ಖರ್ಗೆಗೆ ಜಯದೇವ ಶ್ರೀ, ನೇಸರ್ಗಿಗೆ ಅಕ್ಕನಾಗಮ್ಮ ಪ್ರಶಸ್ತಿ
Team Udayavani, Feb 22, 2018, 6:45 AM IST
ದಾವಣಗೆರೆ: ಚಿತ್ರದುರ್ಗ ಮುರುಘಾ ಮಠದಿಂದ ನೀಡುವ ಜಯದೇವ ಶ್ರೀ ಪ್ರಶಸ್ತಿಗೆ ಲೋಕಸಭೆಯ ಕಾಂಗ್ರೆಸ್ ನಾಯಕ, ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಮಾ.3ರಂದು ಸಂಜೆ 6.30ಕ್ಕೆ ನಡೆಯುವ ಸಾಧಕರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿಗೆ ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ, ಶೂನ್ಯಪೀಠ ಅಲ್ಲಮ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ಮತ್ತು ಶೂನ್ಯಪೀಠ ಚನ್ನಬಸವ ಪ್ರಶಸ್ತಿಗೆ ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ.ಸಿ.ಆರ್. ನಸೀರ್ ಅಹಮ್ಮದ್ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದಾವಣಗೆರೆಯ ಶ್ರೀಶಿವಯೋಗಿ ಮಂದಿರದಲ್ಲಿ ಮಾ.2ರಿಂದ 4ರವರೆಗೆ ಶರಣ ಸಂಸ್ಕೃತಿ ಉತ್ಸವ ಮತ್ತು ಶ್ರೀಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 61ನೇ ಸ್ಮರಣೋತ್ಸವ ಜರುಗಲಿದೆ. 3 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು, ಸ್ಮರಣಿಕೆ ಒಳಗೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.