ದಳಪತಿಗಳಿಂದ ಅಣಕು ಶವಯಾತ್ರೆ
Team Udayavani, May 18, 2018, 4:36 PM IST
ಹುಬ್ಬಳ್ಳಿ: ವಿದ್ಯುನ್ಮಾನ ಮತಯಂತ್ರದಲ್ಲಿ ದೋಷ ಹಾಗೂ ರಾಜ್ಯಪಾಲರ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ರಾಜ್ಯಪಾಲರ ಪ್ರತಿಕೃತಿ ದಹಿಸಿದರು.
ಇಲ್ಲಿನ ಬಸವವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ರಾಜ್ಯಪಾಲ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು. ರಾಜ್ಯಪಾಲರು ಸಂವಿಧಾನ ಉಲ್ಲಂ ಸಿದ್ದಾರೆಂದು ಆರೋಪಿಸಿ ರಾಜ್ಯಪಾಲರ ಪ್ರತಿಕೃತಿ ದಹಿಸಿದರು. ಅಲ್ಲಿಂದ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹು-ಧಾ ಕೇಂದ್ರ ವಿಧಾನಸಭ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ರಾಜಣ್ಣ ಕೊರವಿ ಮಾತನಾಡಿ, ಚುನಾವಣಾ ಆಯೋಗ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಕೇಂದ್ರ ಸರಕಾರದ ತಾಳಕ್ಕೆ ತಕ್ಕಂತೆ ಚುನಾವಣೆ ಮಾಡಲಾಗಿದೆ. ಇವಿಎಂ ಮತಯಂತ್ರದಲ್ಲಿ ದೋಷ ಕುರಿತು ಹಿಂದಿನಿಂದಲೂ ಆರೋಪಗಳು ಕೇಳಿ ಬರುತ್ತಿವೆ. ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮತಯಂತ್ರದ ದೋಷ ಕಂಡು ಬಂದಿದ್ದು, ಮತಪತ್ರಗಳ ಮೂಲಕ ಮತ್ತೊಮ್ಮೆ ಚುನಾವಣೆ ನಡೆಯಬೇಕು ಎಂದರು.
ಬಹುಮತವಿರದ ಬಿಜೆಪಿಗೆ ಸರಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿರುವುದು ಸಂವಿಧಾನ ಬಾಹಿರ. ಬಹುಮತ ಹೊಂದಿರುವ ಕಾಂಗ್ರೆಸ್ -ಜೆಡಿಎಸ್‌ಗೆ ಅವಕಾಶ ನೀಡಬೇಕಿತ್ತು. ಆದರೆ ದೇಶದ ಇತರೆ ರಾಜ್ಯಗಳಲ್ಲಿ ನಡೆಯುತ್ತಿದ್ದ ನಿರಂಕುಶ ಪ್ರಭುತ್ವ ರಾಜ್ಯದಲ್ಲಿ ಆರಂಭವಾಗುತ್ತಿದ್ದು, ಬಿಜೆಪಿಯಿಂದ ಮತ್ತೆ ಕೆಟ್ಟ ಸಂಪ್ರದಾಯ ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಮುಖಂಡರಾದ ನಾಗನಗೌಡ ಪಾಟೀಲ, ನವೀನ ಮುನಿಯಪ್ಪನವರ, ಅಫ್ರೆಜ್ ಮಂಚಿಕೊಪ್ಪ, ರವೀಂದ್ರ ಕಟ್ಟಿಮನಿ, ವಿನಾಯಕ ಗಾಡಿವಡ್ಡರ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.