Shettar ಕಾಂಗ್ರೆಸ್ ಗೆ ಬಂದರೆ ಹುಬ್ಬಳ್ಳಿ ಸೆಂಟ್ರಲ್ ಟಿಕೆಟ್ ಫಿಕ್ಸ್: ಶಾಮನೂರು ಶಿವಶಂಕರಪ್ಪ
Team Udayavani, Apr 16, 2023, 2:11 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ನಮ್ಮ ಬೀಗರು. ಅವರನ್ನು ನಮ್ಮ ಮಗ ಪಕ್ಷಕ್ಕೆ ಕರೆಯುತ್ತಾನೆ. ಅವರು ಕಾಂಗ್ರೆಸ್ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದರು.
ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಅವರು ಪಕ್ಷಕ್ಕೆ ಬರುವಂತೆ ಅವರ ಜೊತೆ ಮಾತನಾಡಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಅವರು ಕಾಂಗ್ರೆಸ್ ಗೆ ಬರಬಹುದು. ಬಿಜೆಪಿಯವರು ಇಂತಹ ಕೆಲಸ ಮಾಡಿಯೇ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಬಿಜೆಪಿಗೆ 60 ಸೀಟ್ ಸಹ ಬರುವುದಿಲ್ಲ ಎಂದರು.
ಇದನ್ನೂ ಓದಿ:Karnataka Polls: ಸಂಸದ ಸಂಗಣ್ಣ ಕರಡಿ ಮನವೊಲಿಕೆಗೆ ಸಿಎಂ, ಬಿಎಸ್ವೈ, ಕಟೀಲ್ ಯತ್ನ
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಅವರಿಗೆ ಟಿಕೆಟ್ ಕೊಡಲೇಬೇಕಾಗುತ್ತದೆ, ಟಿಕೆಟ್ ಕೊಟ್ಟರೆ ಅವರು ಕಾಂಗ್ರೆಸ್ ಸೇರುವುದು ಪಕ್ಕ. ನಮ್ಮ ಮಗ ಅವರ ಬೀಗರು (ಜಗದೀಶ್ ಶೆಟ್ಟರ್) ಕಾಂಗ್ರೆಸ್ ಗೆ ಬರುವಂತೆ ಮಾತನಾಡುತ್ತಿದ್ದಾರೆ. ಕಾದು ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಗದೀಶ್ ಶೆಟ್ಟರ್ ಅವರೊಂದಿಗೆ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗುತ್ತದೆಯೋ ಕಾದು ನೋಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಬಂಪರ್ ಹೊಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.