ಸ್ವಾತಂತ್ರ್ಯೋತ್ಸವ ಆಚರಣೆ ಅಚ್ಚುಕಟ್ಟಾಗಿರಲಿ: ರಮೇಶ್‌

Team Udayavani, Aug 7, 2017, 3:08 PM IST

07-DV-1.jpg

ದಾವಣಗೆರೆ: ಅತ್ಯಂತ ಅಚ್ಚುಕಟ್ಟಾದ 71ನೇ ಸ್ವಾತಂತ್ರ್ಯ ದಿನೋತ್ಸವದ ಆಚರಣೆಗೆ ಎಲ್ಲ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನೋತ್ಸ ಅಚ್ಚುಕಟ್ಟಾಗಿ ನಡೆಯುವಂತೆ ಸಹಕಾರ ನೀಡಬೇಕು ಎಂದರು.

ಅಂದು ಎಲ್ಲಾ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 7.30 ರೊಳಗೆ ಧ್ವಜಾರೋಹಣ ನೆರವೇರಿಸಬೇಕು. ಸರ್ಕಾರಿ ಕಚೇರಿಗಳಿಗೆ ವಿದ್ಯುದೀಪಾಲಂಕಾರ ಮಾಡಬೇಕು. ಅಗತ್ಯವಿದ್ದರೆ ಸುಣ್ಣ ಬಣ್ಣ ಬಳಸುವಂತೆ ಸೂಚಿಸಿದರು. ಸ್ವಾತಂತ್ರ್ಯ ದಿನೋತ್ಸವದ ವೇದಿಕೆ ನಿರ್ಮಾಣ ಧ್ವನಿವರ್ಧ, ವಿದ್ಯುತ್‌ ದೀಪಗಳ ಅಲಂಕಾರದ ಜವಾಬ್ದಾರಿಯನ್ನ ಮಹಾನಗರ ಪಾಲಿಕೆ ವಹಿಸಿಕೊಳ್ಳಬೇಕು. ಕ್ರೀಡಾಂಗಣದ ಸಿದ್ದತೆ ಮತ್ತು ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಸಂಬಂಧಿತ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಸಾರಿಗೆ ಇಲಾಖೆಯವರು ಶಾಲಾ-ಕಾಲೇಜು ಮಕ್ಕಳನ್ನು ಸಮಾರಂಭಕ್ಕೆ ಕರೆ ತರಲು ಸೂಕ್ತ ವ್ಯವಸ್ಥೆ ಮಾಡಬೇಕು. 32 ಶಾಲಾ ಮಕ್ಕಳ ತಂಡಗಳು ಪೆರೇಡ್‌ನ‌ಲ್ಲಿ ಭಾಗವಹಿಸಲಿದ್ದು, ಪೊಲೀಸ್‌ ಇಲಾಖೆಯುಂದಿಗೆ ಸಮನ್ವಯ ಸಾಧಿಸಿ ಪಥ ಸಂಚಲನ ಆಕರ್ಷವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅಂದು ಸಂಜೆ ಕುವೆಂಪು ಕನ್ನಡ ಭವನದಲ್ಲಿ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಶಾಲಾ ಮಕ್ಕಳಿಂದ 30 ರಿಂದ 45 ನಿಮಿಷಗಳ ಸಾಂಸ್ಕೃತಿಕ ಕಾರ್ಯಕ್ರಮವಿರಲಿ ಹಾಗೂ ಯಾವುದೇ ಹಾಡುಗಳು ಪುನರಾವರ್ತನೆಯಾಗದಂತೆ ಗಮನ ನೀಡಬೇಕು ಎಂದು ಸೂಚಿಸಿದರು. ಆಹಾರ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ| ಎನ್‌.ಟಿ. ಮಂಜುನಾಥ್‌ ಮಾತನಾಡಿ, ಆ.14 ರ ಸಂಜೆ ಶಾಲೆಗಳಿಗೆ ಸಿಹಿ ತಿನಿಸು ನೀಡಲಾಗುವುದು. ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ಮಂಗಳವಾರ ಬೆಳಗ್ಗೆ ಸಿಹಿ ತಿಂಡಿ ಹಂಚಿ ಮುಖ್ಯ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಹಿರಿಯ ಸ್ವಾತಂತ್ರ್ಯಹೋರಾಟಗಾರರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಪ್ಲಾಸ್ಟಿಕ್‌ ಧ್ವಜದ ಬದಲಿಗೆ ಖಾದಿ ಬಟ್ಟೆಯಿಂದ ತಯಾರಿಸಿದ ಧ್ವಜಗಳನ್ನು ಕಡ್ಡಾಯವಾಗಿ ಉಪಯೋಗಿಸುವಂತೆ ತಿಳಿಸಿದರು. 

ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯುತ್ತಮ ಪಥಸಂಚಲನ ನೀಡುವ ತಂಡಗಳಿಗೆ ಬಹುಮಾನ ನೀಡಲು ತೀರ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ನಗರ ಪಾಲಿಕೆ ಆಯುಕ್ತ ಬಿ.ಎಚ್‌. ನಾರಾಯಣಪ್ಪ, ಸಮಾಜ ಕಲ್ಯಾಣ ಲಾಖೆ ಉಪ ನಿರ್ದೇಶಕ ಕುಮಾರ್‌ ಹನುಮಂತಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.