28 ಮಂದಿಯಲ್ಲಿ ಸೋಂಕು
Team Udayavani, May 5, 2020, 6:32 PM IST
ದಾವಣಗೆರೆ: ಕೋವಿಡ್ 19 ಸೋಂಕು ಪರೀಕ್ಷೆಗಾಗಿ ಸೋಮವಾರ 94 ಮಂದಿ ಗಂಟಲು ದ್ರವ ಸಂಗ್ರಹಿಸಲಾಗಿದ್ದು, ಈಗ ಪರೀಕ್ಷೆ ಒಟ್ಟು 1147 ಮಂದಿಯ ಗಂಟಲು ದ್ರವ ಸಂಗ್ರಹಿಸಿದಂತಾಗಿದೆ. ಇದೇ ದಿನ 122 ಮಂದಿಗೆ ಸಂಬಂಧಿಸಿದಂತೆ ನೆಗಟಿವ್ ವರದಿ ಬಂದಿದೆ. ಮನೆಯಲ್ಲೇ ಪ್ರತ್ಯೇಕವಾಗಿ 140 ಹಾಗೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ 209 ಮಂದಿಯನ್ನು ಇರಿಸಲಾಗಿದೆ. ಇದುವರೆಗೂ 146 ಜನರು ಸೂಕ್ತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.ಕೊರೊನಾ ವೈರಸ್ ಪರೀಕ್ಷೆಗಾಗಿ ಈವರೆಗೂ ಕಳುಹಿಸಲಾಗಿರುವ 1147 ಮಾದರಿಗಳಲ್ಲಿ 847 ಮಾದರಿಗಳು ನೆಗೆಟಿವ್ ವರದಿ ಬಂದಿವೆ.
ಈವರೆಗೂ 32 ಮಂದಿಯಲ್ಲಿ ಕೋವಿಡ್ 19 ಸೋಂಕು ಖಚಿತಪಟ್ಟಿದ್ದು, ಇಬ್ಬರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣ 28 ಇವೆ. ಮೇ 1ರಂದು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ನಗರದ 48 ವರ್ಷದ ಮಹಿಳೆ (ರೋಗಿ- 651) ಮೇ 2ರ ಮಧ್ಯರಾತ್ರಿ 1.50ರ ಸಮಯದಲ್ಲಿ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆ, ರಕ್ತದೊತ್ತಡ, ಮಧುಮೇಹ ಹಾಗೂ ಹೈಪೊಥೈರೂಡಿಸಮ್ ಸಮಸ್ಯೆಯಿಂದ ಬಳಲುತ್ತಿದ್ದರು. ಪಾಸಿಟಿವ್ ಪ್ರಕರಣಗಳು ಕಂಡು ಬಂದಿರುವ ಇಮಾಮ್ ನಗರ, ಬೇತೂರು ರಸ್ತೆ ಪ್ರದೇಶಗಳನ್ನು ಕಂಟೈನ್‌ಮೆಂಟ್ ಝೋನ್ ಎಂದು ಆದೇಶಿಸಲಾಗಿದೆ.
2 ಪ್ರದೇಶಗಳಲ್ಲಿ ಪ್ರತಿ ದಿನ ಜ್ವರ/ ಐಎಲ್‌ಐ/ಸಾರಿ ಸಮೀಕ್ಷೆ ನಡೆಸಲಾಗುತ್ತಿದೆ. 3 ದಿನಗಳಿಗೊಮ್ಮೆ ಬಫರ್ ಝೋನ್‌ನಲ್ಲಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.