ಕಾಂಗ್ರೆಸ್‌ನಿಂದ ಶೋಷಿತರಿಗೆ ನ್ಯಾಯ
Team Udayavani, Jul 18, 2017, 1:31 PM IST
ಹರಪನಹಳ್ಳಿ: ಶತಶತಮಾನಗಳಿಂದ ಶೋಷಣೆ ಕುಲುಮೆಯಲ್ಲಿ ಬಸವಳಿದಿರುವ ಶೋಷಿತ ಸಮುದಾಯಗಳಿಗೆ ಕಾಂಗ್ರೆಸ್
ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ದೊರಕಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಚಂದ್ರಶೇಖರಭಟ್ ಹೇಳಿದರು.
ಪಟ್ಟಣದಲ್ಲಿ ಮಾದಿಗ ಸಮಾಜ ಸೇರಿದಂತೆ ವಿವಿಧ ದಲಿತ ಸಮುದಾಯಗಳ ಮುಖಂಡರಿಂದ ಕೆಪಿಸಿಸಿ ನೂತನ ರಾಜ್ಯ ಪ್ರಧಾನ
ಕಾರ್ಯದರ್ಶಿಯಾಗಿ ನೇಮಕವಾದ ಹಿನ್ನಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೆಳಸ್ತರದಲ್ಲಿದ್ದ ಸಮುದಾಯಗಳಿಗೆ ಸಂವಿಧಾನದ ಅಶಯದಂತೆ ಕಾಂಗ್ರೆಸ್ ಪಕ್ಷ ಸಕಲ ಸೌಲಭ್ಯವನ್ನು ಕಲ್ಪಿಸಿ ಅವರ ಜೀವನ ಸುಧಾರಿಸುವಲ್ಲಿ ಬಹುಮುಖ್ಯ
ಪಾತ್ರವಹಿಸಿದೆ ಎಂದರು.
ತುಘಲಕ್ ಸರ್ಕಾರದಂತೆ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಪ್ರತೀ ದಿನ ಹೊಸ ಹೊಸ ಘೋಷಣೆ ಮಾಡುವ ಮೂಲಕ
ಜನರನ್ನು ಗೊಂದಲಕ್ಕೆ ಸಿಕ್ಕಿಸುತ್ತಿದೆ. ಸರ್ಕಾರದ ನಿರ್ಣಯದಿಂದ ಜನರು ಶೋಷಣೆಗೊಳಗಾಗುತ್ತಿದ್ದಾರೆ. ತನ್ನ ಹೊಸ ನೀತಿಗಳ ಮೂಲಕ ಸರ್ಕಾರ ವಿಫಲವಾಗುತ್ತಿದ್ದು, ಸರ್ಕಾರ ಆದೇಶದಿಂದಾಗಿ ಜನರು ಬೇಸರಗೊಂಡಿದ್ದಾರೆ ಎಂದು ತಿಳಿಸಿದರು. ಮಾದಿಗ ಮಹಾಸಭಾದ ಅಧ್ಯಕ್ಷ ಯರಬಳ್ಳಿ ಆರ್.ಹನುಮಂತಪ್ಪ, ತಾಪಂ ಸದಸ್ಯರಾದ ಹುಲಿಕಟ್ಟಿ ಚಂದ್ರಪ್ಪ, ಓ.ರಾಮಪ್ಪ ಮಾತನಾಡಿದರು.
ಮುಖಂಡರಾದ ಡಿ.ರಾಜಕುಮಾರ್, ಪುಣಬಗಟ್ಟ ನಿಂಗಪ್ಪ, ಕಾನಹಳ್ಳಿ ರುದ್ರಪ್ಪ, ಲಕ್ಷಣ ಜಾದವ್, ಯು.ನರಸಿಂಗ್ ರಾವ್, ಬಾವಿಕಟ್ಟಿ ಭರಮಪ್ಪ, ಮೇಘರಾಜ್, ಪ್ರಕಾಶ್, ಕೊರಚರ ಸಮಾಜದ ಮುಖಂಡ ಆಶೋಕ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.