ಮೂರು ವರ್ಷದಲ್ಲಿ ರಾಜ್ಯದ ಅಭಿವೃದಿ
ಹೊನ್ನಾಳಿಯಲ್ಲಿ ಕೃಷಿ ಮೇಳಬಿಜೆಪಿಯಿಂದ ಉತ್ತಮ ಆಡಳಿತ ರೈತರ ಹಿತ ಕಾಪಾಡಲು ಪ್ರಧಾನಿ ಶಕ್ತಿ ಮೀರಿ ಶ್ರಮ
Team Udayavani, Mar 7, 2020, 11:28 AM IST
ಹೊನ್ನಾಳಿ: ವಿಪಕ್ಷದವರು ಏನೇ ಟೀಕೆ ಮಾಡಲಿ, ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರು ಉತ್ತಮ ಹಾಗೂ ವಸ್ತುಸ್ಥಿತಿ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಲಿಂ| ಒಡೆಯರ್ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಲಿಂ| ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಪುಣ್ಯಸ್ಮರಣೆ ಅಂಗವಾಗಿ ಶುಕ್ರವಾರ ಚಂದ್ರಸ್ಮರಣೆ ಕೃಷಿಮೇಳ-2020 ಕಾರ್ಯಕ್ರಮದನ್ವಯ ಹಮ್ಮಿಕೊಂಡಿದ್ದ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಮೂರು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುತ್ತೇವೆ. ಸದಾ ಚಟುವಟಿಕೆಯಿಂದ ಕೆಲಸ ಮಾಡುವ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅಭಿವೃದ್ಧಿಪರ ಚಿಂತನೆ ಮಾಡುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ತೋಟಗಾರಿಕೆ ಸಚಿವ ನಾರಾಯಣಗೌಡ ಮಾತನಾಡಿ, ರೈತರ ಹಿತ ಕಾಪಾಡುವ ಕೃಷಿಮೇಳದೊಂದಿಗೆ ದೇಹದ ಆರೋಗ್ಯ ಕಾಪಾಡುವ ಯೋಗ ಕಾರ್ಯಕ್ರಮ ಹಮ್ಮಿಕೊಂಡು ಯೋಗ ಗುರು ಬಾಬಾ ರಾಮ್‌ದೇವ್ ಅವರನ್ನು ಕರೆಯಿಸಿ ಜನರಿಗೆ ಯೋಗದ ಬಗ್ಗೆ ಮಾಹಿತಿ ನೀಡಿರುವುದು ಬಹು ದೊಡ್ಡ ಕಾರ್ಯಕ್ರಮ. ರೈತನಿಗೆ ಶಕ್ತಿ ತುಂಬುವ ಕೆಲಸ ಈ ರಾಜ್ಯಮಟ್ಟದ ಕೃಷಿಮೇಳದಿಂದಾಗಬೇಕು ಎಂದು ನುಡಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರಾಸ್ತಾವಿಕ ಮಾತನಾಡಿ, ಹಿರೇಕಲ್ಮಠ ತನ್ನದೇ ಆದ ಭವ್ಯ ಪರಂಪರೆ, ಇತಿಹಾಸ ಹೊಂದಿದೆ. ನೂರಾರು ಎಕರೆ ಜಮೀನು ಶ್ರೀಮಠಕ್ಕಿದ್ದು, ಗುರುಗಳು ಅತ್ಯಂತ ಕಡಿಮೆ ಅವಧಿಯಲ್ಲಿ ತುಂಗಭದ್ರಾ ನದಿಯಿಂದ ಪೈಪ್‌ಲೈನ್ ಮೂಲಕ ಶ್ರೀಮಠದ ಪುಷ್ಕರಣಿಗೆ ನೀರು ಹರಿಸಿದ್ದಾರೆ ಎಂದು ಹೇಳಿದರು.
ರೈತರ ಹಿತ ಕಾಪಾಡಲು ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡಲಾಗುವುದು ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ಹೇಳಿದರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ರೈತ ದೇಶದ ಬೆನ್ನೆಲುಬು ಎಂದು ಹೇಳಿದರೆ ಸಾಲದು, ರೈತರ ಹಿತ ಕಾಪಾಡುವಂತಹ ಕೆಲಸ ಅತ್ಯಂತ ಶೀಘ್ರದಲ್ಲಿ ಆಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರ ಹಿತ ಕಾಪಾಡಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಹರಿಹರದ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿ, ರಾಜ್ಯದಲ್ಲಿ ಎಲ್ಲರನ್ನು ಒಪ್ಪಿ, ಅಪ್ಪಿಕೊಳ್ಳುವಂತಹ ಮಠ ಇದ್ದರೆ ಅದು ಹಿರೇಕಲ್ಮಠ. ಹಿಂದಿನ ಹಾಗೂ ಈಗಿನ ಗುರುಗಳು ಜಾತಿ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕೆಲ ಮಠಗಳು ಕೇವಲ ತಮ್ಮ ಸಮಾಜದ ಹಿತ ಕಾಪಾಡುವ ಕೆಲಸ ಮಾಡುತ್ತಿವೆ ಎಂದ ಅವರು, ಕೆಲ ಮಠಾಧೀಶರು ರಾಜ್ಯದ ಮುಖ್ಯಮಂತ್ರಿಗಳನ್ನು ಹಿಡಿದಿಟ್ಟುಕೊಳ್ಳಲು ಬೆದರಿಕೆ ಹಾಕುವಂತಹ ಮಟ್ಟಕ್ಕೆ ಹೋಗಿದ್ದಾರೆ ಎಂದು ಯಾರ ಹೆಸರೂ ಹೇಳದೆ ದೂರಿದರು.
ಒಕ್ಕಲುತನ ಮಾಡುವ ವರನಿಗೆ ಹೆಣ್ಣು ಕೊಡದ ಪರಿಸ್ಥಿತಿ ಉಂಟಾಗಿದೆ. ಕೃಷಿಕರು ಎಚ್ಚೆತ್ತುಕೊಂಡು ಸಂಘಟನೆಯಾಗಿ ಕೃಷಿ ದುಡಿಮೆಗಾರನಿಗೆ ತಮ್ಮ ಹೆಣ್ಣುಮಕ್ಕಳನ್ನು ಮದುವೆ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.
ಸರ್ಕಾರಿ ಕೆಲಸ ಯಾವುದೇ ಆಗಿರಲಿ, ಒಬ್ಬ ಕ್ಲಾರ್ಕ್ ಆಗಿರಲಿ ಆತನಿಗೆ ತಮ್ಮ ಹೆಣ್ಣುಮಗಳನ್ನು ಕೊಟ್ಟು ಮದುವೆ ಮಾಡುತ್ತೇವೆ ಎಂದು ರೈತರು ಹೇಳುವ ಕಾಲ ಇದಾಗಿದೆ. ಹೀಗಾಗಬಾರದು, ನಾನು ರೈತ ಎಂದು ಹೆಮ್ಮೆಯಿಂದ ಹೇಳಬೇಕು ಎಂದು ಅವರು ಹೇಳಿದರು.
ನಾನು ದಾವಣಗೆರೆ ಜಿಲ್ಲಾಧಿಕಾರಿಯಾಗಿರುವಷ್ಟು ಕಾಲ ಜನರ ಸೇವೆ ಮಾಡಬೇಕೆನ್ನುವುದೇ ನನ್ನ ಗುರಿ ಎಂದು ಹೇಳಿದರು.
ಮಾಜಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿದರು. ಶ್ರೀಶೈಲ, ಉಜ್ಜಯನಿ ಹಾಗೂ ಕಾಶಿ ಜಗದ್ಗುರುಗಳು ಸಾನ್ನಿಧ್ಯವಹಿಸಿದ್ದರು. ಹಿರೇಕಲ್ಮಠದ ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.