ಕೋವಿಡ್ ಸೋಂಕು ಅವಮಾನವಲ್ಲ: ರೇಣುಕಾಚಾರ್ಯ
Team Udayavani, Jul 6, 2020, 4:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊನ್ನಾಳಿ: ಕೋವಿಡ್ ಸೋಂಕು ಅನುಮಾನ ಬಂದಾಗ ವೈದ್ಯರು ಸಹಜವಾಗಿ ಪರೀಕ್ಷೆಗೊಳಪಡಿಸುತ್ತಾರೆ. ಜನತೆ ಅನ್ಯಥಾ ಭಾವಿಸಬಾರದು. ತಾಲೂಕಿನ ಹತ್ತೂರು, ಕ್ಯಾಸಿನಕೆರೆ, ದೊಡ್ಡೇರಿ ಗ್ರಾಮಗಳಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಅವರನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕು ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಮ್ಮಿಕೊಂಡಿದ್ದ ಶಿವ ಶರಣ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲ ಗ್ರಾಮಗಳಲ್ಲಿ ಕೋವಿಡ್ ಬಗ್ಗೆ ಇಲ್ಲಸಲ್ಲದ ಸಂಶಯ ವ್ಯಕ್ತಪಡಿಸುತ್ತಿರುವುದಲ್ಲದೆ ಕೋವಿಡ್ ಸೋಂಕು ಗ್ರಾಮದಲ್ಲಿ ಬಂದಿದ್ದು ತಿಳಿದು ಇತರ ಗ್ರಾಮದವರು ತಮ್ಮ ಗ್ರಾಮಕ್ಕೆ ಬರುತ್ತಿಲ್ಲ ಎಂದು ದೂರುತ್ತಿದ್ದಾರೆ. ಇದು ಸಲ್ಲದು ಎಂದ ಅವರು, ರೋಗ ಬಂದಿದೆ-ನಮಗೆ ಅವಮಾನವಾಗಿದೆ ಎಂದು ಭಾವಿಸಬಾರದು ಎಂದರು.
ಯುವಕರಿಗೆ ಕೋವಿಡ್ ಸೋಂಕು ಇದ್ದರೂ ಕೆಲವೊಮ್ಮೆ ರೋಗ ಲಕ್ಷಣ ಕಾಣಿಸಿಕೊಳ್ಳದೇ ಗುಣಮುಖವಾಗಬಹುದು. ಅದು ದೇಹದ ಇಮ್ಯೂನಿಟಿ ಪ್ರಭಾವ. ಆದರೆ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳಿಗೆ ಈ ರೋಗ ಮಹಾಮಾರಿಯಾಗಿ ಕಾಡುತ್ತದೆ. ಅವರು ಗುಣಮುಖರಾಗುವುದು ಕಠಿಣ. ಆದ್ದರಿಂದ ಕುಟುಂಬದಲ್ಲಿ ಎಲ್ಲರೂ ಬಹು ಎಚ್ಚರಿಕೆಯಿಂದ ಇರಬೇಕು ಎಂದರು.
ತಹಶೀಲ್ದಾರ್ ತುಷಾರ್ ಹೊಸೂರು, ಪ.ಪಂ ಮುಖ್ಯಾಧಿಕಾರಿ ಎಸ್.ಆರ್.ವೀರಭದ್ರಯ್ಯ, ತಾಲೂಕು ವೈದ್ಯಾಧಿಕಾರಿ ಡಾ| ಕೆಂಚಪ್ಪ, ಪಿಎಸ್‌ಐ ತಿಪ್ಪೇಸ್ವಾಮಿ, ಹಡಪದ ಸಮಾಜದ ತಾಲೂಕು ಉಪಾಧ್ಯಕ್ಷ ವಿರೂಪಾಕ್ಷಪ್ಪ, ಕಾರ್ಯದರ್ಶಿ ಸುರೇಶ್, ಸಹ ಕಾರ್ಯದರ್ಶಿ ಚನ್ನಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.