ಅನುದಾನ ಖರ್ಚಾದರೂ ಸ್ವಚ್ಛವಾಗದ ಚರಂಡಿ
Team Udayavani, Mar 5, 2020, 11:36 AM IST
ಜಗಳೂರು: 14ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಬೀದಿ ದೀಪಗಳ ದುರಸ್ತಿಗೆ 40 ಸಾವಿರಕ್ಕೂ ಅಧಿಕ ವೆಚ್ಚ ತೋರಿಸಲಾಗಿದ್ದರೂ ಗ್ರಾಮದ ದಲಿತ ಕಾಲೋನಿಯಲ್ಲಿ ಚರಂಡಿಗಳು ಗಬ್ಬು ನಾರುತ್ತಿದ್ದು, ಬೀದಿ ದೀಪದ ವ್ಯವಸ್ಥೆ ಇಲ್ಲದೇ ಈ ಭಾಗದ ಜನರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಮುಸ್ಟೂರು ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ದೂರಿದ್ದಾರೆ.
ಗ್ರಾಮದ ಚರಂಡಿ ಮತ್ತು ಬೀದಿ ದೀಪದ ಸಮಸ್ಯೆಯನ್ನು ಬಗೆಹರಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸಹ ಸದಸ್ಯರ ಮಾತಿಗೆ ಪಿಡಿಒ ಕಿಮ್ಮತ್ತು ನೀಡುತ್ತಿಲ್ಲ. ಬರುವ ಅನುದಾನವನ್ನು ತಮಗೆ ಇಚ್ಛೆ ಬಂದಂತೆ ವೆಚ್ಚ ಮಾಡುತ್ತಾರೆ ಎಂದು ಸದಸ್ಯ ತಿಪ್ಪೇಸ್ವಾಮಿ ದೂರುತ್ತಾರೆ.
ಈ ಕಾಲೋನಿಯಲ್ಲಿ ಚರಂಡಿ ಅಲ್ಲದೇ ಬೀದಿ ದೀಪದ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೇ ಕಳೆದ 15 ದಿನಗಳಿಂದ ಕತ್ತಲೆಯಲ್ಲಿ
ಜೀವನ ಕಳೆಯುವಂತಾಗಿದೆ. ರಾತ್ರಿ ಆಯಿತೆಂದರೆ ಮನೆಗಳಿಗೆ ಹಾವು, ಚೇಳು, ವಿಷ ಜಂತುಗಳು ಬರುತ್ತವೆ ಎನ್ನುತ್ತಾರೆ ಯಲ್ಲಮ್ಮ.
ಚರಂಡಿ ಸ್ವಚ್ಛಗೊಳಿಸಲು ಕಳೆದ ಕೆಲವು ತಿಂಗಳ ಹಿಂದೆ 48,730
ರೂ. ಬ್ಯಾಂಕಿನಿಂದ ತೆಗೆಯಲಾಗಿದೆ. ಆದರೆ ಕೆಲಸ ಮಾತ್ರ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಚರಂಡಿ ನೀರು ಹೋಗಲು ವ್ಯಕ್ತಿಯೋರ್ವ ಅಡ್ಡಿ ಪಡಿಸುತ್ತಿದ್ದರಿಂದ ಚರಂಡಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಕೆಲವು ದಿನಗಳ ಹಿಂದೆಯೇ ಹೊಸ ಬಲ್ಪ್ಗಳನ್ನು ಹಾಕಲಾಗಿದೆ. ಸುನಿತಾ,
ಪಿಡಿಒ, ಮುಸ್ಟೂರು ಗ್ರಾಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.