ಕ್ವಾರಂಟೈನ್‌ನಲ್ಲಿರುವವರಿಗೆ ಮೂಲ ಸೌಲಭ್ಯ ಕಲ್ಪಿಸಿ
Team Udayavani, Jun 24, 2020, 11:52 AM IST
ಜಗಳೂರು: ಪಟ್ಟಣದ ಖಾಸಗಿ ವಸತಿಗೃಹಕ್ಕೆ ಭೇಟಿ ನೀಡಿದ್ದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ತಿಮ್ಮಯ್ಯ ಕ್ವಾರಂಟೈನ್‌ನಲ್ಲಿದ್ದವರ ಯೋಗಕ್ಷೇಮ ವಿಚಾರಿಸಿದರು.
ಜಗಳೂರು: ಕ್ವಾರಂಟೈನ್‌ನಲ್ಲಿರುವವರಿಗೆ ಮೂಲ ಸೌಕರ್ಯ ಸೇರಿದಂತೆ ಊಟೋಪಚಾರದ ಕೊರತೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ತಿಮ್ಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಖಾಸಗಿ ವಸತಿಗೃಹಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಅಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿರುವ ಉತ್ತರಪ್ರದೇಶ ಮೂಲದ ಮೂರು ಜನರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು. ತಾಲೂಕಿನಲ್ಲಿ ಇದುವರೆಗೂ ಕೋವಿಡ್ ಸೋಂಕು ತಗುಲದೇ ಇರುವುದು ತಾಲೂಕಿನ ಜನರ ಪುಣ್ಯ. ಕೋವಿಡ್-19 ವೈರಸ್ ನಿಯಂತ್ರಣದ ಕುರಿತು ಅಧಿಕಾರಿಗಳು ಜನ ಜಾಗೃತಿ ಮೂಡಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಕೂಡ ಜಾಗ್ರತೆ ವಹಿಸಿದ್ದರಿಂದ ಇದುವರೆಗೂ ಕೋವಿಡ್ ವೈರಸ್ ಕಂಡು ಬಂದಿಲ್ಲ. ಕ್ವಾರಂಟೈನ್‌ಗೆ ನಿಗದಿಪಡಿಸಿರುವ ವಸತಿಗೃಹ ಪಟ್ಟಣದ ಮಧ್ಯಭಾಗದಲ್ಲಿರುವುದರಿಂದ ಬೇರೆಯವರಿಗೆ ತೊಂದರೆಯಾಗಬಹುದು. ಹಾಗಾಗಿ ಊರ ಹೊರಗಡೆ ಕ್ವಾರಂಟೈನ್ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.