ಅಭಿವೃದ್ಧಿ ರಾಷ್ಟ್ರಗಳಲ್ಲೇ ಮಾನವ ಹಕ್ಕುಗಳ ಉಲ್ಲಂಘನೆ
Team Udayavani, Dec 14, 2018, 2:57 PM IST
ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಅಭಿವೃದ್ಧಿ ಹೊಂದಿರುವ ದೇಶಗಳೇ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಮುಂಚೂಣಿಯಲ್ಲಿವೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಡಾ| ಪಿ.ವಿ. ಕೃಷ್ಣಭಟ್ ತಿಳಿಸಿದ್ದಾರೆ. ಗುರುವಾರ, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಮಾನವ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಾದ ಪರಾಮರ್ಶೆ… ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಗತ್ತಿನಲ್ಲಿ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.
ಆದರೆ, ಆ ರೀತಿ ಕಾಳಜಿ ವ್ಯಕ್ತಪಡಿಸುವ ಅಭಿವೃದ್ಧಿ ಹೊಂದಿದ ದೇಶಗಳೇ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿವೆ ಎಂದರು. ಪ್ರಕೃತಿಯನ್ನ ಇನ್ನಿಲ್ಲದಂತೆ ಬರಿದಾಗಿಸುವ ಪ್ರಯತ್ನ ಅಭಿವೃದ್ಧಿ ಹೊಂದಿದ ದೇಶಗಳಿಂದ ಆಗುತ್ತಿದೆ. ಕೇವಲ ಮಾನವರ ಮೇಲೆ ಮಾತ್ರವಲ್ಲದೇ ಪರಿಸರದ ಮೇಲೆ ನಡೆಯುತ್ತಿರುವ ನಿರಂತರ ಆಕ್ರಮಣಗಳು ಪ್ರಕೃತಿಯ ಹಕ್ಕುಗಳ ಉಲ್ಲಂಘನೆಗೂ ಕಾರಣವಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ಯಶಸ್ವಿ ಆಗಬೇಕಾದರೆ ಮಾನವನ ಹಕ್ಕುಗಳ ಜೊತೆ ಪ್ರಕೃತಿಯ ಸಂರಕ್ಷಣೆ ಹಕ್ಕುಗಳು ಸಹ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಪ್ರಕೃತಿಯನ್ನು ಆರಾಧಿ ಸುವ ಗುಣವನ್ನು ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟ ಕೀರ್ತಿ ಭಾರತದ ಸಂಸ್ಕೃತಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಭಾರತದಲ್ಲಿ ಮಾನವ ಹಕ್ಕುಗಳು ಮಾತ್ರವಲ್ಲದೆ ಜೀವಿಗಳ ಹಕ್ಕನ್ನು ಸಂರಕ್ಷಿಸುವ ಸಂಸ್ಕೃತಿ ಅನಾದಿ ಕಾಲದಿಂದಲೂ ಬೆಳೆದು ಬಂದಿದೆ. ಮಾನವೀಯ ಮೌಲ್ಯಗಳೊಂದಿಗೆ ಪ್ರಕೃತಿಯ ಮೌಲ್ಯಗಳನ್ನು ಸಹ ಮುಂದಿನ ಭವಿಷ್ಯಕ್ಕೆ ತಲುಪಿಸುವ ಗುರುತರ ಹೊಣೆಗಾರಿಕೆ ಯುವ ಪೀಳಿಗೆಯ ಮೇಲಿದೆ ಎಂದು ತಿಳಿಸಿದರು.
ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಸಂಚಾಲಕ ಡಾ| ಸುಧಾಕರ್ ಹೊಸಳ್ಳಿ ಮಾತನಾಡಿ, ಮಾನವ ಹಕ್ಕುಗಳ ಬಗೆಗಿನ ಪರಿಕಲ್ಪನೆ ಹಾಗೂ ಆಳವಾದ ಮಾಹಿತಿ ಕೊರತೆ ಯುವಜನತೆಯನ್ನ ಕಾಡುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿ ಆಗಬೇಕಾದರೆ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಸಂವಿಧಾನದಲ್ಲಿ
ಅಶಕ್ತರನ್ನು ಶಕ್ತರನ್ನಾಗಿ ಮಾಡಲು ರೂಪಿಸಿದ ಕಾನೂನುಗಳು ದುರ್ಬಳಕೆ ಆಗುತ್ತಿವೆ ಎಂದು ವಿಷಾದಿಸಿದರು.
ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ವರ್ತನೆ ಹೇಗಿರಬೇಕು ಎಂಬುದನ್ನು ಅರಿತು ನಡೆದರೆ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ. ಭಾರತದ ಸಂವಿಧಾನವೇ ಒಂದು ರೀತಿಯ ದಿಕ್ಸೂಚಿ ಇದ್ದಂತೆ. ಸಂವಿಧಾನವನ್ನು ಸಮರ್ಪಕವಾಗಿ ಅಧ್ಯಯನ ಮಾಡುವ ಮೂಲಕ ಯುವಜನತೆ ಮಾನವ ಹಕ್ಕುಗಳ ಮಹತ್ವ ತಿಳಿದುಕೊಳ್ಳಬೇಕು ಎಂದರು.
ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ) ಪ್ರೊ| ಪಿ. ಕಣ್ಣನ್, ಪರೀಕ್ಷಾಂಗ ಕುಲಸಚಿವ ಪ್ರೊ| ಬಸವರಾಜ್ ಬಣಕಾರ್, ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜನಾ ಧಿಕಾರಿ ಪ್ರೊ| ಕೆ.ಬಿ. ರಂಗಪ್ಪ ಮತ್ತು ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಿ.ಎಸ್. ಪ್ರದೀಪ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಹೊಸ ಸೇರ್ಪಡೆ
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.