ಕಿರುತೆರೆ ಕಲಾವಿದರಿಬ್ಬರ ಸಾವು
Team Udayavani, May 25, 2018, 7:50 AM IST
ಹರಿಹರ: ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ಕಲಾವಿದರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಟಿವಿ
ನಿರೂಪಕ ಚಂದನ್ ಯಾನೆ ಚಂದ್ರಶೇಖರ (42), ಗಾಯಕಿ ಸಂತೋಷಿ (36) ಮೃತರು.
ಬೆಳಗಾವಿ ಜಿಲ್ಲೆ ಬೈಲಹೊಂಗಲದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇವರು ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದರು. ಬುಧವಾರ ರಾತ್ರಿ 2-30ರ ಸುಮಾರಿಗೆ ಹನಗವಾಡಿ ಕ್ರಾಸ್ ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದೆ. ಕಾರಿನ ಹಿಂಬದಿಯಲ್ಲಿ ಕುಳಿತಿದ್ದ ಚಂದನ್ ಹಾಗೂ ಸಂತೋಷಿ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತ ಪಟ್ಟರು.
ಕಾರು ಚಲಾಯಿಸುತ್ತಿದ್ದ ರಾಮಕೃಷ್ಣ ಹಾಗೂ ಪಕ್ಕದಲ್ಲಿ ಕುಳಿತಿದ್ದ ಅವರ ಪತ್ನಿ ಸುನಿತಾ ಗಾಯ ಗೊಂಡಿದ್ದಾರೆ.
ಇವರನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು, ಲಾರಿಯ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ತಕ್ಷಣ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಹಾಗೂ ಮುಂದಿನ ಆಸನಗಳು ಕೆಳಮಟ್ಟದಲ್ಲಿದ್ದರಿಂದ ಮುಂದೆ ಕುಳಿತವರು ಬದುಕುಳಿದಿದ್ದಾರೆ. ಹಿಂದಿನ ಆಸನಗಳಲ್ಲಿ ಕುಳಿತವರ ತಲೆಗೆ ಲಾರಿಯ ಬಾಡಿಯ ಹೊಡೆತ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.ಗುರುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಮೃತದೇಹಗಳನ್ನು ಬೆಂಗಳೂರಿಗೆ ಕೊಂಡೊಯ್ಯಲಾಯಿತು. ಚಿಕ್ಕಬಳ್ಳಾಪುರ ಮೂಲದ ಚಂದನ್,ಮೊದಲಿಗೆ ಈ ಟಿವಿ ಕನ್ನಡದಲ್ಲಿ “ನಮ್ ಊನ್ಯಾìಗೆಎಂಬ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ನಂತರ ಉದಯ ಟಿವಿಯಲ್ಲಿ ನಿರೂಪಕರಾಗಿದ್ದ ಚಂದನ್, ತಮ್ಮ ವಿಭಿನ್ನ ನಿರೂಪಣೆ ಮೂಲಕ ಮನೆಮಾತಾದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.