸೀಮಿತರೇ ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ವಿಪಕ್ಷ ನಾಯಕರು ಸರ್ಕಾರಕ್ಕೆ ಸಹಕಾರ ನೀಡದೆ ಅಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು.
ಕೋವಿಡ್ ವೈರಸ್ ನಿಯಂತ್ರಣ ಕಾರ್ಯವನ್ನು ಕರ್ನಾಟಕ ಸರ್ಕಾರ ಉತ್ತಮವಾಗಿ ಮಾಡುತ್ತಿದೆ. ಹಾಗಾಗಿ ಆರಂಭದಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ 11ನೇ ಸ್ಥಾನಕ್ಕೆ ಇಳಿದಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಕೂಡ ಮುಖ್ಯಮಂತ್ರಿಗಳನ್ನು ಪ್ರಶಂಸಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Davanagere ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಾರಂಭಕ್ಕೆ ತಿಕ್ಕಾಟ; ಕೊನೆಗೆ ಮುಂದೂಡಿಕೆ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
MUST WATCH
ಹೊಸ ಸೇರ್ಪಡೆ
Mangaluru; ಫುಟ್‌ಬಾಲ್ ಕ್ವಾರ್ಟರ್ ಫೈನಲ್ :ಕಸಬ ಬ್ರದರ್ ಮೇಲುಗೈ
BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ
Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.