ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ: ದುರ್ಗಪ್ಪ
Team Udayavani, Jun 19, 2020, 4:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಗಳೂರು: ಕೋವಿಡ್ ವೈರಸ್ ನಿಯಂತ್ರಿಸಲು ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ವೃತ್ತ ನಿರೀಕ್ಷಕ ದುರ್ಗಪ್ಪ ಹೇಳಿದರು.
ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ನಡೆದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಅನವಶ್ಯಕವಾಗಿ ಪಟ್ಟಣದಲ್ಲಿ ಓಡಾಡುವವರಿಗೆ ಹಾಗೂ ಮಾಸ್ಕ್ ಧರಿಸದೇ ಇರುವವರಿಗೆ ದಂಡವನ್ನೂ ವಿಧಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಮನೆಯಿಂದ ಹೊರಗೆ ಬರುವಾಗ ಮಾಸ್ಕ್ ಧರಿಸಿಯೇ ಬರಬೇಕು ಮನೆಗೆ ಹೋದಾಗ ಸಾಬೂನಿನಿಂದ ಕೈತೊಳೆದುಕೊಳ್ಳಬೇಕೆಂದರು.
ತಹಶೀಲ್ದಾರ್ ಗಿರೀಶ್‌ಬಾಬು, ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕರ್ ಮಾತನಾಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ. ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಹೇಶ್ವರಪ್ಪ, ತಾಪಂ ಇಒ ಮಲ್ಲಾ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.