ಮಾನವ ದಾನವನಾಗುತ್ತಿರುವುದು ಆತಂಕಕಾರಿ: ಡಾ| ಗಂಗಪ್ಪ
Team Udayavani, Jan 12, 2019, 7:57 AM IST
ಹೊನ್ನಾಳಿ: ಉಣ್ಣುವ ಪ್ರಸಾದದಲ್ಲಿ, ಕುಡಿಯುವ ನೀರಿನಲ್ಲಿ ವಿಷ ಬೆರೆಸುವ ರಾಕ್ಷಸ ಪ್ರವೃತ್ತಿ ಬೆಳೆಯುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಾ| ಡಿ.ಬಿ. ಗಂಗಪ್ಪ ವಿಷಾದ ವ್ಯಕ್ತಪಡಿಸಿದರು.
ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ಹಿರೇಕಲ್ಮಠದ ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ ಮೂರು ದಿನದ ಮೌನ ಲಿಂಗ ಪೂಜಾನುಷ್ಠಾನ ಕಾರ್ಯಕ್ರಮ ಹಾಗೂ ಎಸ್‌ಜೆವಿಪಿ ಬಿಇಡಿ ಕಾಲೇಜು ಪ್ರಶಿಕ್ಷಣಾರ್ಥಿಗಳ ಪೌರತ್ವ ತರಬೇತಿ ಶಿಬಿರದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.
ಪ್ರಕೃತಿ ಮನುಷ್ಯನಿಗೆ ಎಲ್ಲವನ್ನೂ ನೀಡಿದೆ. ಪ್ರಕೃತಿ ಕೊಟ್ಟ ಸಂಪತ್ತನ್ನು ಸುಸಂಬದ್ಧವಾಗಿ ಬಳಕೆ ಮಾಡಿಕೊಳ್ಳುವುದನ್ನು ಮರೆತ ಮಾನವ ದಾನವನಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷೆ ರೇಖಾಪ್ರಕಾಶ್ ಮಾತನಾಡಿ, ಅಧರ್ಮದಿಂದ ಇಂದು ಸಮಾಜ ದಿಕ್ಕು ತಪ್ಪುತ್ತಿದೆ. ಧರ್ಮಾಧಿಕಾರಿಗಳು ಜನರನ್ನು ಸರಿ ದಾರಿಗೆ ತರಲು ಸತತ ಪ್ರಯತ್ನ ನಡೆಸುತ್ತಿದ್ದಾರೆ. ಸಮಾಜದ ಭಾಗವಾಗಿರುವ ನಾವೆಲ್ಲ ಗುರುಗಳಿಗೆ ಸಹಕಾರ ನೀಡಬೇಕಿದೆ ಎಂದು ಹೇಳಿದರು.
ತಾ.ಪಂ ಸದಸ್ಯ ಮರಿಕನ್ನಪ್ಪ ಮಾತನಾಡಿ, ನ್ಯಾಯಾಲಯ, ಪೊಲೀಸ್ ಠಾಣೆಯಲ್ಲಿ ಬಗೆಹರಿಯದ ಜನರ ಸಂಕಷ್ಟಗಳು ಹಾಗೂ ಖಟ್ಲೆಗಳು ಹಿರೇಕಲ್ಮಠದಲ್ಲಿ ಇತ್ಯರ್ಥವಾಗಿವೆ. ಇಂತಹ ಮಠ ನಮ್ಮ ತಾಲೂಕಿನಲ್ಲಿರುವುದು ನಮ್ಮೆಲ್ಲರ ಪುಣ್ಯ ಎಂದು ಬಣ್ಣಿಸಿದರು.
ಸಮಾರಂಭದ ನೇತೃತ್ವ ವಹಿಸಿದ್ದ ಹೊಟ್ಯಾಪುರ ಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬೆಳಗುತ್ತಿ ಗ್ರಾಮದ ರೈತ ಬಾಂಧವರು ಗ್ರಾಮದ ಸುತ್ತಮುತ್ತ ಇರುವ ಕೆರೆಗಳನ್ನು ತುಂಬಿಸುವ ಬಗ್ಗೆ ಚಿಂತನೆ ಮಾಡಿ ಕಾರ್ಯ ಪ್ರವೃತ್ತರಾದರೆ ನಮ್ಮೆಲ್ಲರ ಸಹಕಾರ ಇದ್ದೇ ಇರುತ್ತದೆ ಎಂದು ನುಡಿದರು.
ಗ್ರಾ.ಪಂ ಸದಸ್ಯ ಬಿ.ಟಿ. ಕುಬೇರಪ್ಪ, ಎಸ್‌ಜೆವಿಪಿ ಬಿಇಡಿ ಕಾಲೇಜು ಪ್ರಾಂಶುಪಾಲ ಡಾ| ಎಚ್.ಜಯಪ್ಪ ಮಾತನಾಡಿದರು. ಬಿಆರ್‌ಸಿ ಎಚ್.ಎಸ್. ಉಮಾಶಂಕರ್ ಉಪನ್ಯಾಸ ನೀಡಿದರು. ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಧರ್ಮಸಭೆಯ ಸಾನ್ನಿಧ್ಯ ವಹಿಸಿದ್ದರು.
ಬೆಳಗುತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.