ಅರ್ಹರಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ
ರೈತರನ್ನು ಕಚೇರಿಗೆ ಅಲೆದಾಡಿಸದೆ ದಾಖಲೆ ಒದಗಿಸಲು ಶಾಸಕ ರಾಮಚಂದ್ರ ಅಧಿಕಾರಿಗಳಿಗೆ ಸೂಚನೆ
Team Udayavani, May 8, 2022, 3:41 PM IST
ಜಗಳೂರು: ಸರಕಾರ ನೀಡಿರುವ ಹಕ್ಕುಪತ್ರ ಮತ್ತು ಸಾಗುವಳಿ ಚೀಟಿಯನ್ನು ಅಡಮಾನ ಇಡುವಂತ ಕೆಲಸ ಮಾಡದೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ಕರೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕಂದಾಯ ಇಲಾಖೆ ಮತ್ತು ಸಮಾಜಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ಫಲಾನುಭವಿಗಳಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ನಾನು ಕ್ಷೇತ್ರದ ಜನರಿಂದ ಆಶೀರ್ವಾದ ಮಾತ್ರ ಬಯಸುತ್ತೇನೆ. ನಾನೊಬ್ಬ ಸೇವಕನೇ ವಿನಃ ಮಾಲೀಕನಲ್ಲ. ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಹೊಣೆಗಾರಿಕೆ ನನ್ನದು. ರೈತರನ್ನು ಕಚೇರಿಗಳಿಗೆ ಅಲೆದಾಡಿಸದೆ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸರ್ಕಾರದಿಂದ ಸಿಗುವ ಸೌಲಭ್ಯಗಳ ಹಕ್ಕುಪತ್ರಗಳು ತಾತ್ಕಾಲಿಕ ಕಷ್ಟಗಳಿಗೆ ಹಣಕ್ಕೆ ಮಾರಾಟವಾಗದೆ ಮುಂದಿನ ಪೀಳಿಗೆಗೆ ಆಸ್ತಿಯಾಗಬೇಕು. ಪೋಷಕರು ಆರ್ಥಿಕವಾಗಿ ಸಬಲರಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಭವಿಷ್ಯವನ್ನು ರೂಪಿಸಬೇಕು ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಇದರಿಂದ ತಾಲೂಕಿನ 9 ಕೆರೆಗಳು ಭರ್ತಿಯಾಗಿ 47 ಸಾವಿರ ಎಕರೆ ಪ್ರದೇಶ ಹನಿ ನೀರಾವರಿ ಸೌಲಭ್ಯ ಪಡೆಯಲಿದೆ. ಅಲ್ಲದೆ ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ತುಪ್ಪದಹಳ್ಳಿ ಕೆರೆಗೆ ಪ್ರಾಯೋಗಿಕವಾಗಿ ನೀರು ಹರಿದಿದ್ದು ಜೂನ್ ತಿಂಗಳೊಳಗೆ ಕ್ಷೇತ್ರದ 57 ಕೆರೆಗಳು ಭರ್ತಿಯಾಗಲಿವೆ. ತೊರೆಸಾಲು, ಎರೆಹಳ್ಳಿ ಕೆರೆಗೂ ನೀರು ಹರಿದು ದಶಕಗಳ ಬರದ ನಾಡಿನ ಹಣೆಪಟ್ಟಿ ಕಳಚಿ ಹಸಿರುನಾಡಾಗಿ ರೈತರ ಬದುಕು ಹಸನಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಹಶೀಲ್ದಾರ್ ಸಂತೋಷಕುಮಾರ್ ಮಾತನಾಡಿ, ಸರಕಾರಿ ಜಮಿನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಕೊಂಡ 100 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ. 94 (ಸಿ) ಅಡಿ 120 ಜನರಿಗೆ ಸಕ್ರಮೀಕರಣಕ್ಕೆ ಅನುಮತಿ ದೊರೆತಿದ್ದು, 62 ಜನರಿಗೆ ಹಕ್ಕುಪತ್ರ ಸಿದ್ಧಗೊಂಡಿವೆ. ಕಂದಾಯ ಇಲಾಖೆ ನೌಕರರಿಂದ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಗರ್‌ಹುಕುಂ ಸಮಿತಿಯ ತಿಪ್ಪೇಸ್ವಾಮಿ, ಶೋಭಾ, ಹನುಮಂತಪ್ಪ, ಸುಧಿಧೀರ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ ಸೇರಿದಂತೆ ಫಲಾನುಭವಿಗಳು ಭಾಗವಹಿಸಿದ್ದರು.
ಪ್ರಸಕ್ತ ಸಾಲಿನಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ಕೊಳವೆಬಾವಿ ಕೊರೆಸಿ ಪಂಪ್, ಮೋಟಾರ್ ಖರೀದಿಸಲು ಸರ್ಕಾರ ಆದೇಶಿಸಿದೆ. -ಎಸ್.ವಿ. ರಾಮಚಂದ್ರ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.