Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು
ಸ್ಚಚ್ಚಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ಯಾರೆ ಎನ್ನದ ಅಧಿಕಾರಿಗಳು
Team Udayavani, Jun 16, 2024, 3:52 PM IST
ಕಂದಗಲ್ಲ: ಇಳಕಲ್ಲ ತಾಲೂಕಿನ ಇಂಗಳಗಿ ಗ್ರಾಮದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಸರಕಾರಿ ಶಾಲೆಯ ಆವರಣ ಮುಂದೆ ಮಳೆ ನೀರು ನಿಂತು ಅದು ಸಂಪೂರ್ಣವಾಗಿ ಮಲೀನಗೊಂಡು ಗಬ್ಬೆದು ನಾರುತ್ತಿದ್ದರಿಂದ ಅಲ್ಲಿನ ನಿವಾಸಿಗಳು ನರಕಯಾತನೆಯಲ್ಲಿ ಜೀವನ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ದಿನನಿತ್ಯ ನೂರಾರು ಮಕ್ಕಳು ಅಲ್ಲಿ ಆಟ ಆಡುತ್ತಾರೆ. ನಿಂತ ಮಲೀನ ನೀರಿನಲ್ಲಿಯೇ ಆಟ ಆಡುತ್ತಿದ್ದರಿಂದ ಮಕ್ಕಳಿಗೆ ರೋಗ ರುಜಿನಗಳು ಬರುವ ಭಯದಲ್ಲಿ ಮಕ್ಕಳ ಪಾಲಕರು ಹೆದರುತ್ತಿದ್ದಾರೆ.
ಅಲ್ಲಿನ ಸಾರ್ವಜನಿಕರು ಎರಡು ವರ್ಷಗಳಿಂದ ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಗೊರಬಾಳ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಿದರೂ ಇದರತ್ತ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳಾದ ಶಿವುಕುಮಾರ ಬೆಳ್ಳಿಹಾಳ, ರಮೇಶ ನಾಗರಾಳ, ಶಿವಪುತ್ರಯ್ಯ ಮಠಪತಿ, ಶರತಕುಮಾರ ಲೋಕಾಪೂರ ತಮ್ಮ ನೋವನ್ನು ತೋಡಿಕೊಂಡರು.
ಸರಕಾರ ಸ್ವಚ್ಚತೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಸ್ಚಚ್ಚತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದರೂ ಇಲ್ಲಿ ಮಾತ್ರ ಸ್ವಚ್ಚತೆ ಎನ್ನುವುದೇ ಏನು ಎಂಬಂತೆ ಇದೆ.
ಸ್ಥಳೀಯ ಅಧಿಕಾರಿಗಳು ಗಮನ ಹರಿಸದ ಕಾರಣ ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ಜೂನ್ 6 ರಂದು ಗ್ರಾಮದ ಸಮಸ್ಯೆ ಪರಿಹರಿಸುವಂತೆ ಮನವಿ ನೀಡಿದ್ದಾರೆ. ಈ ಸಮಸ್ಯೆ ಪರಿಹರಿಸದೇ ಹೋದರೆ ಗ್ರಾಮದ ಜನರು ಉಗ್ರ ಪ್ರತಿಭಟನೆ ಮಾಡಲಾಗವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಗ್ರಾಮದ ಜನರು ನೋವನ್ನು ತೋಡಿಕೊಂಡಿದ್ದರಿಂದ ಗೊರಬಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಎ.ದಖನಿ ವಿಚಾರಿಸಿದಾಗ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಿ ಬಂದಿದ್ದೇನೆ ಒಂದು ವಾರದ ಒಳಗಡೆ ಸಮಸ್ಯೆಯನ್ನು ಬಗೆಹರಿಸುವುದಾಗಿ ಅವರು ತಿಳಿಸಿದ್ದಾರೆ.
ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಗ್ರಾಮಕ್ಕೆ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ ಗೊರಬಾಳ ಗ್ರಾಮ ಪಂಚಾಯತಿಗೆ ಅಲೆದಾಡಿ ಅಲೆದಾಡಿ ಸಾಕಾಗಿದೆ. – ಶಿವು ಬೆಳ್ಳಿಹಾಳ ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.