ಸರ್ಕಾರದಿಂದ ಜಯಂತಿ ಆಚರಣೆ ಸಲ್ಲ: ಪಂಡಿತಾರಾಧ್ಯ ಶ್ರೀ
Team Udayavani, Oct 8, 2017, 12:34 PM IST
ದಾವಣಗೆರೆ: ಸರ್ಕಾರ ಸಾಧಕರು, ದಾರ್ಶನಿಕರು, ಮಹಾನ್ ಪುರುಷರ ಜಯಂತಿ ಆಚರಣೆ ಮನೋಧೋರಣೆ ಬಿಟ್ಟು, ಸಾರ್ವಜನಿಕರೇ ಆಚರಣೆ ಮಾಡುವಂತಾಗಬೇಕೆಂದು
ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಗಾಂಧಿನಗರದ ರುದ್ರಭೂಮಿಯಲ್ಲಿ ಶನಿವಾರ ಡಾ| ಬಿ.ಆರ್. ಅಂಬೇಡ್ಕರ್ ಸಂಘ, ಡಾ| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಯುವ ಸೇನೆ ಮತ್ತು ಗಾಂಧಿನಗರದ ಮುಖಂಡರ ಆಶ್ರಯದಲ್ಲಿ ಹಮ್ಮಿಕೊಂಡ 4ನೇ ವರ್ಷದ ಸತ್ಯ ಹರಿಶ್ಚಂದ್ರ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರೇ ಮಹಾನ್ ಸಾಧಕರ, ದಾರ್ಶನಿಕರ ಜಯಂತಿಯನ್ನು ಪ್ರೀತಿ, ಗೌರವಗಳಿಂದ ಆಚರಿಸುವಂತಾಗಬೇಕು ಎಂದರು.
ಸತ್ಯಹರಿಶ್ಚಂದ್ರ ಸತ್ಯ ಪಾಲನೆಗಾಗಿ ರಾಜ್ಯ ತೊರೆದು, ಹೆಂಡತಿ, ಮಗನನ್ನು ಮಾರಾಟ ಮಾಡಿದ. ತಾನೂ ಸಹ ಸ್ಮಶಾನ ಕಾಯುವ ಸ್ಥಿತಿ ತಂದುಕೊಂಡ. ಆದರೂ ಸತ್ಯ ಬಿಡಲಿಲ್ಲ. ಇದೇ ರೀತಿ ಎಲ್ಲರೂ ಜೀವನದಲ್ಲಿ ಏನೇ ಕಷ್ಟ ಬಂದರೂ ಸತ್ಯದಿಂದಲೇ ಹೋರಾಟ ಮಾಡಬೇಕು. ಹರಿಶ್ವಚಂದ್ರರ ಆದರ್ಶಗಳನ್ನು ಪ್ರತಿಯೊಬ್ಬರು ಆಳವಡಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ರಾಜ್ಯ ಸರ್ಕಾರವೇ ಜನರಿಗೆ ಎಲ್ಲಾ ಭಾಗ್ಯ ನೀಡುತ್ತಿರುವುದರಿಂದ ಇದೀಗ ಜನರು ದುಡಿಯುವುದು ಭಾಗ್ಯ ಎಂಬುದನ್ನೇ ಮರೆತಿದ್ದಾರೆ. ಜನ, ಸರ್ಕಾರ ಎರಡೂ ಬದಲಾಗಬೇಕಿದೆ. ಬಸವಣ್ಣ ಹೇಳಿದಂತೆ ಕಾಯಕವೇ ಕೈಲಾಸ ಎಂಬುದನ್ನು ಅರಿತು ಬದಕುಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಎಲ್ಲಾ ಜಾತಿ, ಜನಾಂಗದ ಮಹಾನ್ ಪುರುಷರ ಜಯಂತಿ ಆಚರಣೆ ಮಾಡುತ್ತಾ ಹೋದರೆ ವರ್ಷದ 365 ದಿನಗಳು ಬೇಕಾಗುತ್ತದೆ. ಈಗಾಗಲೇ 150ರಿಂದ 160 ಜಯಂತಿ ಆಚರಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಜಯಂತಿ ಆಚರಣೆಗೆ ರಜೆ ನೀಡುವುದನ್ನು ನಿಲ್ಲಿಸಬೇಕಿದೆ ಎಂದರು.
ಮೇಯರ್ ಅನಿತಾಬಾಯಿ, ಕಾಂಗ್ರೆಸ್ ಮುಖಂಡ ಎನ್.ಜಿ. ಪುಟ್ಟಸ್ವಾಮಿ, ಸತ್ಯಹರಿಶ್ಚಂದ್ರ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಬಿ.ಎಚ್. ವೀರಭದ್ರಪ್ಪ, ಎಸ್.ಪಿ. ದುಗ್ಗಪ್ಪ, ಪಾಲಿಕೆ ಸದಸ್ಯರಾದ ದಿನೇಶ್ ಕೆ. ಶೆಟ್ಟಿ, ಎಂ. ಹಾಲೇಶ್ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.