ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ
ಮಕ್ಕಳ ಆರೋಗ್ಯಕ್ಕಾಗಿ ಕೋಟಿಗಟ್ಟಲೇ ಖರ್ಚು ಮಾಡುವ ಸರ್ಕಾರದ ಯೋಜನೆಗಳ ಸದುಪಯೋಗವಾಗಲಿ
Team Udayavani, Jan 20, 2020, 11:27 AM IST
ಜಗಳೂರು: ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ, ನೆರೆಹೊರೆಯವರಿಗೂ ಲಸಿಕೆ ಹಾಕಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಪೋಷಕರಿಗೆ ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಸಲಹೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ತೆರೆಯಲಾಗಿದ್ದ ಲಸಿಕಾ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಮಾತನಾಡಿದ ಅವರು, ನಮ್ಮಲ್ಲಿ ಪೋಲಿಯೋ ಪ್ರಕರಣಗಳು ಇಲ್ಲದಿದ್ದರೂ ಸಹ ಕೋಟಿಗಟ್ಟಲೆ ಹಣ ವೆಚ್ಚ ಮಾಡಿ ಪ್ರತಿಯೊಬ್ಬರು ಆರೋಗ್ಯವಾಗಿರಬೇಕೆಂಬ ಉದ್ದೇಶದಿಂದ ಸರಕಾರ ಹಲವಾರು ಲಸಿಕಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಮಕ್ಕಳು ಬೆಳೆಯುವ ಹಂತದಲ್ಲಿ ವಯಸ್ಸಿಗನುಗಣವಾಗಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದು, ಜನತೆ ಸದುಪಯೋಗ ಪಡೆಯಬೇಕು ಎಂದರು.
ಟಿಎಚ್‌ಒ ಜಿ.ಓ. ನಾಗರಾಜ್ ಮಾತನಾಡಿ, ಇಂದಿನಿಂದ 4 ದಿನಗಳ ಕಾಲ ಅಭಿಯಾನ ನಡೆಯಲಿದ್ದು, ತಾಲೂಕಿನಲ್ಲಿ 5 ವರ್ಷದೊಳಗಿನ 20,500 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ಒಟ್ಟು 138 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 298 ಅಂಗನವಾಡಿ, ಆಶಾ, ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಆರೋಗ್ಯ ನಿರೀಕ್ಷಕ ಕಿಫಾಯತ್, ಆರ್ .ಐ . ಕುಬೇಂದ್ರ ನಾಯ್ಕ, ಸಂತೋಷ್, ಪ್ರಕಾಶ್, ಜಗದೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.