ಜೆಡಿಎಸ್‌ ಅಹೋರಾತ್ರಿ ಧರಣಿ ಅಂತ್ಯ


Team Udayavani, Apr 5, 2017, 1:06 PM IST

dvg2.jpg

ದಾವಣಗೆರೆ: ಅಶೋಕ ಚಿತ್ರಮಂದಿರದ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾ ಯುವ ಜಾತ್ಯತೀತ ಜನತಾದಳದ ಕಾರ್ಯಕರ್ತರು 16 ದಿನದಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಮಂಗಳವಾರ ಮುಕ್ತಾಯಗೊಂಡಿತು. ರೈಲ್ವೆ ಮೇಲ್ಸೇತುವೆ ನಿರ್ಮಾಣ ಕುರಿತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೊಂದಿಗೆ ಚರ್ಚೆ ನಡೆಸಿದ್ದು, ಜಿಲ್ಲಾಡಳಿತಕ್ಕೆ ಪತ್ರ ಬರೆಯುವ ಮುಖೇನ ಒತ್ತಡ ಹೇರಿದ್ದಾರೆ.

ಜಿಲ್ಲಾಡಳಿತ ರೈಲ್ವೆ ಮೇಲ್ಸೇತುವೆ ಇತರೆ ಪರ್ಯಾಯ ವ್ಯವಸ್ಥೆಯ ಭರವಸೆ ನೀಡಿದ್ದರ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಯನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ಯುವ ಜೆಡಿಎಸ್‌ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾಖಾನ್‌ ಘೋಷಿಸಿದರು. ಇದಕ್ಕೂ ಮುನ್ನ ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಬಾಬು, ತಾವು ದಾವಣಗೆರೆಗೆ ಹಲವಾರು ಬಾರಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಶೋಕ ಚಿತ್ರಮಂದಿರ ರೈಲ್ವೆ ಗೇಟ್‌ನ ಸಮಸ್ಯೆಯ ಬಗ್ಗೆ ಅಷ್ಟಾಗಿ ಗಮನಕ್ಕೆ ಬಂದಿರಲಿಲ್ಲ.

ಯುವ ಜನತಾದಳ ಕಾರ್ಯಕರ್ತರು ಅಹೋರಾತ್ರಿ ಧರಣಿ ಕೈಗೊಂಡ ನಂತರ ಇಲ್ಲಿನ ಸಮಸ್ಯೆಗಳು ತಿಳಿದವು. ಕಳೆದ 3-4 ದಶಕದಿಂದ ನನೆಗುದಿಗೆ ಬಿದ್ದಿರುವ, ಸುಗಮ ಸಂಚಾರಕ್ಕೆ ತೀರಾ ತುರ್ತಾಗಿರುವ ಮೇಲ್ಸೇತುವೆ ಇಲ್ಲವೇ ಪರ್ಯಾಯ ವ್ಯವಸ್ಥೆ ಆಗಲೇಬೇಕು ಎಂದರು. ಅತಿ ಪ್ರಮುಖ ಸ್ಥಳದಲ್ಲಿ ರೈಲ್ವೆ ಗೇಟ್‌ ಇದೆ. ಪ್ರತಿ ದಿನ 40ಕ್ಕೂ ಅಧಿಕ ರೈಲುಗಳು ಸಂಚರಿಸುತ್ತಿವೆ. ಪ್ರತಿ ಬಾರಿ ಗೇಟ್‌ ಹಾಕಿದಾಗ ಬಿಸಿಲು, ಮಳೆ ಎನ್ನದೆ ಸಾರ್ವಜನಿಕರು ಕಾಯಲೇಬೇಕಾಗುತ್ತದೆ.

ತೀರಾ ತುರ್ತು ಪರಿಸ್ಥಿತಿಯಲ್ಲಿದ್ದವರಂತೂ ಇನ್ನೂ ಸಮಸ್ಯೆ ಅನುಭವಿಸಬೇಕಾಗುತ್ತದೆ. ಮೇಲ್ಸೇತುವೆ ನಿರ್ಮಾಣಕ್ಕೆ ಕಳೆದ 3 ವರ್ಷದ ಹಿಂದೆಯೇ 35 ಕೋಟಿ ಅನುದಾನ ಮಂಜೂರಾಗಿದ್ದರೂ ಕೆಲಸ ಯಾವ ಕಾರಣಕ್ಕೆ ಪ್ರಾರಂಭವಾಗಿಲ್ಲ ಎಂಬುದು ಗೊತ್ತಾಗದ ಕಾರಣ  ಯುವ ಜೆಡಿಎಸ್‌ ಕಾರ್ಯಕರ್ತರು ಹಮ್ಮಿಕೊಂಡ ಅಹೋರಾತ್ರಿ ಹೋರಾಟಕ್ಕೆ ಸಾರ್ವಜನಿಕರು ಸ್ಪಂದಿಸಿದರು. 60 ಸಾವಿರ ಜನರು ಮೇಲ್ಸೆತುವೆ ಆಗಬೇಕು ಎಂದು ಸಹಿ ಸಹ ಮಾಡಿದ್ದಾರೆ. 

ಅಂತಿಮವಾಗಿ ಸಂಬಂಧಿತ ಸಚಿವರು, ಜಿಲ್ಲಾಡಳಿತ ಸ್ಪಂದಿಸಿದೆ ಎಂದು ತಿಳಿಸಿದರು. ಯುವ ಜೆಡಿಎಸ್‌ ಕಾರ್ಯಕರ್ತರು ಹಮ್ಮಿಕೊಂಡ ಅಹೋರಾತ್ರಿ ಹೋರಾಟದ ಸ್ಥಳಕ್ಕೆ ಖುದ್ದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಾ. 31 ರಂದು ಭೇಟಿ ನೀಡಿದ್ದಲ್ಲದೆ ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಜಿಲ್ಲಾಡಳಿತಕ್ಕೆ ಖುದ್ದು ಪತ್ರವನ್ನೂ ಬರೆದಿದ್ದನ್ನು ತಾವೇ ಇಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದೇನೆ. 

ರಾಜ್ಯ ಸರ್ಕಾರ, ಜಿಲ್ಲಾ ಸಚಿವರು, ಜಿಲ್ಲಾಡಳಿತ ಹೋರಾಟಕ್ಕೆ ಸ್ಪಂದಿಸಿ, ರೈಲ್ವೆ ಮೇಲ್ಸೇತುವೆ ಇತರೆ ಪರ್ಯಾಯ ವ್ಯವಸ್ಥೆಯ ಭರವಸೆ ನೀಡಿರುವುದು ಹೋರಾಟಕ್ಕೆ ಸಂದ ಜಯ ಎಂದು ಹೇಳಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ರಾಜ್ಯ ಅಧ್ಯಕ್ಷ ಕುಮಾರಸ್ವಾಮಿ ಮನವಿ ಹಾಗೂ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಹೋರಾಟ ನಿಲ್ಲಿಸಲಾಗುತ್ತಿದೆ. ಒಂದೊಮ್ಮೆ ರೈಲ್ವೆ ಮೇಲ್ಸೇತುವೆ ಇತರೆ ಪರ್ಯಾಯ ವ್ಯವಸ್ಥೆ ಆದಷ್ಟು ಬೇಗ ಆಗದೇ ಹೋದಲ್ಲಿ ಮತ್ತೆ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. 

ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಮಹಮ್ಮದ್‌ ಗೌಸ್‌, ಎಚ್‌.ಸಿ. ಗುಡ್ಡಪ್ಪ, ಅನೀಸ್‌ ಪಾಷಾ, ಟಿ. ಗಣೇಶ್‌, ಕೆ. ಮಂಜುಳಾ, ಟಿ.  ಅಜರ್‌, ಖಾದರ್‌ ಬಾಷಾ, ಶ್ರೀನಿವಾಸ್‌, ಸೈಯದ್‌ ರಸೂಲ್‌ಸಾಬ್‌, ದಾದಾಪೀರ್‌, ಕಡತಿ ಅಂಜಿನಪ್ಪ, ಗೋಣಿವಾಡ ಮಂಜುನಾಥ್‌, ಶಬೀºರ್‌ಸಾಬ್‌, ಜಿಕ್ರಿಯಾಸಾಬ್‌,  ಬಾತಿ ಶಂಕರ್‌, ಬಾಷಾಸಾಬ್‌, ಸುಲೇಮಾನ್‌ ಇದ್ದರು.  

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.