ಕಿಸಾನ್‌ ಸಮ್ಮಾನ್‌ ಸಮೇಳನ ವೀಕ್ಷಿಸಿದ ರೈತ ಬಾಂಧವರು

ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.

Team Udayavani, Oct 18, 2022, 5:46 PM IST

ಕಿಸಾನ್‌ ಸಮ್ಮಾನ್‌ ಸಮೇಳನ ವೀಕ್ಷಿಸಿದ ರೈತ ಬಾಂಧವರು

ದಾವಣಗೆರೆ: ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಆಯೋಜನೆಗೊಂಡಿದ್ದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಸಮೇಳನ ಉದ್ಘಾಟನೆಯನ್ನು ಐಸಿಎಆರ್‌-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ನೇರ ಪ್ರಸಾರದ ಮೂಲಕ ರೈತರಿಗೆ ತೋರಿಸಲಾಯಿತು.

ದಾವಣಗೆರೆಯ ವಿವಿಧ ಗ್ರಾಮಗಳಿಂದ 150ಕ್ಕೂ ಹೆಚ್ಚು ರೈತರ ಹಾಗೂ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ, ವೀಕ್ಷಣೆ ಮಾಡಿದರು. ಇಂದು ಪ್ರಧಾನಮಂತ್ರಿಗಳು ದೇಶದ ವಿವಿಧ ಭಾಗಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಿಂದ ಒಂದು ಕೋಟಿಗೂ ಹೆಚ್ಚು ರೈತರಿಗೆ ವಿವಿಧ ರೈತ ಕಲ್ಯಾಣ ಯೋಜನೆಗಳನ್ನು ಅನಾವರಣಗೊಳಿಸಿದರು.

ಅವುಗಳಲ್ಲಿ ಮುಖ್ಯವಾಗಿ ರೈತರಿಗೆ 12ನೇ ಆವರ್ತದ 16,000ರೂ. ಕೋಟೆ ಕಿಸಾನ್‌ ಸಮ್ಮಾನ್‌ ನಿಧಿ ಬಿಡುಗಡೆ, ಕೃಷಿ ಸ್ಟಾರ್ಟ್‌ ಅಪ್‌ ಯೋಜನೆ ಉದ್ಘಾಟನೆ, 600ಪ್ರಧಾನಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರಗಳ ಉದ್ಘಾಟನೆ, ಒಂದು ದೇಶ ಒಂದು ಗೊಬ್ಬರ ಯೋಜನೆ ಹಾಗೂ ಅಂತಾರಾಷ್ಟ್ರೀಯ ರಸಗೊಬ್ಬರ ಈ ಪ್ರತಿಕೆ ಬಿಡುಗಡೆ ಅನಾವರಣಗೊಳಿಸಲಾಯಿತು. ತರಳಬಾಳು ಕೇಂದ್ರದಲ್ಲಿ ಈ ಕಾರ್ಯಕ್ರಮಕ್ಕೂ ಮುನ್ನ 2022ರ ವಿಶ್ವ ಆಹಾರ ದಿನ ಆಚರಿಸಲಾಯಿತು.

ಕೃಷಿ ಉಪನಿದೇರ್ಶಕ ತಿಪ್ಪೇಸ್ವಾಮಿ ಆರ್‌. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ, ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.

ಸಭೆಯ ಅಧ್ಯಕ್ಷತೆವಹಿಸಿದ್ದ ಡಾ| ಜಯದೇವಪ್ಪ ಜಿ.ಕೆ., ವಿಶ್ವ ಆಹಾರ ದಿನಾಚರಣೆ ಹಾಗೂ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಡಾ| ಅವಿನಾಶ್‌ ಟಿ.ಜಿ. ಜೈವಿಕ ಗೊಬ್ಬರಗಳು ಮತ್ತು ಪೀಡೆನಾಶಕಗಳ ಕುರಿತು ಮಾಹಿತಿ ನೀಡಿದರು. ಮಣ್ಣು ವಿಜ್ಞಾನಿ ಹೆಚ್‌.ಎಂ. ಸಣ್ಣಗೌಡರ ಮಣ್ಣು ಆರೋಗ್ಯ ಮತ್ತು ನಮ್ಮ ಆರೋಗ್ಯ ವಿಚಾರವಾಗಿ ರೈತರಿಗೆ ಉಪನ್ಯಾಸ ನೀಡಿದರು. ರೈತ ಮುಖಂಡರಾದ ಆವರಗೆರ ರುದ್ರಮುನಿ ಮತ್ತು ಕುಂದೂರು ಮಂಜಪ್ಪನವರು ಭಾಗವಹಿಸಿ ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.

ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿಯೂ ಪ್ರಧಾನ ಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರಉದ್ಘಾಟನೆ, ಒಂದು ರಾಷ್ಟ್ರ, ಒಂದು ರಸಗೊಬ್ಬರ ಪ್ರಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಕಾರ್ಯಕ್ರಮ ಉದ್ಘಾಟಿಸುವುದನ್ನು ನೇರ ಪ್ರಸಾರದ ಮೂಲಕ ರೈತರಿಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಇಫೋR ಕ್ಷೇತ್ರ ಅಧಿಕಾರಿ ರಾಜೇಂದ್ರಪ್ರಸಾದ್‌ ಎಸ್‌., ಕೃಷಿ ಅಧಿಕಾರಿ ಚಂದ್ರಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀದೇವಿ, ಪಾಲಾಕ್ಷಪ್ಪ, ಡಿ.ಎಂ. ಪ್ರಕಾಶ್‌ ಇನ್ನಿತರರು ಕಾರ್ಯಕ್ರಮದಲ್ಲಿದ್ದರು. ಕುಕ್ಕುವಾಡ ಮತ್ತು ಸುತ್ತ ಮುತ್ತಲಿನ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.