ಆಸ್ಪತ್ರೆ ಅವ್ಯವಸ್ಥೆ ಕಂಡು ಹೌಹಾರಿದ ಜಿಪಂ ತಂಡ

Team Udayavani, Jun 16, 2018, 9:54 AM IST

davangere-1.jpg

ದಾವಣಗೆರೆ: ಸುಮಾರು 80 ವರ್ಷದ ಹಳೆಯ ಕಟ್ಟಡದ ಮೇಲೆ 9 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟುತ್ತಿರುವುದನ್ನು
ಕಂಡು ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಕ್ಷಣ ಕಾಲ ಅವಕ್ಕಾದ ಘಟನೆ ಶುಕ್ರವಾರ ಚಾಮರಾಜಪೇಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್‌ ಭೇಟಿ ಸಂದರ್ಭದಲ್ಲಿ ನಡೆಯಿತು.

ಜಿಪಂ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಉಪಾಧ್ಯಕ್ಷೆ ಗೀತಾ ಗಂಗಾನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೈಲ ಬಸವರಾಜ್‌, ಬಿ.ಎಂ. ವಾಗೀಶಸ್ವಾಮಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಂದರ್ಭದಲ್ಲಿ 1932ರಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆ ಕಟ್ಟಡದ ಮೇಲೆ ಮತ್ತೂಂದು ಕಟ್ಟಡ ಕಟ್ಟುತ್ತಿರುವುದನ್ನು ಕಂಡು ಬೆಚ್ಚಿ ಬಿದ್ದರು.

ಮಳೆಗಾಲದಲ್ಲಿ ಸೋರುವ ಹಳೆಯ ಕಟ್ಟಡದ ಮೇಲೆ ಇನ್ನೊಂದು ಕಟ್ಟಡ ಕಟ್ಟಲಿಕ್ಕೆ ಸಾಧ್ಯವೇ?. ಇದಕ್ಕೆ
ಪರವಾನಗಿ ಪಡೆಯಲಾಗಿದೆಯೇ ಎಂದು ಪ್ರಶ್ನಿಸಿದರು. ಸಂಬಂಧಿತ ಇಲಾಖೆಯಿಂದ ಎನ್‌ಒಸಿ (ನೋ ಅಬ್ಜೆಕ್ಷನ್‌ ಸರ್ಟಿ ಫಿಕೇಟ್‌)  ಪಡೆದಿರುವುದಾಗಿ ಗುತ್ತಿಗೆದಾರ  ತಿಳಿಸಿದರು.

ವಾರ್ಡ್‌ಗಳಲ್ಲೂ ಯಾವುದೇ  ರೀತಿಯ ಸ್ವಚ್ಛ ಇಲ್ಲ. ದುರ್ವಾಸನೆ ಹರಡಿದೆ. ಹೊರ ಮತ್ತು ಒಳ ರೋಗಿಗಳಿಗೆ ಶುದ್ಧ ಕುಡಿಯುವ ನೀರು ಕೂಡ ಇಲ್ಲ. ಹಾಸಿಗೆ, ಹೊದಿಕೆಗಳು ಗಲೀಜಾಗಿರುವುದನ್ನು ನೋಡಿದರೆ ಆಸ್ಪತ್ರೆ ಎನ್ನುವಂತಿಲ್ಲ ಎಂದು ಭೇಟಿ ನೀಡಿದ ತಂಡ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಜನರು ಗುಣಮುಖರಾಗಲು ಆಸ್ಪತ್ರೆಗೆ ಬರುತ್ತಾರೆ. ಅದರೆ, ಇಲ್ಲಿ ನೋಡಿದರೆ ರೋಗ ಇಲ್ಲದವರಿಗೂ ರೋಗ ಬರುವಂತಿದೆ. ಮೊದಲು ಸ್ವತ್ಛ, ಶುದ್ಧ ವಾತಾವರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಂಡ  ಸೂಚಿಸಿತು.

ಸ್ನಾನಕ್ಕೆ ಬಿಸಿ ನೀರು, ಶುದ್ಧ ಕುಡಿಯುವ ನೀರು ಇಲ್ಲ, ರೋಗಿಗಳ ವಸ್ತು ಇಟ್ಟುಕೊಳ್ಳಲು ಯಾವುದೇ ಟೇಬಲ್‌ ಇಲ್ಲ ಎಂಬ ಆರೋಪಗಳು ರೋಗಿಗಳು, ಸಂಬಂಧಿಕರಿಂದ ಕೇಳಿ ಬಂದವು. ನೂತನವಾಗಿ ನಿರ್ಮಿಸಲಾಗುತ್ತಿರುವ ನೂರು ಹಾಸಿಗೆಯುಳ್ಳ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದ  ತಂಡ, ಈ ಕಟ್ಟಡಕ್ಕೆ ಈಗಾಗಲೇ 50 ಹಾಸಿಗೆಗಳು ಮಂಜೂರಾಗಿವೆ. ಬೇಗೆನೆ ಪೂರ್ಣಗೊಳಿಸಬೇಕು ಎಂದು ಸೂಚಿಸಿತು.

ಅರವಳಿಕೆ ತಜ್ಞ ಡಾ| ಬಸವರಾಜ್‌ ಮಾತನಾಡಿ, ಆಸ್ಪತ್ರೆಯಲ್ಲಿನ ಸಣ್ಣಪುಟ್ಟ ಸಮಸ್ಯೆಗಳ ನಿವಾರಣೆಗೆ ಯಾವುದೇ ರೀತಿಯ ಅನುದಾನ ಇಲ್ಲದೆ ಸಮಸ್ಯೆ ಆಗುತ್ತಿದೆ. ರೋಗಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಡಳಿತಾತ್ಮಕ
ಖರ್ಚಿಗಾಗಿ 2 ಲಕ್ಷ ನೀಡಲಾಗುತ್ತಿದೆ. ಸಣ್ಣಪುಟ್ಟ ಸಮಸ್ಯೆ ಬಗೆಹರಿಸಿಕೊಳ್ಳಲು, ನಿರ್ವಹಣೆಗಾಗಿ ಪ್ರತ್ಯೇಕ ಅನುದಾನದ ಅಗತ್ಯ ಇದೆ ಎಂದು ತಿಳಿಸಿದರು. ಪ್ರಭಾರ ಅಧೀಕ್ಷಕ ಡಾ| ನೀಲಕಂಠ ಇದ್ದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.