ಅಕ್ರಮ-ಸಕ್ರಮ ಹಕ್ಕುಪತ್ರ ವಿತರಣೆ
•21 ಫಲಾನುಭವಿಗಳು•ಸ್ವಂತ ಜಾಗ ಹೊಂದುವ ಕನಸು ಸಾಕಾರ
Team Udayavani, Jul 23, 2019, 3:09 PM IST
ಜಗಳೂರು: ತಾಲೂಕಿನ ಕಸ್ತೂರಿಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಕ್ರಮ ಸಕ್ರಮ ಫಲಾನುಭವಿಗಳೊಂದಿಗೆ ತಹಶೀಲ್ದಾರ್ ಮತ್ತು ಸಿಬ್ಬಂದಿ ವರ್ಗ.
ಜಗಳೂರು: ಸೂರು ಇಲ್ಲದವರು ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಯನ್ನು ಸರ್ಕಾರ ಸಕ್ರಮಗೊಳಿಸಿ ನಿಮಗೆ ಹಕ್ಕುಪತ್ರ ನೀಡಿದ್ದು, ಇದನ್ನು ಸದ್ವಿನಿಯೋಗ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಗ್ರಾಮಸ್ಥರಿಗೆ ಸಲಹೆ ನೀಡಿದರು.
ಸೋಮವಾರ ತಾಲೂಕಿನ ಕಸ್ತೂರಿಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ 94 ಸಿ ವಿಧಿಯಡಿ ಸರಕಾರಿ ಜಮಿನಿನಲ್ಲಿ ಕಟ್ಟಡ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.
ಸೂರು ಇಲ್ಲದವರು ಗೊಮಾಳ, ಸೇಂದಿವನ , ಸರಕಾರಿ ಜಮೀನುಗಳಲ್ಲಿ ಹಲವಾರು ವರ್ಷಗಳ ಹಿಂದೆ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು, ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸರಕಾರವೇ ಸೂರು ಸಕ್ರಮಗೊಳಿಸಿ ಹಕ್ಕುಪತ್ರ ನೀಡಿದೆ. ಸ್ವಂತ ಜಾಗವನ್ನು ಹೊಂದಬೇಕೆಂಬ ನಿಮ್ಮ ಕನಸನ್ನು ಸರಕಾರ ನನಸು ಮಾಡಿದ್ದು, ನೀವು ಜಾಗವನ್ನು ನಿಮ್ಮ ಸ್ವಂತ ಉಪಯೋಗಕ್ಕೆ ಬಳಕೆ ಮಾಡಿಕೊಳ್ಳ ಬೇಕು ಎಂದು ಹೇಳಿದರು.
ಆರ್ ಐ ಗಳಾದ ಸಮೀರ್, ಧನಂಜಯ್, ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ , ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಈ ವೇಳೆ 21 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಇಂದು ತಹಶೀಲ್ದಾರ್‌ರ ಜನ್ಮದಿನ ಎಂದರಿತ ಗ್ರಾಮಸ್ಥರು ಜನ್ಮದಿನವನ್ನು ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.