ಅಂಡರ್‌ಪಾಸ್ ನಿರ್ಮಿಸಲು ಒತ್ತಾಯ
Team Udayavani, Jun 3, 2020, 6:36 AM IST
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಸಂಬಂಧ ಅಡ್ಡಿಪಡಿಸುತ್ತಿರುವ ಕುರಿತು ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು ಮತ್ತು ಲಕ್ಕಮುತ್ತೇನಹಳ್ಳಿ ಇತರೆಡೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಸಾರ್ವಜನಿಕ ಅಹವಾಲು ಆಲಿಸಿದರು.
ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು ಮತ್ತು ಲಕ್ಕಮುತ್ತೇನಹಳ್ಳಿ ಬಳಿ ಹೊಸದಾಗಿ ಅಂಡರ್‌ಪಾಸ್ ನಿರ್ಮಿಸುವ ಕುರಿತಂತೆ ಸಾರ್ವಜನಿಕರ ಅಹವಾಲು ಹಾಗೂ ಕಾಮಗಾರಿ ಸ್ಥಗಿತಗೊಂಡಿರುವ ಕಾರಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಉತ್ತಮ ದರ್ಜೆಯ ಮತ್ತು ವಿಶಾಲವಾದ ಅಂಡರ್‌ಪಾಸ್ ನಿರ್ಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ನಿಯಮಗಳಂತೆ ಈ ಹಂತದಲ್ಲಿ ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ ವಿಶಾಲವಾದ ಅಂಡರ್‌ಪಾಸ್ ನಿರ್ಮಿಸಲು ಅವಕಾಶ ಇಲ್ಲ ಎಂಬ ವಿಷಯನ್ನು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು. ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ ಬಳಿ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು,ಗುತ್ತಿಗೆದಾರರು, ಕಂದಾಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.