ನರೇಗಾ ಕಾಮಗಾರಿ ಪರಿಶೀಲನೆ
ಮೃತರು-ಶಾಲಾ ವಿದ್ಯಾರ್ಥಿಗಳ ಹೆಸರಲ್ಲೂ ಜಾಬ್ ಕಾರ್ಡ್!
Team Udayavani, Feb 26, 2020, 11:30 AM IST
ಜಗಳೂರು : ಮೃತರು ಮತ್ತು ಶಾಲಾ ವಿದ್ಯಾರ್ಥಿಗಳ ಹೆಸರಿನಲ್ಲಿ ಕಳೆದ ಮೂರು ವರ್ಷಗಳಿಂದ ನಕಲಿ ಜಾಬ್ ಕಾರ್ಡ್ಗಳನ್ನು ಸೃಷ್ಟಿಸಿ ನರೇಗಾ ಯೋಜನೆಯಡಿ ಕಾಮಗಾರಿ ಮಾಡದೇ 3 ಕೋಟಿಗೂ ಅಧಿಕ ಅನುದಾನವನ್ನು ಪಂಚಾಯಿತಿ ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳವಾರ ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹಿರೆ ಮಲ್ಲನಹೊಳೆ ಮತ್ತು ತಾಯಿ ಟೋಣಿ ಗ್ರಾಮಗಳಲ್ಲಿ ಪರಿಶೀಲನೆ ನಡೆದರು. ತಲಾ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ 15 ರಿಂದ 20 ಚೆಕ್ ಡ್ಯಾಮ್ ಗಳು, ಮಲ್ಟಿ ಚೆಕ್ ಡ್ಯಾಮ್ ಗಳು ಕಿತ್ತು ಹೋಗಿದ್ದನ್ನು ಕಂಡ ಸಿಇಓ ಸಂಬಂಧಪಟ್ಟ ಅಧಿ ಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ನಂತರ ಜಾಬ್ ಕಾರ್ಡ್ ಹೊಂದಿರುವ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪಂಚಾಯಿತಿಯಲ್ಲಿ ಮೃತರ ಮತ್ತು ಶಾಲಾ ಮಕ್ಕಳ ಹೆಸರಿನಲ್ಲಿ ಜಾಬ್ ಕಾರ್ಡ್‌ಗಳು ಇವೆ. ಇಂದಿಗೂ ಸಹ ಅವುಗಳನ್ನು ಬಳಸಲಾಗುತ್ತಿದೆ. ಮಲ್ಟಿ ಚೆಕ್ ಡ್ಯಾಮ್ ಗಳು ಸಂಪೂರ್ಣ ಕಳಪೆಯಾಗಿವೆ. ಕಾಮಗಾರಿ ಮಾಡದೆ ಬರೀ ಬೋರ್ಡ್ ಹಾಕಿ ಬಿಲ್ ಮಾಡಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
2017ರಿಂದ ಮೃತರು ಹಾಗೂ ವಿದ್ಯಾರ್ಥಿಗಳ ಹೆಸರಿನಲ್ಲಿ ಜಾಬ್ ಕಾರ್ಡ್ ಸೃಷ್ಟಿಸಿ ಅಕ್ರಮ ಎಸಗಲಾಗಿದೆ ಎಂದು ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.