ಉದ್ಯಾನವನ ನಿರ್ಮಾಣಕ್ಕೆ ಚಾಲನೆ
Team Udayavani, Apr 11, 2017, 1:38 PM IST
ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ 2ನೇ ವಾರ್ಡ್‌ನ ಗಾಂಧಿನಗರದ ರುದ್ರಭೂಮಿ ರಸ್ತೆಯ ಬೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಮುಂಭಾಗದಲ್ಲಿ ಉದ್ಯಾನವನ ನಿರ್ಮಾಣ ಕಾರ್ಯಕ್ಕೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್. ತೋಟಗಾರಿಕೆ ಇಲಾಖೆಯ 93ಲಕ್ಷ ಅನುದಾನದಲ್ಲಿ ಉದ್ಯಾನವನ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ಕಾಂಪೌಂಡ್ ನಿರ್ಮಿಸಿ, ಮುಂದಿನ ದಿನಗಳಲ್ಲಿ ಉದ್ಯಾನವನ ಅಭಿವೃದ್ಧಿಗೊಳಿಸಲಾಗುವುದು ಎಂದರು.
ದಾವಣಗೆರೆ ನಗರದಲ್ಲಿ 140 ಉದ್ಯಾನವನಗಳಿವೆ. ಕಳೆದ 3-4 ವರ್ಷಗಳ ಅವಧಿಧಿಯಲ್ಲಿ 90ಕ್ಕೂ ಹೆಚ್ಚು ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಮೇಯರ್ ರೇಖಾ ನಾಗರಾಜ್, ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಹಾಲೇಶ್,
ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್. ಬಸವಂತಪ್ಪ, ಡೂಡಾ ಮಾಜಿ ಅಧ್ಯಕ್ಷ ಡಿ. ಮಾಲತೇಶ್ ಜಾಧವ್, ನಗರಸಭೆ ಮಾಜಿ ಉಪಾಧ್ಯಕ್ಷ ಎ. ನಾಗರಾಜ್, ಮುಖಂಡರಾದ ಎಸ್. ಮಲ್ಲಿಕಾರ್ಜುನ್, ದೋಣಿ ನಿಂಗಪ್ಪ, ಜಿ.ಡಿ. ಪ್ರಕಾಶ್, ಕರಿಗಾರ ಬಸಪ್ಪ, ಇಟ್ಟಿಗುಡಿ ಮಂಜುನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.