ಸಿಎಂ ಹುದ್ದೆ ನಿಭಾಯಿಸಲು ನಾನು ರೆಡಿ: ಪರಂ
Team Udayavani, Nov 18, 2018, 6:05 AM IST
ದಾವಣಗೆರೆ/ಬೆಳಗಾವಿ: “ಹೈಕಮಾಂಡ್ ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ’ ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ನಡೆದ ಕೆಎಸ್‌ಆರ್‌ಪಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ. ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದರು.
ಇದೇ ವೇಳೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ, ಚಳಿಗಾಲದ ಅಧಿವೇಶನದ ಒಳಗೆ ಅಂದರೆ, ನವೆಂಬರ್ ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಖಾಲಿ ಇರುವ ಕಾಂಗ್ರೆಸ್‌ನ 8 ಹಾಗೂ ಜೆಡಿಎಸ್‌ನ ಇಬ್ಬರು ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು. ಬೆಳಗಾವಿ ಸೇರಿ ಬೇರೆ ಜಿಲ್ಲೆಯ ಆಕಾಂಕ್ಷಿಗಳಿಗೂ ಸಂಪುಟದಲ್ಲಿ ಸ್ಥಾನ ನೀಡಲಾಗುವುದು. ಜತೆಗೆ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕವನ್ನೂ ಮಾಡಲಾಗುವುದು ಎಂದರು.
ಹೇಳಿಕೆ ತಪ್ಪಾಗಿ ವ್ಯಾಖ್ಯಾನಿಸುವ ಅಗತ್ಯವಿಲ್ಲ
ಇದೇ ವೇಳೆ, ದಾವಣಗೆರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೆ ಮುಖ್ಯಮಂತ್ರಿ ಸ್ಥಾನ ನಿಭಾಯಿಸಲು ಸಿದ್ಧ ಎಂಬ ಪರಮೇಶ್ವರ್ ಅವರ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸುವ ಅಗತ್ಯ ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ಅನೇಕರು ಸಮರ್ಥರಿದ್ದಾರೆ. ಅವರಲ್ಲಿ ಡಾ|ಜಿ. ಪರಮೇಶ್ವರ್ ಸಹ ಒಬ್ಬರು. ಹಾಗಾಗಿ, ಪಕ್ಷದ ಹೈಕಮಾಂಡ್ ಅವಕಾಶ ಕೊಟ್ಟರೆ ಮುಖ್ಯಮಂತ್ರಿ ಸ್ಥಾನ ನಿಭಾಯಿಸಲು ಸಿದ್ಧ ಎಂದು ಸಂದರ್ಭಕ್ಕೆ ಅನುಗುಣವಾಗಿ ಹೇಳಿದ್ದಾರೆ. ಅವರ ಈ ಮಾತನ್ನು ತಪ್ಪಾಗಿ ವ್ಯಾಖ್ಯಾನ ಮಾಡುವ ಅಗತ್ಯ ಇಲ್ಲ ಎಂದರು.
ರಾಜ್ಯದಲ್ಲಿ ಸಾಕಷ್ಟು ಸರ್ಕಾರಗಳು ಬಂದಿವೆ, ಹೋಗಿವೆ. ಮುಖ್ಯಮಂತ್ರಿಗಳು ಆಗಿ, ಹೋಗಿದ್ದಾರೆ. ನಾನೂ ಒಳಗೊಂಡಂತೆ ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತ ಅಲ್ಲ. ಪರಮೇಶ್ವರ್ ಅವರು ಆ ರೀತಿ ಹೇಳಿಕೆ ನೀಡಿರುವುದು ನನಗೆ ತಪ್ಪು ಅಂತ ಅನಿಸುತ್ತಿಲ್ಲ ಎಂದರು.
ಅನಿತಾ ಕುಮಾರಸ್ವಾಮಿಯವರು ಸಚಿವರಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ರಾಮನಗರ ಶಾಸಕಿಯಾಗಿದ್ದೇನೆ. ಕ್ಷೇತ್ರದ ಕೆಲಸ ಮಾಡಿಸುತ್ತೇನೆ ಎಂಬುದಾಗಿ ಹೇಳಿದ್ದಾರೆಯೇ ಹೊರತು ನಾನೂ ಸಚಿವೆ ಆಗುತ್ತೇನೆ ಎಂದು ಹೇಳಿಲ್ಲ.
– ಎಚ್.ಡಿ.ಕುಮಾರಸ್ವಾಮಿ, ಸಿಎಂ.
ಸಿಎಂ ಆಸೆ ತಪ್ಪಲ್ಲ- ಡಿಕೆಶಿ
ಬೆಂಗಳೂರು: ಮುಖ್ಯಮಂತ್ರಿ ಆಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಅದು ತಪ್ಪಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಐದು ವರ್ಷಗಳ ಕಾಲ ಜೆಡಿಎಸ್ ಅವರಿಗೆ ಸಿಎಂ ಹುದ್ದೆ ಬರೆದುಕೊಟ್ಟಿದ್ದೇವೆ. ಆ ಮಾತಿನಿಂದ ಹಿಂದೆ ಸರಿಯುವ ಮಾತೇ ಇಲ್ಲ. ನನಗಂತೂ ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಅರ್ಜೆಂಟ್ ಇಲ್ಲ. ಅವರ ಅಭಿಪ್ರಾಯದ ಬಗ್ಗೆ ನಾನು ಏನನ್ನೂ ಹೇಳಲ್ಲ ಎಂದು ತಿಳಿಸಿದರು.
ಕೇಂದ್ರ ತನಿಖಾ ಸಂಸ್ಥೆಯ ಒಂದರಿಂದ ನನಗೆ ನೋಟಿಸ್ ಬಂದಿದೆ. ಅದಕ್ಕೆ ನಾನು ಉತ್ತರಿಸಲು ಸಮರ್ಥನಿದ್ದೇನೆ. ಬೇರೆ ಬೇರೆ ಸಂದರ್ಭಗಳಲ್ಲಿ ಅವರು ನನ್ನಿಂದ ಉತ್ತರ ಪಡೆದುಕೊಂಡಿದ್ದಾರೆ. ಈಗ ಬಂದಿರುವ ನೋಟಿಸ್‌ಗೂ ಉತ್ತರಿಸುತ್ತೇನೆ. ದುರುದ್ದೇಶದಿಂದ ನನಗೆ ನೋಟಿಸ್ ನೀಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಬಹಳಷ್ಟು ವಿಚಾರಗಳು ಹೇಳಬೇಕಿದ್ದು ಸಮಯ ಬಂದಾಗ ಹೇಳುತ್ತೇನೆ.
– ಡಿ.ಕೆ.ಶಿವಕುಮಾರ್, ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.