ತೆರಿಗೆ ಪಾವತಿಸದಿದ್ದರೆ ಸಂಕಷ್ಟ ಖಚಿತ: ಅಗರವಾಲ್
Team Udayavani, Feb 15, 2019, 8:28 AM IST
ಹರಿಹರ: ತಮ್ಮ ಆದಾಯದ ಪ್ರಮಾಣಕ್ಕೆ ತಕ್ಕಂತೆ ತೆರಿಗೆ ಪಾವತಿಸದವರು ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸುವುದು ಖಚಿತ ಎಂದು ದಾವಣಗೆರೆ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಸುನಿಲ್ ಕುಮಾರ್ ಅಗರವಾಲ್ ಹೇಳಿದರು.
ನಗರದ ಎಸ್‌ಜೆವಿಪಿ ಕಾಲೇಜಿನ ಸಭಾಂಗಣದಲ್ಲಿ ಆದಾಯ ತೆರಿಗೆ ಇಲಾಖೆಯು ಚೇಂಬರ್ ಆಫ್ ಕಾಮರ್ಸ್ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಆದಾಯ ತೆರಿಗೆ ಕಾನೂನುಗಳ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯಲ್ಲಿ ಅತ್ಯಂತ ವ್ಯವಸ್ಥಿತ ತಂತ್ರಜ್ಞಾನಗಳಿದ್ದು, ಹೆಚ್ಚುವರಿ ಆದಾಯ ಹೊಂದಿದವರು ಒಂದಲ್ಲ ಒಂದು ದಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನ್ಯಾಯಯುತವಾಗಿ ಹಾಗೂ ನಿಯಮಿತವಾಗಿ ತೆರಿಗೆ ಹಣ ಪಾವತಿಸುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಯಾವುದೇ ತೊಂದರೆಯಿಲ್ಲ. ಆದಾಯ ತೆರಿಗೆ ಇಲಾಖೆ ಸ್ನೇಹಮಹಿಯಾಗಿದ್ದು, ತೆರಿಗೆದಾರರಿಗೆ ಅಗತ್ಯ ಸಲಹೆ-ಸೂಚನೆ ನೀಡಲಾಗುತ್ತಿದೆ. ಒಂದು ವೇಳೆ ಹೆಚ್ಚುವರಿ ತೆರಿಗೆ
ಪಾವತಿಸಿದಲ್ಲಿ ಅದನ್ನು ಇಲಾಖೆ 24 ಗಂಟೆಗಳೊಳಗೆ ಮರು ಪಾವತಿ ಮಾಡಲಾಗುತ್ತದೆ ಎಂದರು.
ತೆರಿಗೆ ಪಾವತಿ ಸರಳೀಕರಣಕ್ಕೆ ಇಲಾಖೆ ಈಗಾಗಲೆ ಹಲವಾರು ಕ್ರಮ ಕೈಗೊಂಡಿದ್ದು, ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ತೆರಿಗೆದಾಯಕ ಆದಾಯ ಹೊಂದಿರುವ ಪ್ರತಿಯೊಬ್ಬ ನಾಗರಿಕರೂ ಪ್ರಮಾಣಿಕವಾಗಿ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ದೇಶದ ಆರ್ಥಿಕ, ಸಾಮಾಜಿಕ ಭದ್ರತೆಗಳಿಗೂ ಪೂರಕವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶಂಕರ್ ಖಟಾವಕರ್, ಆದಾಯ ತೆರಿಗೆ ಅಧಿಕಾರಿಗಳು ಅನಗತ್ಯವಾಗಿ ತೊಂದರೆ ನೀಡುತ್ತಾರೆ, ಕಿರುಕುಳ ಕೊಡುತ್ತಾರೆ ಎಂಬುದೆಲ್ಲಾ ಸುಳ್ಳು. ನಮ್ಮ ವ್ಯಾಪಾರಿಗಳೊಂದಿಗೆ ತೆರಿಗೆ ಇಲಾಖೆ ಯಾವಾಗಲೂ ಸ್ನೇಹಮಹಿಯಾಗಿ ವರ್ತಿಸಿದ್ದು, ಮುಂದೆಯೂ ಇದೇ ರೀತಿ ಸಹಕಾರದ ನೀರೀಕ್ಷೆ ಮಾಡುತ್ತೇವೆ ಎಂದರು.
ಆದಾಯ ತೆರಿಗೆ ಅಧಿಕಾರಿಗಳಾದ ಭಾಸ್ಕರ್ ಎಸ್., ಮಂಜು ರಮಣಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಎಸ್. ಜೆ.ವಿ.ಪಿ. ವಿದ್ಯಾಪೀಠದ ಆಡಳಿತಾಧಿಕಾರಿ ಪಾಟೀಲ್ ಎಸ್.ಎಲ್., ದಾವಣಗೆರೆ ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಅಜ್ಜಂಪುರ ಶಂಭುಲಿಂಗಪ್ಪ, ಬಿ.ಜಿ.ಬಸವರಾಜಪ್ಪ, ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ಜಂಬಗಿರಾಧೇಶ, ಡಿ.ಆರ್. ಶಂಕರ್, ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಬಸವರಾಜಪ್ಪ ಹಲಸಬಾಳು, ತೆರಿಗೆ ಸಲಹೆಗಾರರಾದ ಎಚ್.ಎಸ್. ಮಂಜುನಾಥ್ ಸುಬ್ರಮಣ್ಯ, ಶೇಖರ್, ಶಶಿಧರ್, ಲಿಂಗರಾಜ, ಆರ್.ಆರ್. ಕಾಂತರಾಜ್, ಭೂಮಿಕಾ ಸೇರಿದಂತೆ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.