ಇಂಧನ ಬೆಲೆ ಏರಿಕೆಗೆ ಆಕ್ರೋಶ
Team Udayavani, Jun 26, 2020, 2:55 PM IST
ಜಗಳೂರು: ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಜಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ವತಿಯಿಂದ ಗುರುವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರವಾಸಿಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಅತ್ಯಂತ ಕಡಿಮೆ ಇದ್ದು ಭಾರತದಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಕೇಂದ್ರ ಸರ್ಕಾರ ಕೂಡಲೇ ಜಾರಿಗೆ ಬರುವಂತೆ ಇಂಧನ ಬೆಲೆಯನ್ನು ಕಡಿಮೆಗೊಳಿಸಬೇಕು. ಹಿಂದೆ ಇದ್ದ ಹಾಗೆ ಬೆಲೆ ನಿಯಂತ್ರಣವನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಯಾವುದೇ ಕಂಪನಿಗಳು ಕೈಗೊಳ್ಳುವ ಬೆಲೆ ಏರಿಕೆ ಮತ್ತು ಇಳಿಕೆ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಗೌಡಗೊಂಡನಹಳ್ಳಿ ಸತೀಶ್, ಗಂಗಾಧರಪ್ಪ, ದೊಣೆಹಳ್ಳಿ ಲೋಕೇಶ್, ರಾಜು, ರಂಗಪ್ಪ, ಶಾಂತಪ್ಪ, ಹೊನ್ನೂರಾಲಿ, ನಾಗರಜ್, ಕೆಂಚಪ್ಪ, ಶರಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.