Insurance money; ಪತ್ನಿ ಮಾತ್ರವಲ್ಲ, ತಂದೆಗೂ ವಿಮೆ ಹಣ: ಧಾರವಾಡ ಗ್ರಾಹಕ ಆಯೋಗ ತೀರ್ಪು

Team Udayavani, Oct 5, 2023, 6:13 PM IST

ಪತ್ನಿ ಮಾತ್ರವಲ್ಲ, ತಂದೆಗೂ ವಿಮೆ ಹಣ: ಧಾರವಾಡ ಗ್ರಾಹಕ ಆಯೋಗ ತೀರ್ಪು

ಧಾರವಾಡ: ವಿಮಾ ಹಣವನ್ನು ಮೃತಪಟ್ಟ ವ್ಯಕ್ತಿಯ ಪತ್ನಿಗೆ ನೀಡಿರುವ ವಿಮಾ ಕಂಪನಿಯ ಕ್ರಮಕ್ಕೆ ಆಕ್ಷೇಪಣೆ ಮಾಡಿರುವ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು, ವಿಮಾ ಪಾಲಸಿಯ ನಾಮಿನಿದಾರ ಆಗಿರುವ ಮೃತಪಟ್ಟ ವ್ಯಕ್ತಿಯ ತಂದೆಗೆ ವಿಮಾ ಹಣ ಪಾವತಿಸುವಂತೆ ಸೂಚಿಸಿದೆ.

2017 ರಲ್ಲಿ ಸರ್ವ ಸುರಕ್ಷಾ ಲಾಭದ ವಿಮಾ ಪಾಲಸಿಯನ್ನು ಎಚ್‌ಡಿಎಪ್‌ಸಿ ಎರಗೋ ವಿಮಾ ಕಂಪನಿಯಿಂದ ಹುಬ್ಬಳ್ಳಿಯ ಆನಂದ ನಗರ ನಿವಾಸಿಯಾಗಿದ್ದ ಆಶೀಫ್ ಮುಲ್ಲಾ ಪಡೆದಿದ್ದರು. ಅದು 10 ಲಕ್ಷ ಮೌಲ್ಯದ ಪಾಲಸಿಯಾಗಿತ್ತು. ಅದಕ್ಕೆ ವಿಮಾದಾರ 7,646 ರೂ. ಹಣ ಪ್ರೀಮಿಯಂ ಕಟ್ಟಿದ್ದರು. ಆದರೆ ಈ ಪಾಲಸಿಗೆ ವಿಮಾದಾರರಾಗಿದ್ದ ಆಶೀಪ್ ತಮ್ಮ ತಂದೆ ಅಲ್ಲಾಭಕ್ಷ ಮುಲ್ಲಾ ಅವರನ್ನು ನಾಮಿನಿಯನ್ನಾಗಿ ಮಾಡಿದ್ದರು. ಈ ಅವಧಿಯಲ್ಲಿ 19-12-2019 ರಂದು ಗದಗ ಹುಲಕೋಟಿ ಹತ್ತಿರ ಹೋಗುವಾಗ ಲಾರಿ ಮತ್ತು ಬೈಕಿಗೆ ಡಿಕ್ಕಿಯಾದ ಅಪಘಾತದಲ್ಲಿ ವಿಮಾದಾರ ಆಶೀಪ್ ಮೃತರಾಗಿದ್ದರು. ಈ ಬಗ್ಗೆ ಗದಗ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಾಗಿತ್ತು. ಈ ಎಲ್ಲ ದಾಖಲೆಗಳನ್ನು ಪಡೆದು ನಾಮಿನಿ ಆಗಿದ್ದ ತಂದೆ ಅಲ್ಲಾಭಕ್ಷ ಮುಲ್ಲಾ ಅವರು, ಮೃತನ ವಿಮಾ ಕ್ಲೇಮ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕ್ಲೇಮ್ ಅರ್ಜಿಯನ್ನು ಪರಿಗಣಿಸದೆ ವಿಮಾ ಕಂಪನಿಯು ಮೃತನ ಹೆಂಡತಿ ನೂರಜಹಾನಬಿ ಅವರಿಗೆ 10 ಲಕ್ಷ  ವಿಮಾ ಹಣ ಸಂದಾಯ ಮಾಡಿತ್ತು.

ಈ ಹಿನ್ನೆಲೆಯಲ್ಲಿ ತಂದೆಯು ಮೃತನ ವಿಮಾ ಪಾಲಸಿಗೆ ನಾಮಿನಿ ಆಗಿರುವುದರಿಂದ ವಿಮಾ ಹಣವನ್ನು ತನಗೆ ಕೊಡಬೇಕಾಗಿತ್ತು. ಆದರೆ ವಿಮಾ ಕಂಪನಿ ಅವರು ತನ್ನ ಕ್ಲೇಮನ್ನು ಧಿಕ್ಕರಿಸಿ ಮೃತನ ಹೆಂಡತಿಗೆ ವಿಮಾ ಹಣ 10 ಲಕ್ಷ ಕೊಟ್ಟಿರುವುದು ತಪ್ಪು ಮತ್ತು ಅಂತಹ ವಿಮಾ ಕಂಪನಿಯವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆಯಾಗುತ್ತದೆ. ಹೀಗಾಗಿ ವಿಮಾ ಕಂಪನಿಯವರ ಮೇಲೆ ಕ್ರಮ ಕೈಗೊಂಡು ತನಗೆ ಪರಿಹಾರ ಕೊಡಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ವಿಚಾರಣೆ ಕೈಗೊಂಡ ಅಧ್ಯಕ್ಷರಾದ ಈಶಪ್ಪ ಭೂತೆ ಮತ್ತು ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಒಳಗೊಂಡ ಆಯೋಗವು, ದೂರುದಾರ ಅಲ್ಲಾಭಕ್ಷ ಮೃತ ಆಸೀಪ್ ಮುಲ್ಲಾರವರ ತಂದೆ ಇದ್ದು, ವಿಮಾ ಪಾಲಸಿಗೆ ನಾಮಿನಿಯೂ ಆಗಿದ್ದಾರೆ. 2015 ರಲ್ಲಿ ಆಗಿರುವ ವಿಮಾ ಕಾಯ್ದೆಯ ತಿದ್ದುಪಡಿಯಂತೆ ವಿಮಾದಾರ ಮೃತನಾದಲ್ಲಿ ವಿಮಾ ಪಾಲಸಿಯ ಹಣ ಪಡೆಯಲು ನಾಮಿನಿ ಮಾತ್ರ ಅರ್ಹರಿದ್ದಾರೆ. ಆದರೆ ಈ ಪ್ರಕರಣದಲ್ಲಿ ನಾಮಿನಿಯನ್ನು ಬದಿಗಿಟ್ಟು ಮೃತನ ಹೆಂಡತಿ ನೂರಜಹಾನಬಿಗೆ ವಿಮಾ ಕಂಪನಿಯವರು ಹಣ ಸಂದಾಯ ಮಾಡಿರುವುದು ವಿಮಾ ನಿಯಮಕ್ಕೆ ವಿರುದ್ಧವಾಗಿದೆ. ಈ ಕಾರಣ ವಿಮಾ ಕಂಪನಿಯವರ ಅಂತಹ ನಡಾವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ತೀರ್ಪು ನೀಡಿದೆ. ಇದಲ್ಲದೇ ತಮ್ಮದೇ ವಿಮಾ ನಿಯಮಕ್ಕೆ ವ್ಯತಿರಿಕ್ತವಾಗಿ ಮೃತನ ಹೆಂಡತಿಗೆ ವಿಮಾ ಹಣ ನೀಡಿರುವುದನ್ನು ಆಯೋಗ ಒಪ್ಪಿಕೊಂಡಿಲ್ಲ. ವಿಮಾ ನಿಯಮದಂತೆ ನಾಮಿನಿಯಾದ ದೂರುದಾರ ವಿಮಾ ಪಾಲಸಿ ಮೊತ್ತ 10 ಲಕ್ಷ ಪಡೆಯಲು ಅರ್ಹರಿದ್ದಾರೆ ಎಂದು ಆಯೋಗ ತೀರ್ಪಿನಲ್ಲಿ ತಿಳಿಸಿದೆ.

ಈ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನಾಮಿನಿಯಾದ ದೂರುದಾರನಿಗೆ ವಿಮಾ ಮೊತ್ತ 10 ಲಕ್ಷ ಕೊಡುವಂತೆ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ 50 ಸಾವಿರ ಪರಿಹಾರ ಮತ್ತು 05 ಸಾವಿರ ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ತಿಳಿಸಿದೆ. ಒಂದು ತಿಂಗಳ ಒಳಗಾಗಿ ಮೇಲೆ ಹೇಳಿದ ವಿಮಾ ಮೊತ್ತ ಕೊಡಲು ಎದುರುದಾರರು ವಿಫಲರಾದಲ್ಲಿ ತೀರ್ಪು ನೀಡಿದ ದಿನಾಂಕದಿಂದ 10 ಲಕ್ಷ ಮೇಲೆ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ಕೊಡುವಂತೆ ಆಯೋಗ ಎದುರುದಾರರಿಗೆ ಆಯೋಗವು ಆದೇಶಿಸಿದೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.