ಆನ್‌ಲೈನ್ ತರಗತಿ ಕೈಬಿಡಿ: ಮಂಜುನಾಥ್
Team Udayavani, Jun 10, 2020, 4:42 PM IST
ಜಗಳೂರು: ಎಐಎಸ್‌ಎಫ್ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು
ಜಗಳೂರು: ಆನ್‌ಲೈನ್ ತರಗತಿ ನಡೆಸುವುದಾದರೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಸರ್ಕಾರ ಆರೋಗ್ಯ ಸೇವೆ ಮತ್ತು ಲ್ಯಾಪ್‌ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ಎಐಎಸ್‌ಎಫ್ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಎಐಎಸ್‌ಎಫ್ ರಾಜ್ಯ ಸಹಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ್, ರಾಜ್ಯದಲ್ಲಿ ಕೋವಿಡ್ -19ನಿಂದ ಶಾಲಾ- ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದ್ದು, ಪರ್ಯಾಯವಾಗಿ ಖಾಸಗಿ ಸಂಸ್ಥೆಗಳು ಆನ್‌ಲೈನ್ ತರಗತಿಗಳನ್ನು ಝೂಮ್ ಆ್ಯಪ್ ಮೂಲಕ ನಡೆಸುತ್ತಿವೆ. ಗ್ರಾಮಿಣ ಭಾಗದ ಬಡವರಿಗೆ ಲ್ಯಾಪ್‌ಟಾಪ್, ಮೊಬೈಲ್ ಇಲ್ಲದ್ದರಿಂದ ತೊಂದರೆ ಎದುರಿಸುವಂತಾಗಿದೆ. ಖಾಸಗಿ ಸಂಸ್ಥೆಗಳು ಹಣ ವಸೂಲಿಗೆ ಇಳಿದಿವೆ. ಆದ್ದರಿಂದ ಕೂಡಲೇ ಆನ್‌ಲೈನ್ ತರಗತಿ ಕೈಬಿಡಬೇಕೆಂದು ಒತ್ತಾಯಿಸಿದರು.
ಎಐಎಸ್‌ಎಫ್ ತಾಲೂಕು ಅಧ್ಯಕ್ಷ ಯುವರಾಜ್ ಎಚ್.ಎಂ. ಹೊಳೆ, ಮುಖಂಡರಾದ ಮಂಜುನಾಥ್ ದೊಡ್ಡಬೊಮ್ಮನಹಳ್ಳಿ, ಬೋರೇಶ್, ರಘು ಧಮಾನಿ, ಪರಶುರಾಮ್, ಕರಿಬಸಪ್ಪ ರಾಜಪ್ಪ, ಗುಡದೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.