ವಿರೋಧ ಪಕ್ಷಗಳಿಂದ ಗೊಂದಲ ಸೃಷ್ಟಿ
ಸಿಎಎ ಜಾಗೃತಿಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜನರ ದಿಕ್ಕು ತಪ್ಪಿಸುತ್ತಿದೆ ಕಾಂಗ್ರೆಸ್ ಪಕ್ಷ
Team Udayavani, Jan 8, 2020, 11:34 AM IST
ಜಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ದೇಶದ ಜನತೆಯಲ್ಲಿ ಗೊಂದಲವನ್ನು ಸೃಷ್ಟಿ ಮಾಡುತ್ತಿವೆ ಎಂದು ಸರಕಾರದ ಮಾಜಿ ಮುಖ್ಯ ಸಚೇತಕ ಡಾ| ಶಿವಯೋಗಿಸ್ವಾಮಿ ದೂರಿದರು.
ಪಟ್ಟಣದ ವಿದ್ಯಾನಗರದಲ್ಲಿ ಶಾಸಕ ಎಸ್.ವಿ. ರಾಮಚಂದ್ರ ನಿವಾಸದಲ್ಲಿ ತಾಲೂಕು ಬಿಜೆಪಿ ಘಟಕ ಸಿಎಎ ಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜಗಳೂರು ವಿಧಾನಸಭಾ ಕ್ಷೇತ್ರ ಮಟ್ಟದ ಸಭೆಯಲ್ಲಿ ಮಾತನಾಡಿದರು, ದೇಶದಲ್ಲಿ ಮೋದಿಯವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಸಹಿಸದೆ ಮತ್ತು ಕಾಯ್ದೆಯನ್ನು ಅರ್ಥ ಮಾಡಿಕೊಳ್ಳದೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶದ ಜನತೆಯ ದಾರಿತಪ್ಪಿಸುವಂತಹ ಕೆಲಸ ಮಾಡುತ್ತಿವೆ. ಹಾಗಾಗಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸ ಪಕ್ಷದಿಂದ ನಡೆಯುತ್ತಿದೆ. ಈ ಕಾರ್ಯದಲ್ಲಿ ಬೂತ್ ಮಟ್ಟದ ಕಾರ್ಯ ಕರ್ತರ ಪಾತ್ರ ಮುಖ್ಯವಾಗಿದೆ. ನಿಮ್ಮ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿ ಪ್ರಧಾನಿಯವರಿಗೆ ಅಭಿನಂದನ ಪತ್ರ ಬರೆಸುವುದು, ಮಿಸ್ ಕಾಲ್ ಕೊಡಿಸುವುದು , ಬೈಕ್ ರ್ಯಾಲಿ ಮೂಲಕ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಮೊದಲು ನೀವು ಈ ಕಾಯ್ದೆಯ ಬಗ್ಗೆ ಸಂಪೂರ್ಣವಾಗಿ ಅರಿವನ್ನು ಹೊಂದಿ ಜಾಗೃತಿ ಮೂಡಿಸುವ ಕೆಲಸಕ್ಕೆ ಒತ್ತು ನೀಡಿ ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕದ್ದುಮುಚ್ಚಿ ಮಾಡಿದ್ದಲ್ಲ. ಒಂದು ವೇಳೆ ಈ ಕಾಯ್ದೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎನಿಸಿದರೆ ಸುಪ್ರೀಂ ಕೊರ್ಟ್ನಲ್ಲಿ ಪ್ರಶ್ನಿಸಬಹುದು ಎಂದು ಹೇಳಿದರು.
ಮಾಜಿ ಅಧ್ಯಕ್ಷ ಡಿ.ವಿ.ನಾಗಪ್ಪ ಮಾತನಾಡಿ, ಪಾಕ್, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ್‌ದಲ್ಲಿನ ಹಿಂದು, ಸಿಖ್, ಕ್ರೈಸ್ತ, ಜೈನ್, ಪಾರ್ಸಿ ನಿರಾಶ್ರಿತರಿಗೆ ಈ ಕಾಯ್ದೆ ಪೌರತ್ವ ನೀಡುತ್ತದೆ ಎಂದು ಹೇಳಿದರು.
ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯ ಪ್ರಸನ್ನ, ಡಿಸಿಸಿ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯ ಶರಣಪ್ಪ, ತಾ.ಪಂ ಮಾಜಿ ಅಧ್ಯಕ್ಷ ಆಂಜೀನಪ್ಪ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.